ಜಯಲಲಿತಾ ಆಸ್ತಿಗಳಿಕೆ, ಈ ವಾರದಲ್ಲಿ ತೀರ್ಪು
ಬೆಂಗಳೂರು, ಮಾ. 25 : ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ವಿರುದ್ಧದ ಅಕ್ರಮ ಆಸ್ತಿಗಳಿಕೆ ಪ್ರಕರಣದ ತೀರ್ಪನ್ನು ಕರ್ನಾಟಕ ಹೈಕೋರ್ಟ್ ವಿಶೇಷ ಪೀಠ ಈ ತಿಂಗಳ ಅಂತ್ಯದಲ್ಲಿ ಪ್ರಕಟಿಸುವ ಸಾಧ್ಯತೆ ಇದೆ. ಸಿಬಿಐ ವಿಶೇಷ ಪೀಠ ನೀಡಿರುವ ತೀರ್ಪಿನ ವಿರುದ್ಧ ಜಯಲಲಿತಾ ಅವರು ಮೇಲ್ಮನವಿ ಸಲ್ಲಿಸಿದ್ದರು.
ಜಯಲಲಿತಾ ಅವರ ಅಕ್ರಮ ಆಸ್ತಿಗಳಿಕೆ ಪ್ರಕರಣದ ತೀರ್ಪಿನ ಮೇಲ್ಮನವಿಯ ವಿಚಾರಣೆಯನ್ನು ನ್ಯಾಯಮೂರ್ತಿ ಸಿ.ಆರ್.ಕುಮಾರಸ್ವಾಮಿ ಅವರು ಮಾ.11ರಂದು ಪೂರ್ಣಗೊಳಿಸಿದ್ದು, ತೀರ್ಪನ್ನು ಕಾಯ್ದಿರಿಸಿದ್ದಾರೆ. ಬೆಂಗಳೂರು ಪೊಲೀಸರು ಸಹ ತೀರ್ಪಿನ ದಿನಕ್ಕಾಗಿ ಅಗತ್ಯ ಭದ್ರತಾ ವ್ಯವಸ್ಥೆ ಕಲ್ಪಿಸಲು ತಯಾರಿ ನಡೆಸುತ್ತಿದ್ದಾರೆ.

2014ರ ಸೆ. 27ರಂದು ಅಕ್ರಮ ಆಸ್ತಿಗಳಿಕೆ ಪ್ರಕರಣದ ತೀರ್ಪು ನೀಡಿದ್ದ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಡಿ.ಕುನ್ಹ ಅವರು, ಜಯಲಲಿತಾ, ವಿ.ಕೆ.ಶಶಿಕಲಾ, ಜೆ.ಇಳವರಸಿ ಮತ್ತು ವಿ.ಎನ್.ಸುಧಾಕರನ್ ತಪ್ಪಿತಸ್ಥರು ಎಂದು ಆದೇಶಿದ್ದರು. [ಜಯಲಲಿತಾ ಜಾಮೀನು ಅವಧಿ 4 ತಿಂಗಳು ವಿಸ್ತರಣೆ]
ಜಯಲಲಿತಾ ಅವರಿಗೆ 100 ಕೋಟಿ ಹಾಗೂ ಇತರರಿಗೆ ತಲಾ 10 ಕೋಟಿ ದಂಡ ಮತ್ತು ನಾಲ್ಕು ವರ್ಷ ಜೈಲು ಶಿಕ್ಷೆ ವಿಧಿಸಲಾಗಿತ್ತು. ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಜಯಲಲಿತಾ ಮತ್ತು ಇತರ ಮೂವರು ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿ ವಿಶೇಷ ಈ ತೀರ್ಪನ್ನು ಪ್ರಶ್ನಿಸಿದ್ದರು. [ಆಸ್ತಿಗಳಿಕೆ ಪ್ರಕರಣ, ಜಯಾ ತೀರ್ಪು ಕಾಯ್ದಿರಿಸಿದ ಕೋರ್ಟ್]
ಸುಪ್ರೀಂಕೋರ್ಟ್ ಎಲ್ಲರಿಗೂ ಜಾಮೀನು ನೀಡಿತ್ತು ಮತ್ತು ಪ್ರಕರಣದ ಮೇಲ್ಮನವಿ ಅರ್ಜಿಯ ವಿಚಾರಣೆಯನ್ನು ನಡೆಸಲು ವಿಶೇಷ ಪೀಠವನ್ನು ರಚನೆ ಮಾಡುವಂತೆ ಕರ್ನಾಟಕ ಹೈಕೋರ್ಟ್‌ಗೆ ಸೂಚಿಸಿತ್ತು. ಆದರಂತೆ ನ್ಯಾಯಮೂರ್ತಿ ಸಿ.ಆರ್.ಕುಮಾರಸ್ವಾಮಿ ಅವರ ಏಕ ಸದಸ್ಯ ಪೀಠ ರಚನೆಯಾಗಿತ್ತು.
ಪೊಲೀಸರ ಸಿದ್ಧತೆ : ಕರ್ನಾಟಕ ಹೈಕೋರ್ಟ್ ವಿಶೇಷ ಪೀಠ ಜಯಲಲಿತಾ ಅವರ ಪ್ರಕರಣದ ತೀರ್ಪು ಪ್ರಕಟಿಸುವ ಹಿನ್ನಲೆಯಲ್ಲಿ ಬೆಂಗಳೂರು ಪೊಲೀಸರು ಅಗತ್ಯ ಭದ್ರತಾ ವ್ಯವಸ್ಥೆಗಳನ್ನು ಮಾಡಿಕೊಳ್ಳು ಮುಂದಾಗಿದ್ದಾರೆ. ಈ ತಿಂಗಳ ಅಂತ್ಯದಲ್ಲಿ ತೀರ್ಪು ಪ್ರಕಟವಾಗಲಿದ್ದು, ದಿನಾಂಕ ಮಾತ್ರ ಇನ್ನೂ ನಿಗದಿಯಾಗಿಲ್ಲ.
ಜಯಲಲಿತಾ ಅವರ ಜಾಮೀನು ಅರ್ಜಿ ವಿಚಾರಣೆ ಕರ್ನಾಟಕ ಹೈಕೋರ್ಟ್‌ನಲ್ಲಿ ನಡೆದ ಸಂದರ್ಭದಲ್ಲಿ ಮತ್ತು ಅವರಿಗೆ ಜಾಮೀನು ಸಿಕ್ಕ ಸಂದರ್ಭದಲ್ಲಿ ತಮಿಳುನಾಡಿನಿಂದ ಸಾವಿರಾರು ಜನರು ಬೆಂಗಳೂರಿಗೆ ಆಗಮಿಸಿದ್ದರು. ಈಗ ತೀರ್ಪು ಪ್ರಕಟವಾಗುವಾಗ ಜನರು ಆಗಮಿಸುವ ಸಾಧ್ಯತೆ ಇರುವುದರಿಂದ ಪೊಲೀಸರು ಭದ್ರತೆ ಬಗ್ಗೆ ಗಮನಹರಿಸಿದ್ದಾರೆ.












Click it and Unblock the Notifications