ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಎಂ.ಸಿ.ನಾಣಯ್ಯ, ಜೆಡಿಎಸ್‌ ರೆಬಲ್ ಶಾಸಕರು ಕಾಂಗ್ರೆಸ್‌ ಸೇರ್ಪಡೆ

|
Google Oneindia Kannada News

ಮೈಸೂರು, ಮಾರ್ಚ್ 25 : ಜೆಡಿಎಸ್ ಪಕ್ಷದ ಹಲವು ನಾಯಕರು ರಾಹುಲ್ ಗಾಂಧಿ ಸಮ್ಮುಖದಲ್ಲಿ ಇಂದು ಕಾಂಗ್ರೆಸ್ ಪಕ್ಷವನ್ನು ಸೇರಿದರು. ಜೆಡಿಎಸ್‌ನ 7 ಬಂಡಾಯ ಶಾಸಕರು, ಮಾಜಿ ಸಚಿವ ಎಂ.ಸಿ.ನಾಣಯ್ಯ ಅವರು ಕಾಂಗ್ರೆಸ್ ಸೇರ್ಪಡೆಯಾದರು.

ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಭಾನುವಾರ ಸಂಜೆ ಕಾಂಗ್ರೆಸ್ ಪಕ್ಷದ ಬೃಹತ್ ಸಮಾವೇಶ ನಡೆಯಿತು. ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಸಮಾವೇಶ ಉದ್ದೇಶಿಸಿ ಮಾತನಾಡಿದರು.

ಬಿಬಿಎಂಪಿ ಮಾಜಿ ಮೇಯರ್ ಡಿ.ವೆಂಕಟೇಶಮೂರ್ತಿ ಕಾಂಗ್ರೆಸ್‌ಗೆಬಿಬಿಎಂಪಿ ಮಾಜಿ ಮೇಯರ್ ಡಿ.ವೆಂಕಟೇಶಮೂರ್ತಿ ಕಾಂಗ್ರೆಸ್‌ಗೆ

ಸಮಾವೇಶದ ಆರಂಭದಲ್ಲಿ ಜೆಡಿಎಸ್‌ನ 7 ಬಂಡಾಯ ಶಾಸಕರನ್ನು ರಾಹುಲ್ ಗಾಂಧಿ ಅವರು ಪಕ್ಷಕ್ಕೆ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವು ನಾಯಕರು ಉಪಸ್ಥಿತರಿದ್ದರು.

Congress

ಕಾಂಗ್ರೆಸ್ ಸೇರಿದವರು : ಜಮೀರ್ ಅಹಮದ್ ಖಾನ್ (ಚಾಮರಾಜಪೇಟೆ), ಎಚ್.ಸಿ.ಬಾಲಕೃಷ್ಣ (ಮಾಗಡಿ), ಚೆಲುವರಾಯಸ್ವಾಮಿ (ನಾಗಮಂಗಲ), ಅಖಂಡ ಶ್ರೀನಿವಾಸಮೂರ್ತಿ (ಪುಲಿಕೇಶಿ ನಗರ, ಬೆಂಗಳೂರು), ರಮೇಶ ಬಂಡಿಸಿದ್ದೇಗೌಡ (ಶ್ರೀರಂಗಪಟ್ಟಣ), ಇಕ್ಬಾಲ್ ಅನ್ಸಾರಿ (ಗಂಗಾವತಿ), ಭೀಮಾ ನಾಯಕ್ (ಹಗರಿಬೊಮ್ಮನಹಳ್ಳಿ).

ಜೆಡಿಎಸ್‌ ಬಂಡಾಯ ಶಾಸಕರು ಮಾ.25ರಂದು ಕಾಂಗ್ರೆಸ್‌ ಸೇರ್ಪಡೆಜೆಡಿಎಸ್‌ ಬಂಡಾಯ ಶಾಸಕರು ಮಾ.25ರಂದು ಕಾಂಗ್ರೆಸ್‌ ಸೇರ್ಪಡೆ

ಮಾಜಿ ಸಚಿವ, ಹಿರಿಯ ಜೆಡಿಎಸ್ ನಾಯಕ ಎಂ.ಸಿ.ನಾಣಯ್ಯ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮಾಜಿ ಮೇಯರ್, ಬಿಜೆಪಿ ನಾಯಕ ಡಿ.ವೆಂಕಟೇಶಮೂರ್ತಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.

Bengaluru
English summary
7 JD(S) rebel MLA's, Bengaluru Former mayor Venkatesh Murthy, Former minister M.C.Nanaiah joined Congress in the presence of AICC president Rahul Gandhi on March 25, 2018.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X