ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವಿಧಾನಪರಿಷತ್ ಚುನಾವಣೆ : ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

|
Google Oneindia Kannada News

ಬೆಂಗಳೂರು, ಮಾರ್ಚ್ 10 : ವಿಧಾನಪರಿಷತ್ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಿದೆ. ಶಿಕ್ಷಕರ ಹಾಗೂ ಪದವೀಧರ ಕ್ಷೇತ್ರಗಳಿಂದ ಪರಿಷತ್ತಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಚುನಾವಣೆ ನಡೆಯಲಿದೆ.

ಜೆಡಿಎಸ್‌ ವರಿಷ್ಠ ಎಚ್.ಡಿ.ದೇವೇಗೌಡ ಅವರು ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ. 2018ರ ಜೂನ್‌ನಲ್ಲಿ ವಿಧಾನಪರಿಷತ್ ಚುನಾವಣೆ ನಡೆಯುವ ಸಾಧ್ಯತೆ ಇದೆ.

JDS announced candidates for Legislative council election

ನೈಋತ್ಯ ಪದವೀಧರ ಕ್ಷೇತ್ರ ಪ್ರತಿನಿಧಿಸುವ ಪರಿಷತ್ ಸಭಾಪತಿ ಡಿ.ಎಚ್.ಶಂಕರಮೂರ್ತಿ, ಬೆಂಗಳೂರು ಪದವೀಧರ ಕ್ಷೇತ್ರ ಪ್ರತಿನಿಧಿಸುವ ರಾಮಚಂದ್ರ ಗೌಡ, ಈಶಾನ್ಯ ಪದವೀಧರ ಕ್ಷೇತ್ರ ಪ್ರತಿನಿಧಿಸುವ ಅಮರನಾಥ ಪಾಟೀಲ್.

ವಿಧಾನಪರಿಷತ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಅಂತಿಮ ಪಟ್ಟಿ ಪ್ರಕಟವಿಧಾನಪರಿಷತ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಅಂತಿಮ ಪಟ್ಟಿ ಪ್ರಕಟ

ನೈಋತ್ಯ ಶಿಕ್ಷಕರ ಕ್ಷೇತ್ರ ಪ್ರತಿನಿಧಿಸುವ ಗಣೇಶ್ ಕಾರ್ಣಿಕ್, ದಕ್ಷಿಣ ಶಿಕ್ಷಕರ ಕ್ಷೇತ್ರ ಪ್ರತಿನಿಧಿಸುವ ಮರಿತಿಬ್ಬೇಗೌಡ, ಆಗ್ನೇಯ ಶಿಕ್ಷಕರ ಕ್ಷೇತ್ರ ಪ್ರತಿನಿಧಿಸುವ ರಮೇಶ್ ಬಾಬು ಅವರ ಅವಧಿ ಜೂನ್‌ನಲ್ಲಿ ಅಂತ್ಯಗೊಳ್ಳಲಿದೆ. ಈ ಸ್ಥಾನಗಳನ್ನು ಭರ್ತಿ ಮಾಡಲು ಚುನಾವಣೆ ನಡೆಯಲಿದೆ.

ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ

ಅಭ್ಯರ್ಥಿಗಳ ಪಟ್ಟಿ

ಶಿಕ್ಷಕರ ಕ್ಷೇತ್ರ

* ಮರಿತಿಬ್ಬೇಗೌಡ : ದಕ್ಷಿಣ
* ರಮೇಶ್ ಬಾಬು : ಆಗ್ನೇಯ
* ಎಸ್.ಎಲ್.ಭೋಜೇಗೌಡ : ನೈಋತ್ಯ

ಪದವೀಧರ


* ಎಲ್‌.ಆರ್.ಶಿವರಾಮೇಗೌಡ (ಬೆಂಗಳೂರು)
* ಎನ್.ಪ್ರತಾಪ್ ರೆಡ್ಡಿ (ಈಶಾನ್ಯ)
* ಅಶ್ವಿನ್ ಪೆರಾರ (ನೈಋತ್ಯ)

English summary
JD(S) announced candidates list for Legislative council election form Teachers and Graduates Constituency. Election will be held on June 2018.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X