ಜಯಲಲಿತಾ ಖುಲಾಸೆ, ಹೈಕೋರ್ಟ್ ತೀರ್ಪಿಗೆ ತಡೆ ಇಲ್ಲ
ಬೆಂಗಳೂರು, ಜುಲೈ 27 : ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಮತ್ತು ಇತರ ಮೂವರಿಗೆ ಸುಪ್ರೀಂಕೋರ್ಟ್ ನೋಟಿಸ್ ಜಾರಿಗೊಳಿಸಿದೆ. ಜಯಲಲಿತಾ ಅವರನ್ನು ಖುಲಾಸೆಗೊಳಿಸಿರುವ ಕರ್ನಾಟಕ ಹೈಕೋರ್ಟ್ ತೀರ್ಪಿನಗೆ ತಡೆ ನೀಡಲು ಸಾಧ್ಯವಿಲ್ಲ ಎಂದು ಕೋರ್ಟ್ ಸ್ಪಷ್ಟಪಡಿಸಿದೆ.
ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಜಯಲಲಿತಾ ಅವರನ್ನು ಖುಲಾಸೆಗೊಳಿಸಿರುವ ಕರ್ನಾಟಕ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಕರ್ನಾಟಕ ಸರ್ಕಾರ ಮತ್ತು ಡಿಎಂಕೆ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಗಳ ವಿಚಾರಣೆಯನ್ನು ಸೋಮವಾರ ನಡೆಸಿದ ಕೋರ್ಟ್ ನೋಟಿಸ್ ಜಾರಿ ಮಾಡಿದೆ. [ಜಯಲಲಿತಾ ಪ್ರಕರಣ, ಡಿಎಂಕೆಯಿಂದ ಮೇಲ್ಮನವಿ]

ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ, ಜಯಲಲಿತಾ ಆಪ್ತೆ ಶಶಿಕಲಾ ನಟರಾಜನ್, ಇಳವರಸಿ ಮತ್ತು ಸುಧಾಕರನ್ ಅವರನ್ನು ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಖುಲಾಸೆಗೊಳಿಸಿರುವ ಕರ್ನಾಟಕ ಹೈಕೋರ್ಟ್ ತೀರ್ಪನ್ನು ಕರ್ನಾಟಕ ಸರ್ಕಾರ ಮತ್ತು ಡಿಎಂಕೆ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿವೆ ಮತ್ತು ಹೈಕೋರ್ಟ್ ಆದೇಶಕ್ಕೆ ತಡೆ ನೀಡಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಿವೆ. [ಜಯಲಲಿತಾ ಪ್ರಕರಣ Timeline]
ತೀರ್ಪಿಗೆ ತಡೆಯಾಜ್ಞೆ ಕೋರಿದ್ದ ಕರ್ನಾಟಕ : ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಜೆ.ಜಯಲಲಿತಾ ಅವರು ನಿರ್ದೋಷಿ ಎಂದು ಕರ್ನಾಟಕ ಹೈಕೋರ್ಟ್ ವಿಶೇಷ ಪೀಠದ ನ್ಯಾಯಮೂರ್ತಿ ಸಿ.ಆರ್.ಕುಮಾರಸ್ವಾಮಿ 2015ರ ಮೇ 11ರಂದು ತೀರ್ಪು ನೀಡಿದ್ದರು. ಮೇ.23ರಂದು ಜಯಲಲಿತಾ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿದ್ದರು. [ಜಯಲಲಿತಾ ವಿರುದ್ಧ ಮೇಲ್ಮನವಿ ಸಲ್ಲಿಸಲು 7 ಕಾರಣಗಳು!]
ಕರ್ನಾಟಕ ಸರ್ಕಾರ ತನ್ನ ಮೇಲ್ಮನವಿಯಲ್ಲಿ ಹೈಕೋರ್ಟ್ ತೀರ್ಪಿಗೆ ತಡೆಯಾಜ್ಞೆ ನೀಡಬೇಕು ಎಂದು ಮನವಿ ಮಾಡಿತ್ತು. ಆದರೆ, ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಲು ನಿರಾಕರಿಸಿದೆ. ಒಂದು ವೇಳೆ ಹೈಕೋರ್ಟ್ ತೀರ್ಪುರದ್ದುಗೊಂಡಿದ್ದರೆ, ಸಿಬಿಐ ವಿಶೇಷ ನ್ಯಾಯಾಲಯ ನೀಡಿದ್ದ 4 ವರ್ಷದ ಜೈಲು ಶಿಕ್ಷೆ ತೀರ್ಪು ಜಾರಿಗೆ ಬರುತ್ತಿತ್ತು.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications