JDS Candidate List: ಮೂರು ಕ್ಷೇತ್ರಗಳಿಗೆ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ: ಮಂಡ್ಯದ ಟಿಕೆಟ್‌ ಯಾರಿಗೆ?

ಬೆಂಗಳೂರು, ಮಾರ್ಚ್‌ 26: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಠಕ್ಕರ್‌ ಕೊಡುವ ನಿಟ್ಟಿನಲ್ಲಿ ಮೈತ್ರಿ ಮಾಡಿಕೊಂಡಿರುವ ಬಿಜೆಪಿ ಹಾಗೂ ಜೆಡಿಎಸ್‌ 28 ಕ್ಷೇತ್ರಗಳ ಫೈಕಿ ಬಿಜೆಪಿ 25 ಜೆಡಿಎಸ್‌ ಮೂರು ಕ್ಷೇತ್ರಗಳನ್ನ ಹಂಚಿಕೊಂಡಿದ್ದು, ಜೆಡಿಎಸ್‌ ಕೊನೆಗೂ ಅಭ್ಯರ್ಥಿಗಳ ಆಯ್ಕೆ ಫೈನಲ್ ಮಾಡಿದೆ.

28 ಕ್ಷೇತ್ರಗಳ ಫೈಕಿ ಮೂರು ಕ್ಷೇತ್ರಗಳಾದ ಕೋಲಾರ, ಮಂಡ್ಯ ಮತ್ತು ಹಾಸನ ಲೋಕಸಭಾ ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ನಿರೀಕ್ಷೆಯಂತೆ ಹಾಸನದಿಂದ ಪ್ರಜ್ವಲ್ ರೇವಣ್ಣ ಸ್ಪರ್ಧೆ ಮಾಡಲಿದ್ದಾರೆ. ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಎಚ್‌.ಡಿ ಕುಮಾರಸ್ವಾಮಿ ಅವರೇ ಕಣಕ್ಕಿಳಿಯಲಿದ್ದಾರೆ. ಅಲ್ಲದೇ ಕೋಲಾರ ಲೋಕಸಭಾ ಕ್ಷೇತ್ರದ ಟಿಕೆಟ್ ಮಲ್ಲೇಶ್ ಬಾಬುಗೆ ನೀಡಲಾಗಿದೆ

JDS Announces Candidates List For Three Loksabha Constituency

ಇನ್ನೂ ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಸಮೃದ್ಧಿ ಮಂಜುನಾಥ, ಮಲ್ಲೇಶ್ ಬಾಬು ಹಾಗೂ ನಿಸರ್ಗ ನಾರಾಯಣಸ್ವಾಮಿ ಅವರು ಟಿಕೆಟ್‌ಗಾಗಿ ದಳಪತಿಗಳ ಮುಂದೆ ಬೇಡಿಕೆ ಇಟ್ಟಿದ್ರು. ಆದರೆ ಕೊನೆ ಕ್ಷಣದವರೆಗೂ ಸಮೃದ್ಧಿ ಮಂಜುನಾಥ್ ಹೆಸರು ಮುಂಚೂಣಿಯಲ್ಲಿತ್ತು. ಆದರೆ, ಅಂತಿಮವಾಗಿ ಮಲ್ಲೇಶ್ ಬಾಬು ಅವರಿಗೆ ದಳಪತಿಗಳು ಟಿಕೆಟ್‌ ನೀಡಿದ್ದಾರೆ.

ಇತ್ತ ಜೆಡಿಎಸ್‌ ನಾಯಕರಿಗೆ ಪ್ರತಿಷ್ಠೆಯ ಕ್ಷೇತ್ರವಾದ ಮಂಡ್ಯ ಲೋಕಸಭಾ ಕ್ಷೇತ್ರದಿಂದ ನಿಖಿಲ್ ಕುಮಾರಸ್ವಾಮಿ ಅಥವಾ ಎಚ್​ಡಿ ಕುಮಾರಸ್ವಾಮಿ ಸ್ಪರ್ಧೆ ಮಾಡಬೇಕೆಂದು ಜಿಲ್ಲೆಯ ನಾಯಕ, ಮುಖಂಡರು ಆಗ್ರಹಿಸಿದ್ದರು. ಈ ನಡುವೆ ಕುಮಾರಸ್ವಾಮಿ ಅವರು ಜೆಡಿಎಸ್‌ ನಾಯಕ ಸಿ ಎಸ್‌ ಪುಟ್ಟರಾಜು ಅವರನ್ನ ಕಣಕ್ಕಿಳಿಸುವುದಾಗಿ ಹೇಳಿದ್ರು. ಆದರೆ, ಮಂಡ್ಯ ಕಾರ್ಯಕರ್ತರು ಕುಮಾರಸ್ವಾಮಿ ಅವರು ಸ್ಪರ್ಧೆ ಮಾಡಬೇಕು ಎಂದು ಪಟ್ಟು ಹಿಡಿದಿದ್ರು.

ಇತ್ತ ಮತ್ತೊಂದು ಕುಮಾರಸ್ವಾಮಿ ಅವರು ಚನ್ನಪಟ್ಟಣ ಬಿಟ್ಟು ಮಂಡ್ಯಗೆ ಹೋಗಬಾರದು ಎಂದು ಚನ್ನಪಟ್ಟಣ ಕಾರ್ಯಕರ್ತರು ಪಟ್ಟು ಹಿಡಿದಿದ್ದರು. ಆದರೆ, ಅಂತಿಮವಾಗಿ ಮಂಡ್ಯ ಕಾರ್ಯಕರ್ತರ ಒತ್ತಡಕ್ಕೆ ಕುಮಾರಸ್ವಾಮಿ ಅವರು ಮಣಿದಿದ್ದು, ಸ್ಪರ್ಧೆ ಒಪ್ಪಿಗೆ ಸೂಚಿಸಿದ್ದಾರೆ.

ಇನ್ನೂ ಹಾಸನದಲ್ಲಿ ಮಾಜಿ ಪ್ರಧಾನಿ ಹಾಗೂ ಜೆಡಿಎಸ್‌ ವರಿಷ್ಠರಾದ ಎಚ್.ಡಿ.ದೇವೇಗೌಡರು ಮಾತನಾಡಿ, ಕುಮಾರಸ್ವಾಮಿಗಿಂತ ಹೆಚ್ಚಾಗಿ ಮಂಡ್ಯದ ಜನ ಅವರನ್ನು ಬಿಡುತ್ತಿಲ್ಲ. ಜನ ಬಿಡ್ತಿಲ್ಲ, ನೀವೇ ಬನ್ನಿ ಅಂತಿದ್ದಾರೆ. ಆಸ್ಪತ್ರೆಯಿಂದ ಬಂದ ಕೂಡಲೇ ಬನ್ನಿ ಎಂದರು. ನೀವೇ ನಿಲ್ಲಬೇಕು ಅಂತ ಹಠ ಮಾಡುತ್ತಾರೆ. ಇವತ್ತು ಕೋರ್ ಕಮಿಟಿ ಸಭೆಯಲ್ಲು ನೀವೇ ನಿಲ್ಲಬೇಕು ಎಂದರು. ಕೋಲಾರದ್ದು ಬೇರೆ ಪ್ರಶ್ನೆಯೇ ಇಲ್ಲ, ಮಲ್ಲೇಶ್ ಬಾಬು ಅವನೇ ಅಭ್ಯರ್ಥಿ ಎಂದು ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+