Get Updates
Get notified of breaking news, exclusive insights, and must-see stories!

ಜಯದೇವ ನಿರ್ದೇಶಕ ಡಾ. ಮಂಜುನಾಥ್ ಅವಧಿ ವಿಸ್ತರಣೆ

ಬೆಂಗಳೂರು, ಜುಲೈ 17; ಕರ್ನಾಟಕ ಸರ್ಕಾರ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕ ಡಾ. ಸಿ. ಎನ್. ಮಂಜುನಾಥ್ ಅವರ ಅವಧಿ 6ಯನ್ನು ಆರು ತಿಂಗಳ ಕಾಲ ವಿಸ್ತರಣೆ ಮಾಡಿದೆ. ನಿರ್ದೇಶಕರ ಅವಧಿ ಜುಲೈ 19ಕ್ಕೆ ಅಂತ್ಯವಾಗಬೇಕಿತ್ತು.

ಸೋಮವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಡಾ. ಸಿ. ಎನ್. ಮಂಜುನಾಥ್ ಅಧಿಕಾರಾವಧಿಯನ್ನು 2024ರ ಜನವರಿ ತಿಂಗಳ ತನಕ ವಿಸ್ತರಣೆ ಮಾಡಲು ತೀರ್ಮಾನ ಕೈಗೊಳ್ಳಲಾಗಿದೆ.

 Director Dr CN Manjunath

ಡಾ. ಮಂಜುನಾಥ್‌ ಕಳೆದ 16 ವರ್ಷಗಳಿಂದ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ ನಿರ್ದೇಶಕರಾಗಿದ್ದಾರೆ. ಅವರ ಅವಧಿ ಪೂರ್ಣಗೊಂಡ ಬಳಿಕವೂ ವಿವಿಧ ಸರ್ಕಾರಗಳು ನಿರ್ದೇಶಕ ಹುದ್ದೆಯಲ್ಲಿ ಅವರನ್ನು ಮುಂದುವರೆಸುತ್ತಾ ಬಂದಿವೆ.

ಸೋಮವಾರ ನಡೆದ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಆಡಳಿತ ಮಂಡಳಿ ಸಭೆ ಮತ್ತು ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಡಾ. ಮಂಜುನಾಥ್‌ ಅವಧಿ ವಿಸ್ತರಣೆ ಮಾಡುವ ಒಮ್ಮತದ ತೀರ್ಮಾನವನ್ನು ತೆಗೆದುಕೊಳ್ಳಲಾಗಿದೆ.

ನಿರ್ದೇಶಕ ಡಾ. ಸಿ. ಎನ್. ಮಂಜುನಾಥ್ ಅವಧಿ ಕಳೆದ ವರ್ಷವೇ ಅಂತ್ಯಗೊಂಡಿತ್ತು. ಆಸ್ಪತ್ರೆಯ ಸಿಬ್ಬಂದಿ ಒತ್ತಾಯದ ಮೇರೆಗೆ ಮತ್ತೆ ಒಂದು ವರ್ಷ ಅವಧಿ ವಿಸ್ತರಣೆ ಮಾಡಿ ಆದೇಶ ಹೊರಡಿಸಲಾಗಿತ್ತು. ಈ ಅವಧಿ ಜುಲೈ 19ಕ್ಕೆ ಅಂತ್ಯಗೊಳ್ಳಬೇಕಿತ್ತು. ಈ ಹಿನ್ನಲೆಯಲ್ಲಿ ಇಂದು ನಿರ್ದೇಶಕರ ಆಯ್ಕೆ ಸಂಬಂಧ ಸಭೆಯನ್ನು ನಡೆಸಲಾಯಿತು.

18/07/2022ರ ಆದೇಶ; ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಇದ್ದಾಗ ಮುಖ್ಯಮಂತ್ರಿಯವರ ಅನುಮೋದನೆಯಂತೆ ಕರ್ನಾಟಕ ರಾಜ್ಯಪಾಲರ ಅಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ ಎ. ಶ್ರೀನಿಧಿ ಸರ್ಕಾರದ ಆಧೀನ ಕಾರ್ಯದರ್ಶಿ-3, ವೈದ್ಯಕೀಯ ಶಿಕ್ಷಣ ಇಲಾಖೆ 18/7/2022ರಂದು ಆದೇಶವೊಂದನ್ನು ಹೊರಡಿಸಿದ್ದರು.

 Director Dr CN Manjunath

ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ ಇಲ್ಲಿಗೆ ಸರ್ಕಾರದ ಅಧಿಸೂಚನೆ ದಿನಾಂಕ 25/6/2021ರಲ್ಲಿ ಡಾ. ಸಿ. ಎನ್. ಮಂಜುನಾಥ್ ಇವರನ್ನು ನಿರ್ದೇಶಕರ ಹುದ್ದೆಗೆ ನೇಮಕ ಮಾಡಲಾಗಿರುವ ಅವಧಿಯು ದಿನಾಂಕ 19/7/2022ಕ್ಕೆ ಮುಕ್ತಾಯಗೊಳ್ಳುವುದರಿಂದ, ಸಂಸ್ಥೆಯ ಆಡಳಿತ ಮಂಡಳಿಯ ಘಟನೋತ್ತರ ಅನುಮೋದನೆ ಪಡೆಯುವ ಷರತ್ತಿಗೊಳಪಟ್ಟು, ಸಂಸ್ಥೆಯ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಡಾ. ಸಿ. ಎನ್. ಮಂಜುನಾಥ್ ಇವರನ್ನು ದಿನಾಂಕ 20/7/2022ರಿಂದ ದಿನಾಂಕ 19/7/2023ರ ತನಕ ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕರ ಹುದ್ದೆಯಲ್ಲಿ ಮುಂದುವರೆಸಿ ಆದೇಶಿಸಿದೆ ಎಂದು ಹೇಳಿದ್ದರು.

ಜಯದೇವ ಆಸ್ಪತ್ರೆಯನ್ನು ದೊಡ್ಡ ಮಟ್ಟಿಗೆ ಕಟ್ಟಿ ಬೆಳೆಸುವಲ್ಲಿ ನಿರ್ದೇಶಕ ಡಾ. ಸಿ. ಎನ್. ಮಂಜುನಾಥ್ ಅವರ ಶ್ರಮವಿದೆ. ಮೈಸೂರಿನಲ್ಲೂ ಜಯದೇವ ಆಸ್ಪತ್ರೆಯನ್ನು ನಿರ್ಮಾಣ ಮಾಡಿ ಯಶಸ್ವಿಯಾಗಿ ಮುನ್ನಡೆಸುತ್ತಿದ್ದಾರೆ. ಕಲಬುರಗಿಯಲ್ಲಿಯೂ ಮಂಜುನಾಥ್ ಉಸ್ತುವಾರಿಯಲ್ಲೇ 371 ಹಾಸಿಗೆ ಸಾಮರ್ಥ್ಯದ ಜಯದೇವ ಸಂಸ್ಥೆಯ ಶಾಖೆಯನ್ನು ನಿರ್ಮಿಸಲಾಗುತ್ತಿದೆ. 2024ರ ಜನವರಿಯಲ್ಲಿ ಈ ಆಸ್ಪತ್ರೆ ಲೋಕಾರ್ಪಣೆಯಾಗಲಿದೆ.

ಕಲಬುರಗಿ ನಗರದ ಹೃದಯ ಭಾಗದಲ್ಲಿ 6.8 ಎಕರೆ ಪ್ರದೇಶದಲ್ಲಿ 183 ಕೋಟಿ ರೂ. ವೆಚ್ಚದಲ್ಲಿ ಸಂಸ್ಥೆಯ ಕಲಬುರಗಿ ಶಾಖೆ ನಿರ್ಮಾಣವಾಗುತ್ತಿದೆ. ಬರೀ ಕಟ್ಟಡ ಉದ್ಘಾಟನೆ ಅಷ್ಟೆ ಅಲ್ಲ. ಸುಮಾರು 56 ಕೋಟಿ ರೂ. ವೆಚ್ಚದಲ್ಲಿ ಅತ್ಯಾಧುನಿಕ ವೈದ್ಯಕೀಯ ಉಪಕರಣಗಳೊಂದಿಗೆ ಆಸ್ಪತ್ರೆ ತನ್ನ ಸೇವೆ ಆರಂಭಿಸಲಿದೆ.

ನೂತನ ಆಸ್ಪತ್ರೆಗೆ ತಕ್ಕಂತೆ ರೋಗಿಗಳಿಗೆ ಸೇವೆ ನೀಡಲು ಸಿಬ್ಬಂದಿಗಳ ನೇಮಕಾತಿಗೂ ಸಚಿವ ಸಂಪುಟ ಒಪ್ಪಿಗೆ ನೀಡಿದ್ದು, ಹಣಕಾಸು ಇಲಾಖೆಯೂ ಸಹಮತಿ ನೀಡಿದೆ. ಜಯದೇವ ಸಂಸ್ಥೆ ಕಲ್ಯಾಣ ಕರ್ನಾಟಕ ಭಾಗದ ಹೃದ್ರೋಗಿಗಳ ಪಾಲಿಗೆ ಸಂಜೀವಿನಿಯಾಗಿ ಕಾರ್ಯನಿರ್ವಹಿಸಲಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+