• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking; ದೇವೇಗೌಡರನ್ನು ಭೇಟಿಯಾದ ಸಚಿವ ಜೆ. ಸಿ. ಮಾಧುಸ್ವಾಮಿ!

|
Google Oneindia Kannada News

ಬೆಂಗಳೂರು, ನವೆಂಬರ್ 16; ಬಿಜೆಪಿನ ನಾಯಕ, ಕಾನೂನು ಸಚಿವ ಜೆ. ಸಿ. ಮಾಧುಸ್ವಾಮಿ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ ಭೇಟಿಯಾದರು. ಈ ಸಂದರ್ಭದಲ್ಲಿ ಮಾಜಿ ಸಚಿವ ಸೊಗಡು ಶಿವಣ್ಣ ಸಹ ಜೊತೆಗಿದ್ದರು.

ಎಚ್. ಡಿ. ದೇವೇಗೌಡರ ಬೆಂಗಳೂರಿನ ಪದ್ಮನಾಭನಗರದ ನಿವಾಸದಲ್ಲಿ ಉಭಯ ಬಿಜೆಪಿ ನಾಯಕರು ದೇವೇಗೌಡರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಈ ಕುರಿತು ಸೊಗಡು ಶಿವಣ್ಣ ಫೇಸ್‌ಬುಕ್ ಪೋಸ್ಟ್ ಹಾಕಿದ್ದಾರೆ. ಭೇಟಿ ಮಾಡಿದ ಚಿತ್ರಗಳನ್ನು ಪೋಸ್ಟ್‌ನಲ್ಲಿ ಸೇರಿಸಿದ್ದಾರೆ.

Breaking; ಸಿದ್ದರಾಮಯ್ಯರನ್ನು ತಮ್ಮ ಕ್ಷೇತ್ರಕ್ಕೆ ಆಹ್ವಾನಿಸಿದ ಸಚಿವ! Breaking; ಸಿದ್ದರಾಮಯ್ಯರನ್ನು ತಮ್ಮ ಕ್ಷೇತ್ರಕ್ಕೆ ಆಹ್ವಾನಿಸಿದ ಸಚಿವ!

ಕರ್ನಾಟಕದ ಹೆಮ್ಮೆಯ ಮುತ್ಸದ್ಧಿ ನಾಯಕರು, ಮಾಜಿ ಪ್ರಧಾನ ಮಂತ್ರಿಗಳಾದ ಶ್ರೀ ಮಾನ್ಯ ಎಚ್. ಡಿ. ದೇವೇಗೌಡ ಅವರನ್ನು ಬೆಂಗಳೂರಿನ ಅವರ ನಿವಾಸಕ್ಕೆ ತೆರಳಿ ಮಾನ್ಯ ಸಚಿವರಾದ ಶ್ರೀ ಜೆ. ಸಿ. ಮಾಧುಸ್ವಾಮಿ ಜೊತೆ ಭೇಟಿ ಮಾಡಲಾಯಿತು ಎಂದು ಬರೆದಿದ್ದಾರೆ.

2023ರ ಚುನಾವಣೆ; ಸಿದ್ದರಾಮಯ್ಯ, ಮಾಧುಸ್ವಾಮಿ ಎದುರಾಳಿಗಳು?2023ರ ಚುನಾವಣೆ; ಸಿದ್ದರಾಮಯ್ಯ, ಮಾಧುಸ್ವಾಮಿ ಎದುರಾಳಿಗಳು?

ಉಭಯ ಕುಶಲೋಪರಿ ವಿಚಾರಿಸಿ, ಮಾನ್ಯ ಸಚಿವರಾದ ಜೆ. ಸಿ. ಮಾಧುಸ್ವಾಮಿ ಮಗಳ ಮದುವೆಯ ಆಮಂತ್ರವನ್ನು ನೀಡಿ ಆಹ್ವಾನಿಸಲಾಯಿತು ಎಂದು ಸೊಗಡು ಶಿವಣ್ಣ ಪೋಸ್ಟ್ ಹಾಕಿದ್ದಾರೆ.

ಸಚಿವ ಜೆ. ಸಿ. ಮಾಧುಸ್ವಾಮಿ ಮಗಳ ವಿವಾಹಕ್ಕೆ ಗಣ್ಯರನ್ನು ಆಹ್ವಾನಿಸುತ್ತಿದ್ದಾರೆ. ಕಳೆದವಾರ ಅವರು ಕುಟುಂಬ ಸಮೇತರಾಗಿ ಮೈಸೂರು ಅರಮನೆಗೆ ಭೇಟಿ ನೀಡಿದ್ದರು, ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರನ್ನು ಆಹ್ವಾನಿಸಿದ್ದರು.

ಜೆ. ಸಿ. ಮಾಧುಸ್ವಾಮಿ, ಸೊಗಡು ಶಿವಣ್ಣ ಇಬ್ಬರು ತುಮಕೂರು ಜಿಲ್ಲೆಯ ಬಿಜೆಪಿ ನಾಯಕರು. 2019ರ ಲೋಕಸಭೆ ಚುನಾವಣೆಯಲ್ಲಿ ದೇವೇಗೌಡರು ತುಮಕೂರು ಕ್ಷೇತ್ರದಲ್ಲಿ ಕಾಂಗ್ರೆಸ್-ಜೆಡಿಎಸ್ ಒಮ್ಮತದ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು.

ಬಿಜೆಪಿಯ ಅಭ್ಯರ್ಥಿ ಜಿ. ಎಸ್. ಬಸವರಾಜು ವಿರುದ್ಧ ದೇವೇಗೌಡರು ಸೋಲು ಕಂಡಿದ್ದರು. ಕೆಲವು ತಿಂಗಳ ಹಿಂದೆ ಅವರು ರಾಜ್ಯಸಭಾ ಸದಸ್ಯರಾಗಿ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ.

English summary
BJP leader and law minister J. C. Madhuswamy met JD(S) supremo and former PM H. D. Devegowda. He invited Devegowda for daughter marriage.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X