ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜಯಾ ಅರ್ಜಿ ವಿಚಾರಣೆ, ಕಾನೂನು ಇಲಾಖೆಯ ಮಹತ್ವದ ಸಭೆ

By ವಿಕಾಸ್ ನಂಜಪ್ಪ
|
Google Oneindia Kannada News

ಬೆಂಗಳೂರು, ಜನವರಿ 28 : ಜಯಲಲಿತಾ ಅಕ್ರಮ ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕದ ಕಾನೂನು ಇಲಾಖೆ ಎರಡು ಮಹತ್ವದ ಸಭೆಗಳನ್ನು ನಡೆಸಿದೆ. ಜಯಯಲಿತಾ ಖುಲಾಸೆ ಪ್ರಶ್ನಿಸಿ ಕರ್ನಾಟಕ ಸರ್ಕಾರ ಸಲ್ಲಿಸಿರುವ ಮೇಲ್ಮನವಿ ಅರ್ಜಿಯ ವಿಚಾರಣೆ ಫೆ.2ರಿಂದ ಸುಪ್ರೀಂಕೋರ್ಟ್‌ನಲ್ಲಿ ನಡೆಯಲಿದೆ.

ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಜಯಲಲಿತಾ, ಜಯಲಲಿತಾ ಆಪ್ತೆ ಶಶಿಕಲಾ ನಟರಾಜನ್, ಇಳವರಸಿ ಮತ್ತು ಸುಧಾಕರನ್ ಅವರನ್ನು ದೋಷಮುಕ್ತ ಗೊಳಿಸಿರುವ ಕರ್ನಾಟಕ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಕರ್ನಾಟಕ ಸರ್ಕಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ. [ಜಯಲಲಿತಾ ಅಕ್ರಮ ಆಸ್ತಿ ಕೇಸ್ : ಕೋರ್ಟ್ ತೀರ್ಪಿನ ತಪ್ಪುಗಳು]

jayalalithaa

ಜಯಲಲಿತಾ ಪ್ರಕರಣದಲ್ಲಿ ಸುಪ್ರೀಂಕೋರ್ಟ್‌ನಲ್ಲಿ ಮಾಡಬೇಕಾಗಿರುವ ವಾದದ ಬಗ್ಗೆ ಕಾನೂನು ಇಲಾಖೆ ಎರಡು ಮಹತ್ವದ ಸಭೆಗಳನ್ನು ನಡೆಸಿದೆ. ಕರ್ನಾಟಕ ಹೈಕೋರ್ಟ್ ನೀಡಿರುವ ತೀರ್ಪುಗಳಲ್ಲಿ ತಪ್ಪಿಗಳಿವೆ ಎಂದು ಕರ್ನಾಟಕ ತನ್ನ ವಾದ ಮಂಡನೆಯನ್ನು ಆರಂಭಿಸಲಿದೆ. [ಜಯಾ ಪ್ರಕರಣದ timeline]

ವಿಶೇಷ ಸರ್ಕಾರಿ ಅಭಿಯೋಜಕ ಬಿ.ವಿ.ಆಚಾರ್ಯ ಮತ್ತು ಹಿರಿಯ ವಕೀಲ ದುಷ್ಯಂತ್ ದೇವ್ ಅವರು ಸುಪ್ರೀಂಕೋರ್ಟ್‌ನಲ್ಲಿ ಕರ್ನಾಟಕ ಸರ್ಕಾರದ ಪರವಾಗಿ ವಾದ ಮಂಡನೆ ಮಾಡಲಿದ್ದಾರೆ. ಬಿ.ವಿ.ಆಚಾರ್ಯ ಅವರು ಜಯಲಲಿತಾಗೆ ಸಂಬಂಧಿಸಿದ ಪ್ರಕರಣದಲ್ಲಿ ವಾದ ಮಾಡಲಿದ್ದು, ದುಷ್ಯಂತ್ ದೇವ್ ಅವರು ಶಶಿಕಲಾ ನಟರಾಜನ್, ಇಳವರಸಿ ಮತ್ತು ಸುಧಾಕರನ್ ಅವರ ಪ್ರಕರಣದ ವಾದ ಮಂಡಿಸಲಿದ್ದಾರೆ. [ಜಯಲಲಿತಾ ಅಕ್ರಮ ಆಸ್ತಿ ಕೇಸ್ : ಕರ್ನಾಟಕದ ವಾದವೇನು?]

ಜಯಲಲಿತಾ ಅವರ ವಿರುದ್ಧ ಅಕ್ರಮ ಆಸ್ತಿಗಳಿಕೆ ದೂರು ನೀಡಿದ್ದ ಬಿಜೆಪಿ ಸುಬ್ರಮಣ್ಯ ಸ್ವಾಮಿ ಅವರು ಸಹ, ಕೋರ್ಟ್‌ಗೆ ಪ್ರತಿವಾದಿಯಾಗಿ ಪರಿಗಣಿಸುವಂತೆ ಕೋರಿ ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ. ಡಿಎಂಕೆ ನಾಯಕ ಅನ್ಬಳಗನ್ ಅವರು ಕರ್ನಾಟಕ ಹೈಕೋರ್ಟ್ ತೀರ್ಪು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ಈ ಅರ್ಜಿಯ ವಿಚಾರಣೆಯೂ ಕರ್ನಾಟಕ ಸರ್ಕಾರದ ಅರ್ಜಿಯೊಂದಿಗೆ ನಡೆಯಲಿದೆ.

ಜಯಲಲಿತಾ ಪರ ವಕೀಲರು ಕರ್ನಾಟಕ ಸರ್ಕಾರಕ್ಕೆ ಮೇಲ್ಮನವಿ ಸಲ್ಲಿಸಲು ಅವಕಾಶವಿಲ್ಲ ಎಂದು ಈಗಾಗಲೇ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಕರ್ನಾಟಕ ಸರ್ಕಾರದ ಅರ್ಜಿಯ ವಿಚಾರಣೆ ಸಂದರ್ಭದಲ್ಲಿಯೇ ಈ ಅರ್ಜಿಯ ವಿಚಾರಣೆಯೂ ನಡೆಯಲಿದೆ.

ಜಯಲಲಿತಾ ಅವರು ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ್ದ ಕರ್ನಾಟಕ ಹೈಕೋರ್ಟ್ ವಿಶೇಷ ಪೀಠದ ನ್ಯಾಯಮೂರ್ತಿ ಸಿ.ಆರ್.ಕುಮಾರಸ್ವಾಮಿ ಅವರು 2015ರ ಮೇ 11ರಂದು ತೀರ್ಪು ಪ್ರಕಟಿಸಿದ್ದರು. ಜಯಲಲಿತಾ ಸೇರಿದಂತೆ ಎಲ್ಲರನ್ನು ಖುಲಾಸೆಗೊಳಿಸಿದ್ದರು. ಇದನ್ನು ಪ್ರಶ್ನಿಸಿ ಕರ್ನಾಟಕ ಸರ್ಕಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ.

English summary
A crucial meeting was held in Karnataka ahead of the hearing of the J.Jayalalithaa disproportionate assets case in the Supreme Court on February 2. The meeting comprised those who have challenged the acquittal of the Tamil Nadu Chief Minister and three others. Karnataka had challenged in the Supreme Court the verdict of the Karnataka High Court which acquitted Jayalalithaa and three others in the disproportionate assets case.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X