ಕಲಬುರಗಿ : ಶೀಘ್ರದಲ್ಲೇ ಆರಂಭವಾಗಲಿದೆ ಜಯದೇವ ಆಸ್ಪತ್ರೆ

ಕಲಬುರಗಿ, ಅಕ್ಟೋಬರ್ 20 : ಪ್ರತಿಷ್ಠಿತ ಜಯದೇವ ಹೃದ್ರೋಗ ಸಂಸ್ಥೆ ಕಲಬುರಗಿಯಲ್ಲಿ ನಿರ್ಮಾಣ ಮಾಡುತ್ತಿರುವ ಆಸ್ಪತ್ರೆ ಐದು ತಿಂಗಳಿನಲ್ಲಿ ಕಾರ್ಯಾರಂಭ ಮಾಡಲಿದೆ. ಸುಮಾರು 15 ಕೋಟಿ ರೂ.ವೆಚ್ಚದಲ್ಲಿ 114 ಹಾಸಿಗೆಗಳ ಆಸ್ಪತ್ರೆ ನಿರ್ಮಾಣಗೊಳ್ಳುತ್ತಿದೆ.

ಜಯದೇವ ಆಸ್ಪತ್ರೆ ಕಾರ್ಯಾರಂಭ ಮಾಡಿದರೆ ಕೊಪ್ಪಳ, ಯಾದಗಿರಿ, ಬೀದರ್, ಕಲಬುರಗಿ ಸೇರಿದಂತೆ ಸುತ್ತ-ಮುತ್ತಲಿನ ಜಿಲ್ಲೆಗಳ ಜನರು ಬೆಂಗಳೂರಿಗೆ ಚಿಕಿತ್ಸೆಗಾಗಿ ಬರುವುದು ತಪ್ಪಲಿದೆ. ಕಲಬುರಗಿಯಲ್ಲಿನ ವೈದ್ಯಕೀಯ ಕಾಲೇಜು ಆವರಣದಲ್ಲಿ ಆಸ್ಪತ್ರೆ ನಿರ್ಮಾಣಗೊಳ್ಳುತ್ತಿದೆ. [ಕಲಬುರಗಿಯಲ್ಲಿ ನಿರ್ಮಾಣವಾಗಲಿದೆ ಜಯದೇವ ಆಸ್ಪತ್ರೆ]

kalaburagi

ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕರಾದ ಡಾ.ಸಿ.ಎನ್.ಮಂಜುನಾಥ್ ಅವರು ಈ ಕುರಿತು ಮಾಹಿತಿ ನೀಡಿದ್ದು, 'ಐದು ತಿಂಗಳಿನಲ್ಲಿ ಆಸ್ಪತ್ರೆ ನಿರ್ಮಾಣ ಕಾರ್ಯ ಪೂರ್ಣಗೊಳ್ಳಲಿದೆ. ಹೈದರಾಬಾದ್ ಕರ್ನಾಟಕ ಭಾಗಕ್ಕೆ ಉತ್ತಮ ಆರೋಗ್ಯ ಸೇವೆ ಒದಗಿಸಲು ಇದು ಸಹಕಾರಿಯಾಗಲಿದೆ' ಎಂದು ಹೇಳಿದ್ದಾರೆ. [ಕಲಬುರಗಿಯ ಆಸ್ಪತ್ರೆ ನೋಡಿ]

'ಈ ಆಸ್ಪತ್ರೆಗಳಿಗೆ ವೈದ್ಯರನ್ನು ನೇಮಕ ಮಾಡುವ ಕುರಿತು ನಾವು ಚಿಂತನೆ ನಡೆಸಿದ್ದೇವೆ. 5 ಕಾರ್ಡಿಯಾಲಜಿಸ್ಟ್, 4 ವೈದ್ಯರು, ಇಬ್ಬರು ಸರ್ಜನ್ ಮತ್ತು ಇಬ್ಬರು ಅರವಳಿಕೆ ತಜ್ಞರನ್ನು ಆಸ್ಪತ್ರೆಗೆ ನೇಮಕ ಮಾಡಲಾಗುತ್ತದೆ' ಎಂದು ಮಂಜುನಾಥ್ ಹೇಳಿದ್ದಾರೆ.

ಜಯದೇವ ಸಂಸ್ಥೆ ನಿರ್ಮಾಣ ಮಾಡುತ್ತಿರುವ ಈ ಆಸ್ಪತ್ರೆಗೆ ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ ಹಾಗೂ ಹೈದರಾಬಾದ್‌ ಕರ್ನಾಟಕ ಅಭಿವೃದ್ಧಿ ಮಂಡಳಿಯಿಂದಲೂ ಆರ್ಥಿಕ ನೆರವು ದೊರೆತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+