ಪಶ್ಚಿಮ ಪದವೀಧರ ಕ್ಷೇತ್ರ ಪರಿಷತ್ ಚುನಾವಣೆ: ಜೆಡಿಎಸ್ ಯುಟರ್ನ್
ಬೆಂಗಳೂರು, ಅ. 25: ವಿಧಾನ ಪರಿಷತ್ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ಅಧಿಕೃತ ಅಭ್ಯರ್ಥಿ ಇದ್ದರೂ ಪಕ್ಷೇತರ ಅಭ್ಯರ್ಥಿಗೆ ಬೆಂಬಲ ಘೊಷಣೆ ಮಾಡಿದೆ. ಬದಲಾದ ಪರಿಸ್ಥಿತಿಯಲ್ಲಿ ಕರ್ನಾಟಕ ಪಶ್ಚಿಮ ಪದವಿಧರ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಬಸವರಾಜ ಗುರಿಕಾರ ಅವರಿಗೆ ಜೆಡಿಎಸ್ ಬೆಂಬಲ ಘೋಷಿಸಿದೆ. ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದ ಶಿವಶಂಕರ ಕಲ್ಲೂರ ಅವರು ಚುನಾವಣೆಯಲ್ಲಿ ತಟಸ್ಥವಾಗಿ ಉಳಿದಿದ್ದರಿಂದ ಪಕ್ಷ ಈ ತೀರ್ಮಾನಕ್ಕೆ ಬಂದಿದೆ. ಈ ಹಿನ್ನೆಲೆಯಲ್ಲಿ ಪಕ್ಷೇತರ ಅಭ್ಯರ್ಥಿ ಬಸವರಾಜ ಗುರಿಕಾರ ಅವರಿಗೆ ಬೆಂಬಲ ನೀಡಿದೆ.
ಅನಿವಾರ್ಯ ಕಾರಣಗಳಿಂದ ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ನಾಲ್ಕು ಜಿಲ್ಲೆಗಳಲ್ಲಿ ಪ್ರಚಾರ ಮಾಡಲು ಸಾಧ್ಯವಾಗಲಿಲ್ಲ. ಆ ಕಾರಣಕ್ಕಾಗಿ ಹೈಕಮಾಂಡ್ ಸೂಚನೆ ಮೇರೆಗೆ ಜೆಡಿಎಸ್ ಅಭ್ಯರ್ಥಿ ಶಿವಶಂಕರ ಕಲ್ಲೂರ ಕಣದಿಂದ ಹಿಂದೆ ಸರಿದಿದ್ದು, ಪಕ್ಷೇತರ ಅಭ್ಯರ್ಥಿ ಬಸವರಾಜ ಗುರಿಕಾರಗೆ ಬೆಂಬಲ ನೀಡಲಾಗುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಅವರು ಹುಬ್ಬಳ್ಳಿಯಲ್ಲಿ ಹೇಳಿಕೆ ನೀಡಿದ್ದಾರೆ. ಜೆಡಿಎಸ್ ಬೆಂಬಲದಿಂದ ಆನೆಬಲ ಬಂದಿದೆ. ಹಾಗಾಗಿ ಗೆಲುವು ಖಚಿತ ಎಂದು ಇದೇ ಸಂದರ್ಭದಲ್ಲಿ ಪಕ್ಷೇತರ ಅಭ್ಯರ್ಥಿ ಬಸವರಾಜ ಗುರಿಕಾರ ಹೇಳಿಕೆ ನೀಡಿದ್ದಾರೆ. ಜೆಡಿಎಸ್ ಅಭ್ಯರ್ಥಿಯಾಗಿದ್ದ ಶಿವಾನಂದ್ ಕಲ್ಲೂರ್ ಅವರು ಪಕ್ಷದ ತೀರ್ಮಾನಕ್ಕೆ ಬದ್ಧ ಎಂದು ಹೇಳಿದ್ದಾರೆ.

Recommended Video
ಪಕ್ಷದ ತೀರ್ಮಾನವನ್ನು ಕಾರ್ಯಕರ್ತರು, ಅಭಿಮಾನಿಗಳು, ಹಿತೈಷಿಗಳು, ಸೇರಿದಂತೆ ಎಲ್ಲರೂ ಬೆಂಬಲಿಸಿ, ಚುನಾವಣೆಯಲ್ಲಿ ಬಸವರಾಜ ಗುರಿಕಾರ ಅವರನ್ನು ಹೆಚ್ಚಿನ ಮತಗಳ ಅಂತರದಿಂದ ವಿಧಾನ ಪರಿಷತ್‌ಗೆ ಆಯ್ಕೆ ಮಾಡಬೇಕೆಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರು ಮನವಿ ಮಾಡಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications