ಕಾಂಗ್ರೆಸ್ ಪಕ್ಷಕ್ಕೆ 25 ಕೋಟಿಗೆ ಮಾರಾಟವಾದ ಎಸ್.ಟಿ.ಸೋಮಶೇಖರ್: ಜೆಡಿಎಸ್‌ ನಾಯಕ ಹೇಳಿದ್ದೇನು?

ಬೆಂಗಳೂರು, ಫೆಬ್ರವರಿ 27: ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿರುವ ಬಿಜೆಪಿ ಶಾಸಕ ಎಸ್ ಟಿ ಸೋಮಶೇಖರ್ ಅವರ ವಿರುದ್ಧ ಜೆಡಿಎಸ್ ಮತ್ತು ಬಿಜೆಪಿ ಪಕ್ಷದ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು.

ಎಸ್ ಟಿ ಸೋಮಶೇಖರ್ ಅವರು ಕಾಂಗ್ರೆಸ್ ಪಕ್ಷಕ್ಕೆ ಅಡ್ಡಮತ ಹಾಕಿದರು ಎಂಬ ಸುದ್ದಿ ಕಿವಿಗೆ ಬೀಳುತ್ತಿದ್ದಂತೆಯೇ ರೊಚ್ಚಿಗೆದ್ದ ಎರಡೂ ಪಕ್ಷಗಳ ಕಾರ್ಯಕರ್ತರು, ಜೆಡಿಎಸ್ ನಗರ ಘಟಕದ ಅಧ್ಯಕ್ಷರಾದ ಹೆಚ್.ಎಂ.ರಮೇಶ್ ಗೌಡ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು. ಬಿಜೆಪಿ ಪಕ್ಷದಿಂದ ಗೆದ್ದಿದ್ದ ಎಸ್ ಟಿ ಸೋಮಶೇಖರ್ ರಾಜಕೀಯ ಸ್ವಾರ್ಥಕ್ಕಾಗಿ ಪಕ್ಷಕ್ಕೆ ದ್ರೋಹ ಎಸಗಿದ್ದಾರೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

JDS and BJP party workers protest against ST Somashekhar

ಈ ಸಂದರ್ಭದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ರಮೇಶ್ ಗೌಡ ಅವರು, ಶಾಸಕ ಎಸ್ ಟಿ ಸೋಮಶೇಖರ್ ಅವರನ್ನು ಪಕ್ಷಾಂತರ ನಿಷೇಧ ಕಾಯ್ದೆ ಅಡಿಯಲ್ಲಿ ವಿಧಾನಸಭೆ ಸ್ಪೀಕರ್ ಅವರು ಅನರ್ಹಗೊಳಿಸಬೇಕು. ಅಡ್ಡಮತ ಹಾಕಲಿಕ್ಕಾಗಿ ಅವರು ಕಾಂಗ್ರೆಸ್ ನಿಂದ 25 ಕೋಟಿ ರೂಪಾಯಿ ಹಣ ಪಡೆದಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು.

ಒಂದು ವೇಳೆ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸದಿದ್ದರೆ ಕಾನೂನಾತ್ಮಕವಾಗಿ ಹೋರಾಟ ನಡೆಸಲಾಗುವುದು. ಅಲ್ಲದೆ, ನಾಳೆಯಿಂದಲೇ ಬೆಂಗಳೂರು ನಗರದ ಎಲ್ಲಾ ವಿಧಾನಸಭೆ ಕ್ಷೇತ್ರಗಳಲ್ಲಿ ಪ್ರತಿಭಟನೆಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು. ಇದೇ ವೇಳೆ ಸಿಟ್ಟಿಗೆದ್ದ ಕಾರ್ಯಕರ್ತರು ಎಸ್ ಟಿ ಸೋಮಶೇಖರ್ ಪ್ರತಿಕೃತಿಯನ್ನು ದಹನ ಮಾಡಿ ಆಕ್ರೋಶ ವ್ಯಕ್ತಪಡಿಸಿದರು.

ನಗರ ಜೆಡಿಎಸ್ ಜಿ.ಟಿ.ರೇವಣ್ಣ, ಪರಿಶಿಷ್ಟ ವಿಭಾಗದ ವೇಲು, ಯುವ ಘಟಕದ ಯುವ ಕಾರ್ಯಾಧ್ಯಕ್ಷ ಚಂದ್ರಶೇಖರ್, ಮಾದೇಗೌಡ ಹಾಗೂ ಮತ್ತು ಎಲ್ಲಾ ವಿಧಾನಸಭೆ ಕ್ಷೇತ್ರಗಳ ಅಧ್ಯಕ್ಷರು ಹಾಗೂ ಬಿಜೆಪಿಯ ಮುಖಂಡರು, ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.

ಬಿಜೆಪಿ ಅಭ್ಯರ್ಥಿಗೆ ವಿಜಯೇಂದ್ರ ಅಭಿನಂದನೆ

ಇಂದು ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ನಾರಾಯಣಸಾ ಭಾಂಡಗೆ ಅವರು 47 ಮತಗಳನ್ನು ಪಡೆದು ವಿಜಯಶಾಲಿಯಾಗಿದ್ದಾರೆ. ಬಿಜೆಪಿ ಪರವಾಗಿ ಅವರಿಗೆ ಅಭಿನಂದನೆಗಳು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು.

ಮುಂದಿನ ದಿನಗಳಲ್ಲಿ ರಾಜ್ಯಸಭೆಯಲ್ಲಿ ಕರ್ನಾಟಕದ ಪರವಾಗಿ ಧ್ವನಿ ಎತ್ತುವ ಮೂಲಕ ಕನ್ನಡನಾಡಿಗೆ ನ್ಯಾಯ ದೊರಕಿಸುವ ನಿಟ್ಟಿನಲ್ಲಿ ಅವರು ಕೂಡ ಸಕ್ರಿಯವಾಗಿ ತೊಡಗಿಸಿಕೊಳ್ಳುತ್ತಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು. ಅವರ ಗೆಲುವು ಸಂತಸ ತಂದಿದೆ ಎಂದರು.

ಮತ್ತೊಂದು ಕಡೆ ಬಿಜೆಪಿ- ಜೆಡಿಎಸ್ ಮೈತ್ರಿ ಅಭ್ಯರ್ಥಿ ಕುಪೇಂದ್ರ ರೆಡ್ಡಿಯವರು ಕಣದಲ್ಲಿದ್ದರು. ರಾಜ್ಯದ ಕಾಂಗ್ರೆಸ್ ಸರಕಾರದ ಆಡಳಿತದ ಕುರಿತು ಆಡಳಿತ ಪಕ್ಷದ ಶಾಸಕರಲ್ಲೇ ಅಸಮಾಧಾನವಿದೆ. ಅಭಿವೃದ್ಧಿ ಇಲ್ಲದೇ ಇರುವುದು, ಆಡಳಿತ ಪಕ್ಷದ ಶಾಸಕರು ತಮ್ಮ ಕ್ಷೇತ್ರದಲ್ಲಿ ಓಡಾಡಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಹಾಗಾಗಿ ಅವರಲ್ಲಿ ಕೆಲವರು ಬೆಂಬಲ ಕೊಡುವ ನಿರೀಕ್ಷೆ ನಮ್ಮದಾಗಿತ್ತು. ಅವರ ಸೋಲನ್ನು ಹಿನ್ನಡೆ ಎಂದು ಭಾವಿಸದೆ, ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ- ಜೆಡಿಎಸ್ ಮೈತ್ರಿಕೂಟವು ಎಲ್ಲ 28 ಕ್ಷೇತ್ರಗಳಲ್ಲಿ ಗೆಲ್ಲುವ ಮೂಲಕ ಈ ಸರಕಾರಕ್ಕೆ ತಕ್ಕ ಉತ್ತರ ಕೊಡುತ್ತೇವೆ ಎಂದು ತಿಳಿಸಿದರು.

ಎಸ್.ಟಿ.ಸೋಮಶೇಖರ್ ಮತ್ತು ಹೆಬ್ಬಾರ್ ಅವರ ಬಗ್ಗೆ ಪತ್ರಕರ್ತರು ಪ್ರಶ್ನಿಸುವ ಮೊದಲೇ ಮಾತನಾಡಿ, ನಮ್ಮೆಲ್ಲ ಪಕ್ಷದ ಮುಖಂಡರು ಕುಳಿತು ಚರ್ಚೆ ಮಾಡಿದ್ದೇವೆ. ವಕೀಲರ ಜೊತೆಗೂ ಚರ್ಚಿಸಿದ್ದೇವೆ. ವರಿಷ್ಠರ ಜೊತೆ ಚರ್ಚೆ ಮಾಡಿ ಸೂಕ್ತ ನಿರ್ಧಾರ ಕೈಗೊಳ್ಳಲಿದ್ದೇವೆ ಎಂದು ನುಡಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+