ಜೆಡಿಎಸ್ ಕೋಮುವಾದ ಸಿದ್ಧಾಂತಕ್ಕೆ ಬದಲಾಗುತ್ತಿರುವುದು ಕಾಣುತ್ತಿದೆ, ಥೇಟ್.. ನಾಗವಲ್ಲಿಯ ತರ!

ಬೆಂಗಳೂರು, ಜುಲೈ 21: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್‌-ಬಿಜೆಪಿ ಮೈತ್ರಿ ಕುರಿತ ಮಾತುಗಳು ಹಲವು ದಿನಗಳಿಂದ ಓಡಾಡುತ್ತಿವೆ. ಕಳೆದ ಬಾರಿ ಕಾಂಗ್ರೆಸ್‌ ಜೊತೆ ಮೈತ್ರಿ ಮಾಡಿಕೊಂಡಿದ್ದ ಜೆಡಿಎಸ್‌ ಈ ಬಾರಿ ಬಿಜೆಪಿಯೊಂದಿಗೆ ಸ್ನೇಹ ಬೆಳೆಸಲಿದೆ ಎನ್ನಲಾಗುತ್ತಿದೆ. ಈ ವಿಚಾರವಾಗಿ ಟ್ವೀಟ್‌ ಮಾಡಿರುವ ಕರ್ನಾಟಕ ಕಾಂಗ್ರೆಸ್‌, ಜೆಡಿಎಸ್‌ ಅನ್ನು 'ನಾಗವಲ್ಲಿ'ಗೆ ಹೋಲಿಸಿ ಟ್ವೀಟ್‌ ಮಾಡಿದೆ.

'ಹೊಸ ರಾಜಕೀಯ ಸಮ್ಮಿಶ್ರಣವೊಂದು ತಯಾರಾಗುತ್ತಿದೆ. ಈಗ ನಮಗಿರುವ ಪ್ರಶ್ನೆ, ಜೆಡಿಎಸ್ ಕೋಮುವಾದವನ್ನು ಅಳವಡಿಸಿಕೊಳ್ಳುತ್ತದೆಯೇ ಅಥವಾ ಬಿಜೆಪಿ ಜಾತ್ಯತೀತತೆಯನ್ನು ಅಳವಡಿಸಿಕೊಳ್ಳುತ್ತದೆಯೇ?' ಎಂದು ಕಾಂಗ್ರೆಸ್‌ ಪ್ರಶ್ನಿಸಿದೆ.

JDS alliance with BJP: Karnataka Congress Slams move of HD Kumaraswamy- Know Details

'ಈ ಬೆಳವಣಿಗೆಗಳನ್ನು ನೋಡುತ್ತಿದ್ದರೆ ಜೆಡಿಎಸ್ ಕೋಮುವಾದ ಸಿದ್ಧಾಂತಕ್ಕೆ ಬದಲಾಗುತ್ತಿರುವುದು ಕಾಣುತ್ತಿದೆ, ಥೇಟ್. ನಾಗವಲ್ಲಿಯ ತರ !!' ಎಂದು ವ್ಯಂಗ್ಯವಾಡಿದೆ.

ಮಾಜಿ ಪ್ರಧಾನಿ ದೇವೇಗೌಡ ಹೇಳಿದ್ದೇನು?

ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ಗುರುವಾರ ರಾತ್ರಿ ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಜೆಡಿಎಸ್ ಶಾಸಕರ ಸಭೆ ನಡೆಸಿದ್ದಾರೆ. ಆ ಬಳಿಕ ಮಾತನಾಡಿದ ಅವರು ಪಕ್ಷವು ಸ್ವತಂತ್ರವಾಗಿ ಹೋರಾಡಲಿದೆ ಎಂದು ಹೇಳಿದ್ದಾರೆ.

ಬಿಜೆಪಿ ನೇತೃತ್ವದ ಎನ್‌ಡಿಎ ಅಥವಾ ಅಥವಾ ಕಾಂಗ್ರೆಸ್‌ ನೇತೃತ್ವದ ಇಂಡಿಯಾ ಮೈತ್ರಿಕೂಟಕ್ಕೆ ತಮ್ಮ ಪಕ್ಷ ಸೇರುವುದಿಲ್ಲವೆಂದು ಅವರು ಖಚಿತಪಡಿಸಿದ್ದಾರೆ.

JDS alliance with BJP: Karnataka Congress Slams move of HD Kumaraswamy- Know Details

ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ದೇವೇಗೌಡ, ರಾಜ್ಯದಲ್ಲಿ ಪ್ರಾದೇಶಿಕ ಪಕ್ಷ ಉಳಿಯಬೇಕಿದೆ ಎಂದು ಪ್ರತಿಪಾದಿಸಿದ್ದಾರೆ.

'ಒಂದು ಕಡೆ ಎನ್‌ಡಿಎ ಇನ್ನೊಂದು ಕಡೆ ಯುಪಿಎ ಇದೆ. ಯಾವ ದಾರಿಯಲ್ಲಿ ಹೋಗಬೇಕೆಂದು ಸೂಚಿಸಿದ್ದೇನೆ. ನನಗೆ ರಾಷ್ಟ್ರ ರಾಜಕಾರಣ ಚೆನ್ನಾಗಿ ಗೊತ್ತಿದ್ದು, ಶಾಸಕರೊಂದಿಗೆ ನನ್ನ ಅನುಭವ ಹಂಚಿಕೊಂಡಿದ್ದೇನೆ. ರಾಜ್ಯದ ಹಿತದೃಷ್ಟಿಯಿಂದ ಪ್ರಾದೇಶಿಕ ಪಕ್ಷ ಉಳಿಯಬೇಕು. ಜನರಿಗೆ ಆಗುತ್ತಿರುವ ಅನ್ಯಾಯವನ್ನು ಎತ್ತಿ ಹಿಡಿದು ಸ್ವತಂತ್ರವಾಗಿ ಹೋರಾಟ ಮಾಡುತ್ತೇವೆ. ಎನ್‌ಡಿಎ ಅಥವಾ ಯುಪಿಎ ಸೇರುವ ಪ್ರಶ್ನೆಯೇ ಇಲ್ಲ' ಎಂದು ದೇವೇಗೌಡ ಹೇಳಿದ್ದಾರೆ.

ಜೆಡಿಎಸ್ ಮೂಲಗಳ ಪ್ರಕಾರ, ಲೋಕಸಭೆ ಚುನಾವಣೆಯಲ್ಲಿ ಪಕ್ಷಕ್ಕೆ ಹಿನ್ನಡೆಯಾಗಬಹುದು ಎಂಬ ಕಾರಣದಿಂದ ಹಲವಾರು ಶಾಸಕರು ಎನ್‌ಡಿಎ ಜೊತೆ ಕೈಜೋಡಿಸಲು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

JDS alliance with BJP: Karnataka Congress Slams move of HD Kumaraswamy- Know Details

ಒಂದು ವೇಳೆ ಜೆಡಿಎಸ್‌ ಎನ್‌ಡಿಎಗೆ ಬೆಂಬಲ ನೀಡಿದರೆ ಹಲವು ಸಮುದಾಯಗಳು ತಮ್ಮ ಪಕ್ಷವನ್ನು ಬೆಂಬಲಿಸದೇ ಕಾಂಗ್ರೆಸ್‌ ಜೊತೆ ಹೋಗಬಹುದು ಎಂದು ಶಾಸಕರು ಅಭಿಪ್ರಾಯಪಟ್ಟಿದ್ದಾರೆ. ನಾಯಕರಲ್ಲಿ ಒಮ್ಮತ ಮೂಡದ ಕಾರಣ ಸದ್ಯಕ್ಕಾದರೂ ಎನ್‌ಡಿಎಯಿಂದ ದೂರ ಉಳಿಯಲು ಜೆಡಿಎಸ್ ನಿರ್ಧರಿಸಿದೆ.

ಬಿಜೆಪಿಗೆ ದಲಿತರ ಏಳಿಗೆಯನ್ನು ಸಹಿಸಲಾಗುತ್ತಿಲ್ಲವೇ?

ಇದೇ ವೇಳೆ, ಬಿಜೆಪಿ ವಿರುದ್ಧವೂ ಹರಿಹಾಯ್ದಿರುವ ಕಾಂಗ್ರೆಸ್‌, 'ಬಿಜೆಪಿಗೆ ದಲಿತರ ರಾಜಕೀಯ ಹಾಗೂ ಸಾಮಾಜಿಕ ಏಳಿಗೆಯನ್ನು ಸಹಿಸಲಾಗುತ್ತಿಲ್ಲವೇ?' ಎಂದು ಪ್ರಶ್ನಿಸಿದೆ.

ದಲಿತರ ತಲೆ ಮೇಲೆ ಚಡ್ಡಿ ಹೊರಿಸಿತ್ತು ಬಿಜೆಪಿ. SCP/TSP ಹಣವನ್ನು ದುರುಪಯೋಗ ಮಾಡಿತ್ತು ಬಿಜೆಪಿ. ದಲಿತರಿಗೆ ಮಾತ್ರ ಚಪ್ಪಲಿ ಕಾಯುವ ಟೆಂಡರ್ ಮೀಸಲಿಟ್ಟಿತ್ತು ಬಿಜೆಪಿ. ಸೆಂಟ್ರಲ್ ವಿಸ್ತಾ, ರಾಮಮಂದಿರದ ಕಾರ್ಯಕ್ರಮಕ್ಕೆ ದಲಿತ ಸಮುದಾಯದ ರಾಷ್ಟ್ರಪತಿಗೆ ಆಹ್ವಾನಿಸಲಿಲ್ಲ ಬಿಜೆಪಿ ಎಂದು ಕಾಂಗ್ರೆಸ್‌ ಆರೋಪಿಸಿದೆ.

ಈಗ ದಲಿತ ಸಮುದಾಯದ ಉಪಸಭಾಪತಿಯ ಮುಖಕ್ಕೆ ಪೇಪರ್ ಎಸೆದು ಅವಮಾನಿಸಿದೆ ಬಿಜೆಪಿ. ದಲಿತರನ್ನು ಬಿಜೆಪಿ ಏಕಿಷ್ಟು ಕೇವಲವಾಗಿ ಕಾಣುತ್ತಿದೆ? ಮನುವಾದವೇ ಬಿಜೆಪಿಯ ಪಕ್ಷದ ಬೈಲಾ ಆಗಿದೆಯೇ? ಎಂದು ಕಾಂಗ್ರೆಸ್‌ ಪ್ರಶ್ನಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+