• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಸಾಗರ ಕ್ಷೇತ್ರದಿಂದ ಪರಿಷತ್ ಸದಸ್ಯೆ ಡಾ.ಜಯಮಾಲಾ ಸ್ಪರ್ಧೆ?

|
   ನಟಿ ಡಾ ಜಯಮಾಲಾ, ಸಾಗರದಿಂದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ | Oneindia Kannada

   ಶಿವಮೊಗ್ಗ, ಫೆಬ್ರವರಿ 09 : ಸಾಗರ ಕ್ಷೇತ್ರದ ಬಿಜೆಪಿ ಟಿಕೆಟ್‌ ಯಾರಿಗೆ? ಎಂಬುದು ಇನ್ನೂ ಖಚಿತವಾಗಿಲ್ಲ. ಈಗ ಕಾಂಗ್ರೆಸ್ ಟಿಕೆಟ್‌ಗಾಗಿ ಪೈಪೋಟಿ ಆರಂಭವಾಗಿದೆ. ಕಾಗೋಡು ತಿಮ್ಮಪ್ಪ ಅವರು ಕ್ಷೇತ್ರದ ಹಾಲಿ ಶಾಸಕರು.

   ಕಾಗೋಡು ತಿಮ್ಮಪ್ಪ ಮತ್ತು ಹಿರಿಯ ನಟಿ, ವಿಧಾನಪರಿಷತ್ ಸದಸ್ಯೆ ಜಯಮಾಲಾ ಅವರು ಟಿಕೆಟ್‌ ಆಕಾಂಕ್ಷಿಗಳ ಪಟ್ಟಿಯಲ್ಲಿದ್ದಾರೆ. ಕಾಗೋಡು ತಿಮ್ಮಪ್ಪ ಅವರು ಈ ಬಾರಿ ಚುನಾವಣೆಗೆ ಸ್ಪರ್ಧಿಸುತ್ತಿಲ್ಲ. ಆದರೆ, ಪುತ್ರಿಗೆ ಟಿಕೆಟ್ ಕೊಡಿಸಲು ಪ್ರಯತ್ನ ನಡೆಸಿದ್ದಾರೆ.

   ಬೇಳೂರು ಗೋಪಾಲಕೃಷ್ಣ ಕೈ ತಪ್ಪಲಿದೆ ಸಾಗರದ ಟಿಕೆಟ್?

   ಸಾಗರ ಕ್ಷೇತ್ರದಲ್ಲಿ ಕಾಗೋಡು ತಿಮ್ಮಪ್ಪ ಅವರು ಸ್ಪರ್ಧಿಸದಿದ್ದರೆ ನನಗೆ ಟಿಕೆಟ್ ನೀಡಿ ಎಂದು ಜಯಮಾಲಾ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಅವರಿಗೆ ಮನವಿ ಮಾಡಿದ್ದಾರೆ.

   ಕ್ಷೇತ್ರ ಪರಿಚಯ : ಸಾಗರದಲ್ಲಿ ಬಿಜೆಪಿ, ಕಾಂಗ್ರೆಸ್ ಮುಖಾಮುಖಿ ಕದನ

   ಈ ಬಾರಿಯ ಚುನಾವಣೆಯಲ್ಲಿ ಸಾಗರ ಕ್ಷೇತ್ರ ಬಿಜೆಪಿ ಟಿಕೆಟ್ ಯಾರಿಗೆ ಎಂಬುದು ಕುತೂಹಲ ಮೂಡಿಸಿದೆ. ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಮತ್ತು ಮಾಜಿ ಸಚಿವ ಹರತಾಳು ಹಾಲಪ್ಪ ಅವರ ಹೆಸರು ಕೇಳಿಬರುತ್ತಿದೆ...

   ಕಾಗೋಡು ತಿಮ್ಮಪ್ಪ ಸ್ಪರ್ಧಿಸುವುದಿಲ್ಲ?

   ಕಾಗೋಡು ತಿಮ್ಮಪ್ಪ ಸ್ಪರ್ಧಿಸುವುದಿಲ್ಲ?

   ಸಿದ್ದರಾಮಯ್ಯ ಅವರ ಸಂಪುಟದಲ್ಲಿ ಕಂದಾಯ ಸಚಿವರಾಗಿರುವ ಕಾಗೋಡು ತಿಮ್ಮಪ್ಪ ಅವರು ಈ ಬಾರಿಯ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ವಯಸ್ಸಿನ ಕಾರಣದಿಂದಾಗಿ ಚುನಾವಣೆಯಿಂದ ಅವರು ದೂರವುಳಿಯಲಿದ್ದಾರೆ.

   ಪುತ್ರಿಗೆ ಟಿಕೆಟ್ ಕೊಡಿಸಲು ಪ್ರಯತ್ನ

   ಪುತ್ರಿಗೆ ಟಿಕೆಟ್ ಕೊಡಿಸಲು ಪ್ರಯತ್ನ

   ಕಾಗೋಡು ತಿಮ್ಮಪ್ಪ ಅವರು ಪುತ್ರಿ ಡಾ.ನಂದಿನಿ ಅವರಿಗೆ ಟಿಕೆಟ್ ಕೊಡಿಸಲು ಪ್ರಯತ್ನ ಮಾಡುತ್ತಿದ್ದಾರೆ. ಕೆಲವು ದಿನಗಳ ಹಿಂದೆ ಶಿವಮೊಗ್ಗದಲ್ಲಿ ನಡೆದ ಮಹಿಳಾ ಕಾಂಗ್ರೆಸ್ ಸಮಾವೇಶದ ವೇದಿಕೆಯಲ್ಲಿಯೂ ಅವರು ಕಾಣಿಸಿಕೊಂಡಿದ್ದರು. ಈ ಮೂಲಕ ರಾಜಕೀಯಕ್ಕೆ ಬರುವ ಮನ್ಸೂಚನೆ ನೀಡಿದ್ದಾರೆ.

   ಡಾ.ಜಯಮಾಲಾ ಟಿಕೆಟ್ ಆಕಾಂಕ್ಷಿ

   ಡಾ.ಜಯಮಾಲಾ ಟಿಕೆಟ್ ಆಕಾಂಕ್ಷಿ

   ಒಂದು ವೇಳೆ ಕಾಗೋಡು ತಿಮ್ಮಪ್ಪ ಅವರು ಸ್ಪರ್ಧಿಸಸಿದ್ದರೆ ನನಗೆ ಟಿಕೆಟ್ ನೀಡಿ ಎಂದು ವಿಧಾನಪರಿಷತ್ ಸದಸ್ಯೆ ಡಾ.ಜಯಮಾಲಾ ಅವರು ಪಕ್ಷದ ನಾಯಕರ ಮುಂದೆ ಬೇಡಿಕೆ ಇಟ್ಟಿದ್ದಾರೆ.

   ರಾಮಚಂದ್ರ ಅವರು ಸಾಗರದವರು

   ರಾಮಚಂದ್ರ ಅವರು ಸಾಗರದವರು

   ಜಯಮಾಲಾ ಅವರ ಪತಿ ರಾಮಚಂದ್ರ ಅವರು ಸಾಗರದ ಆರಂಬಳ್ಳಿ ಗ್ರಾಮದವರು. ಜಯಮಾಲಾ ಅವರು ಈಗಾಗಲೇ ತಮ್ಮ ಪರಿಷತ್ ಸದಸ್ಯರ ಅನುದಾನದಲ್ಲಿ ಸುಮಾರು 1ಕೋಟಿ ರೂ.ಗಳನ್ನು ಸಾಗರ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಬಳಕೆ ಮಾಡಿದ್ದಾರೆ.

   ಬೆಂಗಳೂರಿನಿಂದ ಸ್ಪರ್ಧೆ

   ಬೆಂಗಳೂರಿನಿಂದ ಸ್ಪರ್ಧೆ

   ಬೆಂಗಳೂರು ನಗರದಿಂದ ಚುನಾವಣೆಗೆ ಸ್ಪರ್ಧಿಸುವಂತೆ ಡಾ.ಜಯಮಾಲಾ ಅವರಿಗೆ ಪಕ್ಷದ ನಾಯಕರು ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ. ರಾಜಾಜಿನಗರ ಕ್ಷೇತ್ರದಿಂದ ಸ್ಪರ್ಧಿಸುವಂತೆ ಸಲಹೆ ನೀಡಲಾಗಿದೆ.

   ಬಿಜೆಪಿ ಟಿಕೆಟ್‌ಗೂ ಪೈಪೋಟಿ

   ಬಿಜೆಪಿ ಟಿಕೆಟ್‌ಗೂ ಪೈಪೋಟಿ

   ಸಾಗರ ಕ್ಷೇತ್ರದ ಬಿಜೆಪಿ ಟಿಕೆಟ್‌ಗೂ ಪೈಪೋಟಿ ಆರಂಭವಾಗಿದೆ. ಕಾಂಗ್ರೆಸ್‌ನಲ್ಲಿದ್ದ ಕುಮಾರ್ ಬಂಗಾರಪ್ಪ ಅವರು ಬಿಜೆಪಿ ಸೇರಿದ್ದಾರೆ. ಆದ್ದರಿಂದ, ಸೊರಬದಲ್ಲಿ ಅವರಿಗೆ ಟಿಕೆಟ್ ನೀಡಿ, ಸಾಗರದಲ್ಲಿ ಹರತಾಳು ಹಾಲಪ್ಪ ಅವರಿಗೆ ಟಿಕೆಟ್ ನೀಡಲಾಗುತ್ತದೆ ಎಂಬ ಸುದ್ದಿ ಹಬ್ಬಿದೆ. ಆದರೆ, ಸಾಗರ ಕ್ಷೇತ್ರದ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಈ ಸುದ್ದಿಗಳನ್ನು ತಳ್ಳಿಹಾಕಿದ್ದಾರೆ.

   2013ರ ಫಲಿತಾಂಶ

   2013ರ ಫಲಿತಾಂಶ

   2013ರ ಚುನಾವಣೆಯಲ್ಲಿ ಕ್ಷೇತ್ರದಲ್ಲಿ ಕಾಗೋಡು ತಿಮ್ಮಪ್ಪ ಜಯಗಳಿಸಿದ್ದರು. ಜೆಡಿಎಸ್‌ನಿಂದ ಸ್ಪರ್ಧಿಸಿದ್ದ ಬೇಳೂರು ಗೋಪಾಲಕೃಷ್ಣ 3ನೇ ಸ್ಥಾನಕ್ಕೆ ಕುಸಿದಿದ್ದರು. ಕಾಗೋಡು ತಿಮ್ಮಪ್ಪ 71,960 ಮತ, ಜೆಡಿಎಸ್‌ನಿಂದ ಸ್ಪರ್ಧಿಸಿದ್ದ ಬೇಳೂರು ಗೋಪಾಲಕೃಷ್ಣ 23,217 ಮತ, ಬಿಜೆಪಿಯ ಶರಾವತಿ ಸಿ.ರಾವ್ 5,355 ಮತ ಪಡೆದಿದ್ದರು.

   ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

   English summary
   Kannada film actress and Legislative Council member Dr.Jayamala aspirant for Congress ticket from Sagar assembly constituency, Shivamogga district. Revenue minister Kagodu Thimmappa sitting MLA of the constituency.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X
   We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more