ಜಯಲಲಿತಾ ವಿರುದ್ಧ ಮೇಲ್ಮನವಿ, ಕಾದು ನೋಡುವ ತಂತ್ರ

ಬೆಂಗಳೂರು, ಮೇ 26 : ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರ ವಿರುದ್ಧ ಮೇಲ್ಮನವಿ ಸಲ್ಲಿಸುವ ಬಗ್ಗೆ ಕರ್ನಾಟಕ ಸರ್ಕಾರ ಇನ್ನೂ ಅಂತಿಮ ನಿರ್ಧಾರ ಕೈಗೊಂಡಿಲ್ಲ. ಮೇಲ್ಮನವಿ ಸಲ್ಲಿಕೆ ಮಾಡಲು 90 ದಿನಗಳ ಕಾಲವಕಾಶವಿದೆ.

ಸೋಮವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಮೇಲ್ಮನವಿ ಸಲ್ಲಿಸುವ ಕುರಿತು ಮಾಹಿತಿ ಸಂಗ್ರಹಿಸೋಣ, ಈ ವಿಷಯವನ್ನು ಮತ್ತೆ ಚರ್ಚಿಸೋಣ ಎಂದು ಸಿದ್ದರಾಮಯ್ಯ ಹೇಳಿದರು ಎಂದು ತಿಳಿದುಬಂದಿದೆ. [ಜಯಲಲಿತಾ ಪ್ರಕರಣ Timeline]

jayalalithaa

ಮೇಲ್ಮನವಿ ಸಲ್ಲಿಸುವ ಕುರಿತು ಅಡ್ವೊಕೇಟ್ ಜನರಲ್ ಪ್ರೊ. ರವಿವರ್ಮ ಕುಮಾರ್, ಕಾನೂನು ಇಲಾಖೆಯಿಂದ ಕೆಲವು ವಿವರಣೆಗಳು ಬೇಕಿವೆ. ವಿವರಣೆ ಪಡೆದು ನಂತರ ಈ ಕುರಿತು ಅಂತಿಮ ತೀರ್ಮಾನ ಕೈಗೊಳ್ಳೋಣ ಎಂದು ಕಾನೂನು ಸಚಿವ ಟಿ.ಬಿ. ಜಯಚಂದ್ರ ಅವರು ಸಭೆಯಲ್ಲಿ ಸಲಹೆ ನೀಡಿದರು. [ಮೇಲ್ಮನವಿ ಸಲ್ಲಿಸಲು ಡಿಎಂಕೆ ತೀರ್ಮಾನ]

ಸಭೆಯಲ್ಲಿ ಈ ಕುರಿತು ಚರ್ಚೆ ನಡೆಸಿದ ಸಚಿವರು, ಮೇಲ್ಮನವಿ ಸಲ್ಲಿಸುವ ಕುರಿತು ನೀವು ಅಂತಿಮ ನಿರ್ಧಾರ ಕೈಗೊಳ್ಳಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಿಳಿಸಿದರು ಎಂದು ತಿಳಿದುಬಂದಿದೆ. ಕರ್ನಾಟಕ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು 90 ದಿನಗಳ ಕಾಲಾವಕಾಶವಿದೆ. [ಜಯಲಲಿತಾ ಆರೋಪ ಮುಕ್ತ, ಬಿ.ವಿ.ಆಚಾರ್ಯ ಸಂದರ್ಶನ]

ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಜೆ ಜಯಲಲಿತಾ ಸೇರಿದಂತೆ ನಾಲ್ವರು ಅಪರಾಧಿಗಳನ್ನು ನಿರ್ದೋಷಿಗಳು ಎಂದು ಕರ್ನಾಟಕ ಹೈಕೋರ್ಟ್ ವಿಶೇಷ ಪೀಠದ ನ್ಯಾಯಮೂರ್ತಿ ಸಿ.ಆರ್.ಕುಮಾರಸ್ವಾಮಿ ಮೇ 11ರಂದು ತೀರ್ಪು ನೀಡಿದ್ದರು. ಮೇ.23ರಂದು ಜಯಲಲಿತಾ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+