ವಿ ಸೋಮಣ್ಣಗೆ ಎದುರಾಯ್ತು ಸಂಕಷ್ಟ: ಕೈ ನಾಯಕರ ಸಂಪರ್ಕದಲ್ಲಿರುವ ಮಾಧುಸ್ವಾಮಿ: ಕಾಂಗ್ರೆಸ್ ಸೇರ್ಪಡೆ?
ತುಮಕೂರು, ಮಾರ್ಚ್ 19: ವಿಧಾನಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋಲು ಅನುಭವಿಸಿದ ಮಾಜಿ ಸಚಿವ ವಿ ಸೋಮಣ್ಣ ಅವರಿಗೆ ತುಮಕೂರಿನಿಂದ ಬಿಜೆಪಿ ಹೈಕಮಾಂಡ್ ಟಿಕೆಟ್ ನೀಡಿದೆ. ಲೋಕಸಭಾ ಚುನಾವಣೆಯ ಟಿಕೆಟ್ ಹಂಚಿಕೆಯ ಭಿನ್ನಮತ ಬಿಜೆಪಿಯಲ್ಲಿ ಜೋರಾಗಿದೆ.
ಬಿಜೆಪಿ ಹೈಕಮಾಂಡ್ ಕರ್ನಾಟಕದ 28 ಕ್ಷೇತ್ರಗಳ ಫೈಕಿ 20 ಕ್ಷೇತ್ರದಲ್ಲಿ ಅಭ್ಯರ್ಥಿಗಳಿಗೆ ಟಿಕೆಟ್ ಘೋಷಣೆಯಾಗಿದ್ದು, ಹಲವು ಕ್ಷೇತ್ರಗಳಲ್ಲಿಬಿಜೆಪಿ ನಾಯಕರು ಬಂಡಾಯದ ಬಾವುಟ ಹಾರಿಸಿದೆ. ತುಮಕೂರು ಲೋಕಸಭಾ ಕ್ಷೇತ್ರದ ಟಿಕೆಟ್ ಗಾಗಿ ಮಾಜಿ ಸಚಿವ ಮಾಧುಸ್ವಾಮಿ ಅವರು ಸಹ ಬೇಡಿಕೆ ಇಟ್ಟಿದ್ರು. ಆದರೆ, ಬಿಜೆಪಿ ಹೈಕಮಾಂಡ್ ಮಾಜಿ ಸಚಿವ ವಿ ಸೋಮಣ್ಣ ಅವರಿಗೆ ಮಣೆ ಹಾಕಿದ್ದು, ಹೈಕಮಾಂಡ್ ನಿರ್ಧಾರಕ್ಕೆ ಮಾಧುಸ್ವಾಮಿ ತೀವ್ರ ಅಸಮಾಧಾನ ಹೊರ ಹಾಕಿದ್ದಾರೆ.

ಲೋಕಸಭಾ ಚುನಾವಣೆಯ ಟಿಕೆಟ್ ಹಂಚಿಕೆಯ ಭಿನ್ನಮತ ಬಿಜೆಪಿಯನ್ನು ಸುಡುತ್ತಿದೆ. ತುಮಕೂರಲ್ಲಿ ವಿ ಸೋಮಣ್ಣ ಅವರಿಗೆ ಟಿಕೆಟ್ ನೀಡಿರುವುದರಿಂದ ಅಸಮಾಧಾನಗೊಂಡಿರುವ ಮಾಜಿ ಸಚಿವ ಜೆಸಿ ಮಾಧುಸ್ವಾಮಿ ಕಾಂಗ್ರೆಸ್ ಸೇರುವ ಸಾಧ್ಯತೆ ಇದೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿದೆ.
ಈಗಾಗಲೇ ವಿ ಸೋಮಣ್ಣ ತುಮಕೂರು ಸ್ಪರ್ಧೆಯಿಂದ ಬಹಿರಂಗವಾಗಿ ಅಸಮಾಧಾನ ಹೊರಹಾಕಿರುವ ವ ಮಾಜಿ ಸಚಿವ ಜೆಸಿ ಮಾಧುಸ್ವಾಮಿ ಕೊರಟಗೆರೆ ಕಾಂಗ್ರೆಸ್ ಶಾಸಕ ಹಾಗೂ ಗೃಹ ಸಚಿವ ಜಿ ಪರಮೇಶ್ವರ್ ಜೊತೆ ಸಂಪರ್ಕದಲ್ಲಿದ್ದಾರೆ. ಈ ಕುರಿತು ಮಾಧುಸ್ವಾಮಿ ಅವರ ಜೊತೆಗೆ ಕಾಂಗ್ರೆಸ್ ನಾಯಕರು ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ತುಮಕೂರು ಲೋಕಸಭಾ ಕ್ಷೇತ್ರದಿಂದ ಎಸ್‌ಪಿ ಮುದ್ದಹನುಮೇಗೌಡರನ್ನು ಕಣಕ್ಕಿಳಿಸಿದೆ. ಇತ್ತ ತುಮಕೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿಯ ಗೆಲುವಿಗೆ ಕಾಂಗ್ರೆಸ್ ನಾಯಕರು ಬಿಜೆಪಿಯ ಅಸಮಾಧಾನಿತರಿಗೆ ಗಾಳ ಹಾಕುತ್ತಿದೆ.
ಇತ್ತ ಮಾಜಿ ಸಚಿವ ವಿ ಸೋಮಣ್ಣ ಲಿಂಗಾಯತ ಸಮುದಾಯಕ್ಕೆ ಸೇರಿದ್ದರೂ ತುಮಕೂರಿನಲ್ಲಿರುವ ಬಹುಸಂಖ್ಯಾತ ನೊಳಂಬ ಲಿಂಗಾಯತರಲ್ಲದ ಕಾರಣ ಬಿಜೆಪಿಗೆ ಹಿನ್ನಡೆಯಾಗುವ ಸಾಧ್ಯತೆ ಇದೆ. ಹೀಗಾಗಿ ಹಲವು ಲೆಕ್ಕಾಚಾರವನ್ನ ಹಾಕಿಕೊಂಡಿರುವ ಕಾಂಗ್ರೆಸ್ ನಾಯಕರು ಮಾಧುಸ್ವಾಮಿ ಅವರನ್ನ ಪಕ್ಷಕ್ಕೆ ಕರೆತರುವುದರಿಂದ ಕಾಂಗ್ರೆಸ್ ಅಭ್ಯರ್ಥಿಯ ಗೆಲುವಿಗೆ ಸಹಾಯಕವಾಗಲಿದೆ ಎನ್ನುವ ಚರ್ಚೆ ನಡೆದಿದೆ.
2023ರ ವಿಧಾನಸಭಾ ಚುನಾವಣೆಯಲ್ಲಿ ಚಿಕ್ಕನಾಯಕನಹಳ್ಳಿಯಲ್ಲಿ ಮಾಜಿ ಸಚಿವ ಜೆಸಿ ಮಾಧುಸ್ವಾಮಿ ಸೋಲು ಅನುಭವಿಸಿದ್ರು, ಇನ್ನೂ ಸೋಲು ಕಂಡ ಮಾಧುಸ್ವಾಮಿ ಲೋಕಸಭಾ ಟಿಕೆಟ್ ಮೇಲೆ ಕಣ್ಣಿಟ್ಟಿದ್ದರು. ಆದರೆ, ಬಿಜೆಪಿ ನಾಯಕರು ವಿ ಸೋಮಣ್ಣ ಅವರಿಗೆ ಮಣೆ ಹಾಕಿರುವುದು ಮಾಧುಸ್ವಾಮಿ ಅವರ ಅಸಮಾಧಾನಕ್ಕೆ ಕಾರಣವಾಗಿದ್ದು, ಹಲವು ಬಾರಿ ಸ್ವಪಕ್ಷದ ನಾಯಕರ ವಿರುದ್ಧ ಮಾಧುಸ್ವಾಮಿ ಬಹಿರಂಗವಾಗಿ ವಾಗ್ದಾಖಿ ನಡೆಸಿದ್ದಾರೆ.
ಸೋಮಣ್ಣ ಪರ ಪ್ರಚಾರವೂ ಮಾಡುವುದಿಲ್ಲ ಎಂದು ಟಿಕೆಟ್ ಕೈ ತಪ್ಪಿದ ಹಿನ್ನಲೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ವಿರುದ್ಧವಾಗಿಯೂ ಪರೋಕ್ಷವಾಗಿ ಅಸಮಾಧಾನ ಹೊರಹಾಕಿರುವ ಮಾಧುಸ್ವಾಮಿ ಅವರು ಕಾಂಗ್ರೆಸ್ ಸೇರುವುದರಿಂದ ತುಮಕೂರು ಜಿಲ್ಲೆಯ ತಿಪಟೂರು, ತುರುವೇಕೆರೆ, ಚಿಕ್ಕನಾಯಕನಹಳ್ಳಿ, ಗುಬ್ಬಿ, ತುಮಕೂರು ಗ್ರಾಮಾಂತರ, ತುಮಕೂರು ನಗರ ವಿಧಾನಸಭಾ ಕ್ಷೇತ್ರಗಳಲ್ಲಿ ಪಕ್ಷಕ್ಕೆ ಹೆಚ್ಚಿನ ಬಲ ಬರಲಿದೆ ಎಂಬುದು ಕಾಂಗ್ರೆಸ್ ನಾಯಕರ ಲೆಕ್ಕಾಚಾರ.
ಇತ್ತ ಕಾಂಗ್ರೆಸ್ ಸೇರ್ಪಡೆ ಕುರಿತು ಮಾಜಿ ಸಚಿವ ಮಾಧುಸ್ವಾಮಿ ಅವರು ತಮ್ಮ ಆಪ್ತ ವಲಯ ಹಾಗೂ ಅಭಿಮಾನಿಗಳ ಜೊತೆಗೆ ಸಭೆ ನಡೆಸಿ ಮುಂದಿನ ತಿರ್ಮಾನದ ಕುರಿತು ಚರ್ಚೆ ನಡೆಸಿಲಿದ್ದಾರೆ. ಅಲ್ಲದೇ ಈ ವಾರದೊಳಗೆ ಅಂತಿಮ ತೀರ್ಮಾನವನ್ನ ಮಾಧುಸ್ವಾಮಿ ಅವರು ಕೈಗೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications