ಜೆಡಿಎಸ್ -ಬಿಎಸ್ಪಿ ಚುನಾವಣಾ ಪೂರ್ವ ಮೈತ್ರಿ, ಫೆ.8ರಂದು ಅಧಿಕೃತ ಘೋಷಣೆ
ಬೆಂಗಳೂರು, ಫೆಬ್ರವರಿ 07 : ಜಾತ್ಯಾತೀತ ಜನತಾ ದಳ ಹಾಗೂ ಬಹುಜನ ಸಮಾಜವಾದಿ ಪಕ್ಷ ನಡುವೆ ಚುನಾವಣಾ ಪೂರ್ವ ಮೈತ್ರಿ ಸಾಧಿಸಲಾಗಿದೆ. ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಹಾಗೂ ಉತ್ತರಪ್ರದೇಶದ ಮಾಜಿ ಸಿಎಂ, ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಅವರು ಈ ಮೈತ್ರಿಗೆ ಸಮ್ಮತಿಸಿದ್ದಾರೆ.
ಗುರುವಾರ ಮಧ್ಯಾಹ್ನ 12 ಗಂಟೆ ಸುಮಾರಿಗೆ ಮೈತ್ರಿ ಕುರಿತಂತೆ ಅಧಿಕೃತ ಘೋಷಣೆಯನ್ನು ಮಾಡಲಾಗುತ್ತದೆ. ಆನೆ ಗುರುತು ಹಾಗೂ ತೆನೆ ಹೊತ್ತ ಮಹಿಳೆ ಜೊತೆ ಜೊತೆಯಾಗಿ ಕರ್ನಾಟಕ ವಿಧಾನಸಭಾ ಚುನಾವಣೆ ಎದುರಿಸುವುದು ಖಾತ್ರಿಯಾಗಿದೆ.

ಜೆಡಿಎಸ್ ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ದಾನೀಶ್ ಅಲಿ ಹಾಗೂ ಬಹುಜನ ಸಮಾಜವಾದಿ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸತೀಶ್ ಚಂದ್ರ ಮಿಶ್ರಾ ಅವರು ಈ ಚುನಾವಣಾ ಪೂರ್ವ ಮೈತ್ರಿ ಕುರಿತಂತೆ ದೆಹಲಿಯಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿ ಘೋಷಿಸಲಿದ್ದಾರೆ.












Click it and Unblock the Notifications