ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪಶ್ಚಿಮ ಪದವೀಧರ ಕ್ಷೇತ್ರ ಪರಿಷತ್ ಚುನಾವಣೆ: ಜೆಡಿಎಸ್ ಯುಟರ್ನ್

|
Google Oneindia Kannada News

ಬೆಂಗಳೂರು, ಅ. 25: ವಿಧಾನ ಪರಿಷತ್ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ಅಧಿಕೃತ ಅಭ್ಯರ್ಥಿ ಇದ್ದರೂ ಪಕ್ಷೇತರ ಅಭ್ಯರ್ಥಿಗೆ ಬೆಂಬಲ ಘೊಷಣೆ ಮಾಡಿದೆ. ಬದಲಾದ ಪರಿಸ್ಥಿತಿಯಲ್ಲಿ ಕರ್ನಾಟಕ ಪಶ್ಚಿಮ ಪದವಿಧರ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಬಸವರಾಜ ಗುರಿಕಾರ ಅವರಿಗೆ ಜೆಡಿಎಸ್ ಬೆಂಬಲ ಘೋಷಿಸಿದೆ. ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದ ಶಿವಶಂಕರ ಕಲ್ಲೂರ ಅವರು ಚುನಾವಣೆಯಲ್ಲಿ ತಟಸ್ಥವಾಗಿ ಉಳಿದಿದ್ದರಿಂದ ಪಕ್ಷ ಈ ತೀರ್ಮಾನಕ್ಕೆ ಬಂದಿದೆ. ಈ ಹಿನ್ನೆಲೆಯಲ್ಲಿ ಪಕ್ಷೇತರ ಅಭ್ಯರ್ಥಿ ಬಸವರಾಜ ಗುರಿಕಾರ ಅವರಿಗೆ ಬೆಂಬಲ ನೀಡಿದೆ.

ಅನಿವಾರ್ಯ ಕಾರಣಗಳಿಂದ ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ನಾಲ್ಕು ಜಿಲ್ಲೆಗಳಲ್ಲಿ ಪ್ರಚಾರ ಮಾಡಲು ಸಾಧ್ಯವಾಗಲಿಲ್ಲ. ಆ ಕಾರಣಕ್ಕಾಗಿ ಹೈಕಮಾಂಡ್ ಸೂಚನೆ‌ ಮೇರೆಗೆ ಜೆಡಿಎಸ್ ಅಭ್ಯರ್ಥಿ ಶಿವಶಂಕರ ಕಲ್ಲೂರ ಕಣದಿಂದ ಹಿಂದೆ ಸರಿದಿದ್ದು, ಪಕ್ಷೇತರ ಅಭ್ಯರ್ಥಿ ಬಸವರಾಜ ಗುರಿಕಾರಗೆ ಬೆಂಬಲ ನೀಡಲಾಗುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಅವರು ಹುಬ್ಬಳ್ಳಿಯಲ್ಲಿ ಹೇಳಿಕೆ ನೀಡಿದ್ದಾರೆ. ಜೆಡಿಎಸ್ ಬೆಂಬಲದಿಂದ ಆನೆಬಲ ಬಂದಿದೆ. ಹಾಗಾಗಿ ಗೆಲುವು ಖಚಿತ ಎಂದು ಇದೇ ಸಂದರ್ಭದಲ್ಲಿ ಪಕ್ಷೇತರ ಅಭ್ಯರ್ಥಿ ಬಸವರಾಜ ಗುರಿಕಾರ ಹೇಳಿಕೆ ನೀಡಿದ್ದಾರೆ. ಜೆಡಿಎಸ್ ಅಭ್ಯರ್ಥಿಯಾಗಿದ್ದ ಶಿವಾನಂದ್ ಕಲ್ಲೂರ್ ಅವರು ಪಕ್ಷದ ತೀರ್ಮಾನಕ್ಕೆ ಬದ್ಧ ಎಂದು ಹೇಳಿದ್ದಾರೆ.

JDS announced support to independent candidate Basavaraja Gurikar in West Graduates Constituency

Recommended Video

Corona ಓಡಿಸೋ ಸಮಯ ದೂರ ಇಲ್ಲಾ | Corona Vaccine | Oneindia Kannada

ಪಕ್ಷದ ತೀರ್ಮಾನವನ್ನು ಕಾರ್ಯಕರ್ತರು, ಅಭಿಮಾನಿಗಳು, ಹಿತೈಷಿಗಳು, ಸೇರಿದಂತೆ ಎಲ್ಲರೂ ಬೆಂಬಲಿಸಿ, ಚುನಾವಣೆಯಲ್ಲಿ ಬಸವರಾಜ ಗುರಿಕಾರ ಅವರನ್ನು ಹೆಚ್ಚಿನ ಮತಗಳ ಅಂತರದಿಂದ ವಿಧಾನ ಪರಿಷತ್‌ಗೆ ಆಯ್ಕೆ ಮಾಡಬೇಕೆಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರು ಮನವಿ ಮಾಡಿದ್ದಾರೆ.

English summary
The JDS has announced its support for Basavaraja Gurikar, independent candidate from the Western Graduate Constituency. The party has come to the conclusion that Shivshankar Kallur, who contested as a JDS candidate, remained neutral in the election. Know more,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X