ಪರಿಷತ್ ಚುನಾವಣೆ : ಪಕ್ಷೇತರರಾಗಿ ಜಯಪ್ರಕಾಶ್ ಹೆಗ್ಡೆ ಸ್ಪರ್ಧೆ

By: ಮಂಗಳೂರು ಪ್ರತಿನಿಧಿ
Subscribe to Oneindia Kannada

ಉಡುಪಿ, ಡಿಸೆಂಬರ್ 07 : ವಿಧಾನಪರಿಷತ್ ಚುನಾವಣೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಬಳಿಕ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟಗೊಂಡಿದ್ದು ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ ಅವರು ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸಲು ನಿರ್ಧರಿಸಿದ್ದಾರೆ.

ಜಯಪ್ರಕಾಶ್ ಹೆಗ್ಡೆ ಅವರ ನಿರ್ಧಾರಕ್ಕೆ ಉತ್ತಮ ಪ್ರತಿಕ್ರಿಯೆ ಸಿಕ್ಕಿದ್ದು, ಕಾರ್ಯಕರ್ತರು ಅವರ ಬೆಂಬಲಕ್ಕೆ ನಿಂತಿದ್ದಾರೆ. ಇಂದು ನಾಮಪತ್ರ ಸಲ್ಲಿಸುತ್ತೇನೆ. ಚುನಾವಣಾ ಕಣದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಉಡುಪಿಯಲ್ಲಿ ಸೋಮವಾರ ಹೆಗ್ಡೆ ಸ್ಪಷ್ಟಪಡಿಸಿದ್ದಾರೆ. [ಪರಿಷತ್ ಫೈಟ್ : ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ]

jayaprakash hegde

ದಕ್ಷಿಣ ಕನ್ನಡ ಹಾಗೂ ಉಡುಪಿ ಕ್ಷೇತ್ರದಲ್ಲಿ ಎರಡು ಅಭ್ಯರ್ಥಿಗಳು ಚುನಾವಣೆಗೆ ಸ್ಪರ್ಧಿಸಲು ಅವಕಾಶವಿದೆ. ಆದರೆ, ಕಾಂಗ್ರೆಸ್ ಒಬ್ಬರು ಅಭ್ಯರ್ಥಿಗೆ ಮಾತ್ರ ಟಿಕೆಟ್ ನೀಡಿದೆ. ಟಿಕೆಟ್ ಬೇಡ, ತಾನೂ ಈ ಬಾರಿ ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದರೂ ಹಿರಿಯ ನಾಯಕ ಪ್ರತಾಪಚಂದ್ರ ಶೆಟ್ಟಿ ಅವರಿಗೆ ಪಕ್ಷ ಟಿಕೆಟ್ ನೀಡಿದ್ದು ಅಸಮಾಧಾನಕ್ಕೆ ಕಾರಣವಾಗಿದೆ. [ಜೆಡಿಎಸ್ 12 ಅಭ್ಯರ್ಥಿಗಳ ಪಟ್ಟಿ]

ಪ್ರತಾಪಚಂದ್ರ ಶೆಟ್ಟಿ ಅವರು ಸ್ಪರ್ಧೆಯಿಂದ ಹಿಂದೆ ಸರಿದ ಬಳಿಕ ಆಕಾಂಕ್ಷಿಯಾಗಿದ್ದ ಜಯಪ್ರಕಾಶ್ ಹೆಗ್ಡೆ ಅವರಿಗೆ ಟಿಕೆಟ್ ನೀಡಬೇಕಿತ್ತು. ಆದರೆ, ಟಿಕೆಟ್ ಬೇಡವೆಂದರೂ ಟಿಕೆಟ್ ನೀಡಿ ಪ್ರತಾಪಚಂದ್ರ ಶೆಟ್ಟಿ ಅವರನ್ನು ಕಣಕ್ಕಿಳಿಸಿರುವುದು ವಿರೋಧಕ್ಕೆ ಕಾರಣವಾಗಿದೆ.

'ಪಕ್ಷದಲ್ಲಿ ಎಲ್ಲರನ್ನೂ ಸಮಾಧಾನಪಡಿಸಲು ಸಾಧ್ಯವಿಲ್ಲ. ಸೂಕ್ತ ಮಾತುಕತೆ ಮೂಲಕ ಎಲ್ಲವನ್ನೂ ಸರಿಪಡಿಸುತ್ತೇವೆ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಆದರೆ, ತಾವು ಸ್ಪರ್ಧೆಯಿಂದ ಹಿಂದೆ ಸರಿಯುವುದಿಲ್ಲ ಎಂದು ಹೆಗ್ಡೆ ಸ್ಪಷ್ಟಪಡಿಸಿದ್ದಾರೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Former MP and Congress leader K. Jayaprakash Hegde will contest for legislative council election as an independent candidate. Jayaprakash Hegde said, he would file his nomination from Udupi and Dakshina Kannada local authorities constituency on Monday, December 7.
Please Wait while comments are loading...