ಜೆಡಿಎಸ್-ಬಿಜೆಪಿ ಮೈತ್ರಿ: ಹಾಸನ-ಮಂಡ್ಯದಲ್ಲಿ ದಳಪತಿಗಳ ಬದ್ಧವೈರಿಗಳ ಕಥೆ ಏನು ?
ಬೆಂಗಳೂರು, ಸೆಪ್ಟೆಂಬರ್ 23: ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಕಾಂಗ್ರೆಸ್ ಗೆ, ಲೋಕಸಭಾ ಚುನಾವಣೆಯಲ್ಲಿ ಸೋಲಿನ ರುಚಿ ತೋರಿಸಲು ಬಿಜೆಪಿ ಹಾಗೂ ಜೆಡಿಎಸ್ ಅಧಿಕೃತವಾಗಿ ಮೈತ್ರಿ ಮಾಡಿಕೊಂಡಿದೆ. ಆದರೆ, ಹಾಸನ ಹಾಗೂ ಮಂಡ್ಯ ಕ್ಷೇತ್ರಗಳಲ್ಲಿ ಬದ್ದವೈರಿಗಳಾಗದ್ದ ನಾಯಕರ ಮುಂದಿನ ನಡೆ ಏನು ಎನ್ನುವ ಪ್ರಶ್ನೆ ಹುಟ್ಟಿಕೊಂಡಿದೆ.
ಹೌದು, 2019 ರ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಸ್ಪರ್ಧೆ ನಡೆಸಿ ಗೆಲುವು ಸಾಧಿಸಿದ ಹಾಲಿ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರು, ಈ ಬಾರಿಯೂ ಸಹ ಮಂಡ್ಯ ಕ್ಷೇತ್ರದಲ್ಲೇ ಸ್ಪರ್ಧೆ ಮಾಡುತ್ತೇನೆ. ಮಂಡ್ಯ ಕ್ಷೇತ್ರವನ್ನ ಬಿಟ್ಟು ಬೇರೆ ಕ್ಷೇತ್ರಕ್ಕೆ ಹೋಗಲ್ಲ ಎಂದು ಈ ಹಿಂದೆ ಹೇಳಿಕೆ ನೀಡಿದ್ರು.

ಆದರೆ, ಶುಕ್ರವಾರ ಬಿಜೆಪಿ ನಾಯಕರಾದ ಅಮಿತ್ ಶಾ ಹಾಗೂ ಜೆ ಪಿ ನಡ್ಡಾ ಅವರನ್ನ ಭೇಟಿ ಮಾಡಿರುವ ಮಾಜಿ ಸಿಎಂ ಹಾಗೂ ಜೆಡಿಎಸ್ ನಾಯಕ ಎಚ್ ಡಿ ಕುಮಾರಸ್ವಾಮಿ ಮೈತ್ರಿ ಬಗ್ಗೆ ಹಾಗೂ ಕ್ಷೇತ್ರ ಹಂಚಿಕೆ ಕುರಿತು ಚರ್ಚೆ ನಡೆಸಿದ್ದಾರೆ.
ಈಗಾಗಲೇ 28 ಕ್ಷೇತ್ರಗಳ ಪೈಕಿ ಜೆಡಿಎಸ್ ಐದು ಸ್ಥಾನಗಳನ್ನ ಕೇಳಿದ್ದು, ಬಿಜೆಪಿ ನಾಲ್ಕು ಸ್ಥಾನಗಳನ್ನ ನೀಡಲು ಒಪ್ಪಿಗೆ ಸೂಚಿಸಿದೆ ಎನ್ನಲಾಗಿದೆ. ಬಹುಮುಖ್ಯವಾಗಿ ಕಳೆದುಕೊಂಡ ಕ್ಷೇತ್ರವನ್ನ ಮತ್ತೆ ಪಡೆಯಬೇಕು ಎಂದು ದಳಪತಿಗಳು ಪ್ಲಾನ್ ಹಾಕಿಕೊಂಡಿದ್ದು, ಅದರಂತೆಯೇ ದಳಪತಿಗಳ ಮೊದಲ ಟಾರ್ಗೆಟ್ ಮಂಡ್ಯ ಕ್ಷೇತ್ರವಾಗಿದೆ. ಹಳೇ ಮೈಸೂರು ಭಾಗ ಜೆಡಿಎಸ್ ಭದ್ರ ಕೋಟೆಯಾಗಿದ್ದು, ಕೈ ತಪ್ಪಿದ ಕ್ಷೇತ್ರವನ್ನ ಮರಳಿ ಪಡೆಯಲು ಕುಮಾರಸ್ವಾಮಿ ಸಿದ್ದತೆ ನಡೆಸಿದ್ದಾರೆ.
ಜೆಡಿಎಸ್ ನಾಯಕರು ಈಗಾಗಲೇ ಬಿಜೆಪಿ ನಾಯಕ ಬಳಿ ಮಂಡ್ಯ, ಹಾಸನ, ತುಮಕೂರು,ಕೋಲಾರ ಹಾಗೂ ಬೆಂಗಳೂರು ಗ್ರಾಮಾಂತರ ಕ್ಷೇತ್ರವನ್ನ ಕೇಳಿದ್ದಾರೆ. ಈ ಐದು ಕ್ಷೇತ್ರದಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರವನ್ನ ಬಿಟ್ಟು ಉಳಿದ ನಾಲ್ಕು ಸ್ಥಾನಗಳು ಜೆಡಿಎಸ್ ಗೆ ಸಿಗಲಿದೆ.
ಅಂದ್ರೆ ಹಾಸನ ಹಾಗೂ ಮಂಡ್ಯದಲ್ಲಿ 2019 ರ ಲೋಕಸಭಾ ಚುನಾವಣೆ ಮತ್ತು 2023 ರ ವಿಧಾನಸಭಾ ಚುನಾವಣೆಯಲ್ಲಿ ದೇವೇಗೌಡ ಕುಟುಂಬದ ವಿರುದ್ದ ಹಾಗೂ ಎಚ್ ಡಿ ಕುಮಾರಸ್ವಾಮಿ ವಿರುದ್ದ ವಾಗ್ದಾಳಿ ನಡೆಸಿದ್ದ ಆ ಇಬ್ಬರು ನಾಯಕರ ಮುಂದಿನ ನಡೆ ಏನು ಎನ್ನುವ ಚರ್ಚೆ ಹುಟ್ಟಿಕೊಂಡಿದೆ.
ಈ ಬಾರೀ ಲೋಕಸಭಾ ಚುನಾವಣೆಯಲ್ಲಿ ಮಂಡ್ಯದಿಂದ ಜೆಡಿಎಸ್ ಅಭ್ಯರ್ಥಿ ಕಣಕ್ಕಿಳಿಯಲಿದ್ದು, ಮಂಡ್ಯದಲ್ಲಿ ಕುಮಾರಸ್ವಾಮಿ ಕುಟುಂಬದ ಪ್ರಬಲ ರಾಜಕೀಯ ಎದುರಾಳಿ ಸುಮಲತಾ ಈಗಾಗಲೇ ಬಿಜೆಪಿ ಗೆ ಬೆಂಬಲ ಸೂಚಿಸಿ, ಅದರ ಜೊತೆಗೇ ಇರುವ ಸುಮಲತಾ ಜೆಡಿಎಸ್ ಅಭ್ಯರ್ಥಿ ಪರ ಕೆಲಸ ಮಾಡಬೇಕಾಗುತ್ತದೆ. ಅಕಸ್ಮಾತ್ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ನಿಖಿಲ್ ಕುಮಾರಸ್ವಾಮಿ ಮತ್ತೆ ಮಂಡ್ಯ ಕ್ಷೇತ್ರದ ಅಭ್ಯರ್ಥಿ ಆದರೆ, ಮಂಡ್ಯ ಮತ್ತಷ್ಟು ಕುತೂಹಲಕ್ಕೆ ಕಾರಣವಾಗಲಿದೆ.
ಬಿಜೆಪಿ ಹೈಕಮಾಂಡ್ ಸೂಚನೆಯಂತೆ ಮಂಡ್ಯದಲ್ಲಿ ಒಂದು ವೇಳೆ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಮಾಡಿದರೇ ಇತ್ತ ಹಾಲಿ ಸಂಸದೆ ಆಗಿರುವ ಸುಮಲತಾ ಅಂಬರೀಶ್ ಅವರ ಮುಂದಿನ ನಡೆ ಏನು ಎನ್ನುವ ಪ್ರಶ್ನೆ ಉದ್ಭವವಾಗಿದೆ.
ಹಾಲಿ ಸಂಸದರಾಗಿ ಉತ್ತಮವಾಗಿ ತಮ್ಮ ಅವಧಿಯನ್ನ ಪೂರ್ಣಗೊಳಿಸಿರುವ ಸುಮಲತಾ ಮುಂದಿನ 2024 ರ ಚುನಾವಣೆಗೂ ತಯಾರಿಯನ್ನ ನಡೆಸಿದ್ದು, ಲೋಕಸಮರದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯಿಂದ ಮಂಡ್ಯ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿ ಕಣಕ್ಕಿಳಿಯಲಿದ್ದು, ಜೆಡಿಎಸ್ ಅಭ್ಯರ್ಥಿ ಪರ ಸುಮಲತಾ ಪ್ರಚಾರ ನಡೆಸಬೇಕಾಗುತ್ತದೆ.
ಬಹುತೇಕ ಮಂಡ್ಯ ಕ್ಷೇತ್ರವನ್ನ ಬಿಜೆಪಿಯೂ ಜೆಡಿಎಸ್ ಗೆ ಬಿಟ್ಟುಕೊಡಲಿದೆ. ಇತ್ತ ಬಿಜೆಪಿ ಹೈಕಮಾಂಡ್ ಸುಮಲತಾ ಅವರಿಗೆ ಟಿಕೆಟ್ ನೀಡದೇ ಇದ್ದಲಿ, ಹೊಸ ಜವಾಬ್ದಾರಿಯನ್ನ ನೀಡುವ ಸಾಧ್ಯತೆ ಇದೆ. ಈ ಹಿಂದೆ ಮಂಡ್ಯ ಸಂಸದರಾದ ಸುಮಲತಾ ಅವರು ಬೆಂಗಳೂರಿನಿಂದ ಸ್ಪರ್ಧೆ ಮಾಡುತ್ತಾರೆ ಎನ್ನುವ ಮಾತಗಳು ಕೇಳಿಬಂದಿದ್ದು, ಈ ಬಾರಿ ಚುನಾವಣೆಗೆ ಟಿಕೆಟ್ ಕೈ ತಪ್ಪಿದರೇ ಸುಮಲತಾ ಜೆಡಿಎಸ್ ಪರ ಪ್ರಚಾರ ಮಾಡುತ್ತಾರಾ ಎನ್ನುವ ಪ್ರಶ್ನೆ ಮೂಡಿದೆ.
ಅಲ್ಲದೇ ಹಾಲಿ ಸಂಸದೆ ಸುಮಲತಾ ಅಂಬರೀಷ್ ಅವರು ಮಂಡ್ಯದಿಂದ ಹೊರಬಂದು ಬೆಂಗಳೂರಿನ ಭಾಗದಲ್ಲಿ ಸ್ಪರ್ಧಿಸುವ ಸಾಧ್ಯತೆ ಇದೆ. ಒಟ್ನಾಲಿ ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿಯಿಂದಾಗಿ ಮಂಡ್ಯ ಗೌಡ್ತಿ ನಡೆ ಏನು ಎನ್ನುವುದು ಸದ್ಯ ಕುತೂಹಲಕ್ಕೆ ಕಾರಣವಾಗಿದೆ.

ಮೈತ್ರಿಗೆ ಪ್ರೀತಂ ಗೌಡ ವಿರೋಧ; ಮುಂದಿನ ನಡೆ ನಿಗೂಢ?
ಹೌದು, ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠರಾದ ಹೆಚ್ ಡಿ ದೇವೇಗೌಡ ಅವರ ಕುಟುಂಬದ ರಾಜಕೀಯ ಎದುರಾಳಿಯಾಗಿರುವ ಮಾಜಿ ಶಾಸಕ ಪ್ರೀತಂ ಗೌಡ ಅವರು ಸಹ ಲೋಕಸಭಾ ಚುನಾವಣಗೆ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯನ್ನ ತೀವ್ರವಾಗಿ ವಿರೋಧಿಸಿದ್ದಾರೆ. ಅಲ್ಲದೇ ಹಾಸನದಲ್ಲಿ ತಮ್ಮದೇ ಆದ ಪ್ರಬಲ್ಯವನ್ನ ಹೊಂದಿರುವ ಪ್ರೀತಂ ಗೌಡ 2023 ರ ವಿಧಾನಸಭಾ ಚುನಾವಣೆಯಲ್ಲಿ ಸೋಲು ಅನುಭವಿಸಿದ್ರು.
ಇನ್ನೂ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಹಾಸಕ ಕ್ಷೇತ್ರದಿಂದ ಸ್ಪರ್ಧಿಸುವ ಇಚ್ಚೆ ಹೊಂದಿದ್ದ ಮಾಜಿ ಶಾಸಕ ಪ್ರೀತಂಗೌಡ ತೆರೆಮರೆಯಲ್ಲಿಯೇ ತಯಾರಿ ನಡೆಸಿದ್ದರು. ಆದರೆ, ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯಿಂದಾಗಿ ಬೇಸರಗೊಂಡಿರುವ ಪ್ರೀತಂ ಗೌಡ, ನಾನು ಬಿಜೆಪಿಯ ಒಬ್ಬ ನಿಷ್ಠಾವಂತ ಕಾರ್ಯಕರ್ತನಾಗಿ ಜೆಡಿಎಸ್ ಪಕ್ಷ ಉಳಿಸೋದಕ್ಕೆ ನಾವ್ಯಾಕೆ ಸಹಕಾರ ಮಾಡಬೇಕು.
ಯಾವುದೇ ಕಾರಣಕ್ಕೂ ನಮ್ಮಿಂದ ಅದು ಸಾಧ್ಯವಿಲ್ಲ. ಅವರ ಕಾರ್ಯಕರ್ತರನ್ನ, ಅವರ ಪಕ್ಷವನ್ನ ಉಳಿಸಿಕೊಳ್ಳೋದಕ್ಕೆ ಮೈತ್ರಿ ಅನಿವಾರ್ಯ ಇದೆ ಅಂತಾ ಹೇಳಿದರೆ ಆ ಮೈತ್ರಿಯ ಅವಶ್ಯಕತೆ ಬಿಜೆಪಿಗೆ ಇಲ್ಲ ಎಂದು ಪ್ರೀತಂಗೌಡ ಮೈತ್ರಿ ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ.
ಒಟ್ನಲಿ, ಹಾಸನದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣ ಹಾಗೂ ಜೆಡಿಎಸ್ ವಿರುದ್ದ ತೀವ್ರ ವಾಗ್ದಾಳಿ ನಡೆಸಿದ್ದ ಮಾಜಿ ಶಾಸಕ ಪ್ರೀತಂ ಗೌಡ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಗೆ ಬೆಂಬಲವನ್ನ ನೀಡುತ್ತಾರಾ? ಎಂಬ ಪ್ರಶ್ನೆ ಹುಟ್ಟಿಕೊಂಡಿದ್ದು, ಸದ್ಯ ಪ್ರೀತಂಗೌಡ ನಡೆ ನಿಗೂಢವಾಗಿದೆ ಎಂದು ಹೇಳಲಾಗಿದೆ.












Click it and Unblock the Notifications