ಜಯಾ ಕೇಸ್ : ಇದೇ ವಾರ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ
ಬೆಂಗಳೂರು, ಜೂ. 01 : ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಮೇಲ್ಮನವಿ ಸಲ್ಲಿಸಲು ಕರ್ನಾಟಕ ಸರ್ಕಾರ ತೀರ್ಮಾನ ಕೈಗೊಂಡಿದೆ. ಈ ವಾರದಲ್ಲಿಯೇ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಕೆ ಮಾಡಲು ನಿರ್ಧರಿಸಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ವಿಧಾನಸೌಧದಲ್ಲಿ ಸೋಮವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಮೇಲ್ಮನವಿ ಸಲ್ಲಿಸುವ ಕುರಿತು ಅಂತಿಮ ತೀರ್ಮಾನ ಕೈಗೊಳ್ಳಲಾಗಿದೆ. ಮೇಲ್ಮನವಿಯ ಕರಡು ಪ್ರತಿಯನ್ನು ತಯಾರಿಸುವಂತೆ ಕಾನೂನು ಇಲಾಖೆಗೆ ಸೂಚನೆ ನೀಡಿಲಾಗಿದೆ. [ಜಯಾ ಕೇಸ್ : ಮೇಲ್ಮನವಿ ಸಲ್ಲಿಸಲಿದೆ ಸರ್ಕಾರ]

ಕರ್ನಾಟಕ ಸರ್ಕಾರ ಸಲ್ಲಿಸುವ ಮೇಲ್ಮನವಿಯಲ್ಲಿ ಕರ್ನಾಟಕ ಹೈಕೋರ್ಟ್ ಅಕ್ರಮ ಆಸ್ತಿಗಳಿಗೆ ಪ್ರಕರಣದಲ್ಲಿ ನೀಡಿರುವ ತೀರ್ಪಿನಲ್ಲಿರುವ ತಪ್ಪಿನ ಅಂಶಗಳನ್ನು ಸೇರಿಸಲು ನಿರ್ಧರಿಸಲಾಗಿದೆ. ತೀರ್ಪಿನಲ್ಲಿ ನೀಡಲಾದ ಸಾಲದ ಲೆಕ್ಕದಲ್ಲಿ ತಪ್ಪಿರುವುದನ್ನು ಎಸ್‌ಪಿಪಿ ಬಿ.ವಿ.ಆಚಾರ್ಯ ಪತ್ತೆ ಹಚ್ಚಿದ್ದರು. [ಜಯಲಲಿತಾ ಪ್ರಕರಣ Timeline]
ಕಾನೂನು ತೊಡಕಿಲ್ಲ : ಜಯಲಲಿತಾ ಪ್ರಕರಣದ ತೀರ್ಪು ಹೊರಬಂದ ಬಳಿಕ ಮೇಲ್ಮನವಿ ಸಲ್ಲಿಸಲು ಕಾನೂನು ತೊಡಕಿದೆಯೇ? ಎಂಬ ಬಗ್ಗೆ ಚರ್ಚೆ ನಡೆದಿತ್ತು. ಜಯಲಲಿತಾ ಅವರು ಮುಖ್ಯಮಂತ್ರಿಯಾಗಿರುವುದರಿಂದ ಮೇಲ್ಮನವಿ ಸಲ್ಲಿಸಲು ವಿಶೇಶ ಅನುಮತಿಯ ಅಗತ್ಯವಿದೆಯೇ? ಎಂದು ಕಾನೂನು ತಜ್ಞರ ಬಳಿ ಅಭಿಪ್ರಾಯ ಕೇಳಲಾಗಿತ್ತು. ಆದರೆ, ಯಾವುದೇ ತೊಡಕಿಲ್ಲ ಎಂದು ತಿಳಿದುಬಂದಿದೆ. [ಸುಪ್ರೀಂಗೆ ಹೋಗಲು ಸರ್ಕಾರಕ್ಕೆ ಆಚಾರ್ಯ ಶಿಫಾರಸು]
ಆಚಾರ್ಯ ಅವರೇ ಎಸ್‌ಪಿಸಿ : ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಮೇಲ್ಮನವಿ ಸಲ್ಲಿಸಿದರೆ ವಿಶೇಷ ಸರ್ಕಾರಿ ಅಭಿಯೋಜಕರನ್ನು ನೇಮಿಸಲು ಸರ್ಕಾರ ಮುಖ್ಯ ನ್ಯಾಯಮೂರ್ತಿಗಳ ಅನುಮತಿ ಪಡೆಯಬೇಕೆ? ಎಂದು ಕಾನೂನು ತಜ್ಞರ ಸಲಹೆ ಕೇಳಲಾಗಿತ್ತು.
ಅಡ್ವೊಕೇಟ್ ಜನರಲ್ ಪ್ರೊ. ರವಿವರ್ಮ ಕುಮಾರ್ ಈ ಬಗ್ಗೆ ಸರ್ಕಾರಕ್ಕೆ ಸ್ಪಷ್ಟನೆ ನೀಡಿದ್ದು, ಎಸ್‌ಪಿಸಿ ನೇಮಕಕ್ಕೆ ಮುಖ್ಯನ್ಯಾಯಮೂರ್ತಿಗಳ ಅನುಮತಿ ಅಗತ್ಯವಿಲ್ಲ ಎಂದು ಹೇಳಿದ್ದಾರೆ. ಆದ್ದರಿಂದ ಸುಪ್ರೀಂಕೋರ್ಟ್‌ನಲ್ಲಿಯೂ ಕರ್ನಾಟಕ ಸರ್ಕಾರದ ಪರವಾಗಿ ಬಿ.ವಿ.ಆಚಾರ್ಯ ಅವರು ವಾದ ಮಂಡನೆ ಮಾಡುವ ಸಾಧ್ಯತೆ ಇದೆ.
-
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್












Click it and Unblock the Notifications