ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಕ್ರಮ ಆಸ್ತಿ : ಫೆ.2ರಿಂದ ಜಯಲಲಿತಾ ಅರ್ಜಿ ವಿಚಾರಣೆ

By ವಿಕಾಸ್ ನಂಜಪ್ಪ
|
Google Oneindia Kannada News

ಬೆಂಗಳೂರು, ಜನವರಿ 08 : ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರ ವಿರುದ್ಧದ ಅಕ್ರಮ ಆಸ್ತಿಗಳಿಕೆ ಪ್ರಕರಣದ ವಿಚಾರಣೆಯನ್ನು ಸುಪ್ರೀಂಕೋರ್ಟ್ ಫೆಬ್ರವರಿ 2ರಿಂದ ದಿನ ಬಿಟ್ಟು ದಿನ ನಡೆಸಲಿದೆ. ಜಯಲಲಿತಾ ಅವರನ್ನು ಆರೋಪ ಮುಕ್ತಗೊಳಿಸಿರುವ ಕರ್ನಾಟಕ ಹೈಕೋರ್ಟ್ ತೀರ್ಪು ಪ್ರಶ್ನಿಸಿ ಕರ್ನಾಟಕ ಸರ್ಕಾರ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದೆ.

ಕರ್ನಾಟಕ ಸರ್ಕಾರ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಶುಕ್ರವಾರ ನಡೆಸಿದ ನ್ಯಾ.ಅಮಿತಾವ್ ರಾವ್ ಅವರ ಪೀಠ 2016ರ ಫೆಬ್ರವರಿ 2ರಿಂದ ಮೇಲ್ಮನವಿ ಅರ್ಜಿಯ ವಿಚಾರಣೆಯನ್ನು ನಡೆಸಬಹುದು ಎಂದು ಹೇಳಿತು. ಫೆಬ್ರವರಿ 2, 3 ಮತ್ತು 4ರಂದು ನಿರಂತರವಾಗಿ ವಿಚಾರಣೆ ನಡೆಯಲಿದ್ದು, ನಂತರ ದಿನ ಬಿಟ್ಟು ದಿನ ವಿಚಾರಣೆ ನಡೆಸಲು ಸೂಚನೆ ನೀಡಿತು. [ಜಯಾ ಪ್ರಕರಣದ timeline]

jayalalithaa

ಒಟ್ಟಿಗೆ ವಿಚಾರಣೆ : ಡಿಎಂಕೆ ನಾಯಕ ಅನ್ಬಳಗನ್ ಅವರು ಕರ್ನಾಟಕ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದಾರೆ. ಈ ಅರ್ಜಿಯನ್ನು ಕರ್ನಾಟಕ ಸರ್ಕಾರದ ಅರ್ಜಿಯೊಂದಿಗೆ ಸೇರಿಸಿ ವಿಚಾರಣೆ ನಡೆಸಲಾಗುತ್ತದೆ. [4 ಸಾವಿರ ಪುಟದ ಮೇಲ್ಮನವಿ ಸಲ್ಲಿಸಿದ ಕರ್ನಾಟಕ]

ಅರ್ಜಿಯಲ್ಲಿ ಏನಿದೆ? : ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ, ಜಯಲಲಿತಾ ಆಪ್ತೆ ಶಶಿಕಲಾ ನಟರಾಜನ್, ಇಳವರಸಿ ಮತ್ತು ಸುಧಾಕರನ್ ಅವರನ್ನು ದೋಷಮುಕ್ತಗೊಳಿಸಿರುವ ಕರ್ನಾಟಕ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಕರ್ನಾಟಕ ಸರ್ಕಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ. [ಜಯಲಲಿತಾ ಖುಲಾಸೆಗೊಳಿಸಿದ್ದ ಜಡ್ಜ್ ನಿವೃತ್ತಿ]

ಕರ್ನಾಟಕ ಸರ್ಕಾರ ಸಲ್ಲಿಸಿರುವ ಮೇಲ್ಮನವಿಯಲ್ಲಿ, ಹೈಕೋರ್ಟ್ ತೀರ್ಪಿಗೆ ತಡೆಯಾಜ್ಞೆ ನೀಡಿ, ವಿಶೇಷ ಕೋರ್ಟ್ ನೀಡಿದ್ದ 4 ವರ್ಷ ಜೈಲು ಶಿಕ್ಷೆ ಮತ್ತು 100 ಕೋಟಿ ರೂ.ಗಳ ದಂಡದ ತೀರ್ಪಿನ ಜಾರಿಗೆ ಮನವಿ ಮಾಡಲಾಗಿದೆ.

ಹೈಕೋರ್ಟ್ ಆದೇಶವೇನು? : ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಜೆ.ಜಯಲಲಿತಾ ಅವರು ನಿರ್ದೋಷಿ ಎಂದು ನ್ಯಾಯಮೂರ್ತಿ ಸಿ.ಆರ್.ಕುಮಾರಸ್ವಾಮಿ ಅವರು 2015ರ ಮೇ 11ರಂದು ತೀರ್ಪು ನೀಡಿದ್ದರು.

English summary
The Supreme Court will from February 2 commence hearing on a day to day basis the appeal filed in the disproportionate case filed against Tamil Nadu chief minister, J.Jayalithaa and three others. Karnataka government had gone in appeal to the Supreme Court after the Karnataka High Court acquitted Jayalalithaa.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X