ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪುಟ್ಟಣ್ಣ ಬಿಜೆಪಿಗೆ; ಎಂಎಲ್‌ಸಿಗೆ ತಿರುಗೇಟು ನೀಡಿದ ಜೆಡಿಎಸ್!

|
Google Oneindia Kannada News

ಬೆಂಗಳೂರು, ಅಕ್ಟೋಬರ್ 31 : ಜೆಡಿಎಸ್ ನಾಯಕ, ಎಂಎಲ್‌ಸಿ ಪುಟ್ಟಣ್ಣ ಬಿಜೆಪಿ ತೊರೆಯುವುದಾಗಿ ಘೋಷಣೆ ಮಾಡಿದ್ದಾರೆ. ಪಕ್ಷ ಅವರಿಗೆ ತಿರುಗೇಟು ನೀಡಲು ಸಜ್ಜಾಗಿದ್ದು, ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಅಭ್ಯರ್ಥಿ ಅಂತಿಮಗೊಳಿಸಿದೆ.

ಬುಧವಾರ ರಾಮನಗರಲ್ಲಿ ಪುಟ್ಟಣ್ಣ, "ನಾನು ಜೆಡಿಎಸ್ ಬಿಡಲು ತೀರ್ಮಾನಿಸಿದ್ದೇನೆ. ಮುಂದಿನ ದಿನಗಳಲ್ಲಿ ಪತ್ರಿಕಾಗೋಷ್ಠಿ ನಡೆಸಿ ಈ ಕುರಿತು ಪ್ರಕಟಣೆ ಮಾಡುತ್ತೇನೆ" ಎಂದು ಹೇಳಿದ್ದರು.

ಜೆಡಿಎಸ್‌ಗೆ ಹಿನ್ನಡೆ; ಬಿಜೆಪಿ ಸೇರಲಿದ್ದಾರೆ ಎಂಎಲ್‌ಸಿ ಪುಟ್ಟಣ್ಣಜೆಡಿಎಸ್‌ಗೆ ಹಿನ್ನಡೆ; ಬಿಜೆಪಿ ಸೇರಲಿದ್ದಾರೆ ಎಂಎಲ್‌ಸಿ ಪುಟ್ಟಣ್ಣ

ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್ ಸದಸ್ಯರಾಗಿ ಪುಟ್ಟಣ್ಣ ಮೂರು ಬಾರಿ ಆಯ್ಕೆಯಾಗಿದ್ದಾರೆ. ಅವರ ಪರಿಷತ್ ಸದಸ್ಯತ್ವದ ಅವಧಿ 2020ರ ತನಕ ಇದೆ. ಈಗ ಅವರು ಬಿಜೆಪಿಯಿಂದ ಕಣಕ್ಕಿಳಿಯುವುದು ಖಚಿತವಾಗಿದೆ.

ಜೆಡಿಎಸ್‌ಗೆ ಕೈ ಕೊಡಲಿದ್ದಾರೆ ಎಂಎಲ್‌ಸಿ ಪುಟ್ಟಣ್ಣಜೆಡಿಎಸ್‌ಗೆ ಕೈ ಕೊಡಲಿದ್ದಾರೆ ಎಂಎಲ್‌ಸಿ ಪುಟ್ಟಣ್ಣ

JDS Candidate Final For Bangalore Teachers Constituency

ಕ್ಷೇತ್ರವನ್ನು ಉಳಿಸಿಕೊಳ್ಳಬೇಕು ಎಂದು ತಂತ್ರ ರೂಪಿಸಿರುವ ಜೆಡಿಎಸ್, ಮುಂದಿನ ಜೂನ್‌ನಲ್ಲಿ ನಡೆಯಲಿರುವ ಚುನಾವಣೆಗೆ ಅಭ್ಯರ್ಥಿ ಅಂತಿಮಗೊಳಿಸಿದೆ. ಎ. ಪಿ. ರಂಗನಾಥ್ ಪರಿಷತ್ ಚುನಾವಣಾ ಕಣಕ್ಕಿಳಿಯಲಿದ್ದಾರೆ.

ಜೆಡಿಎಸ್ ಅಸಮಾಧಾನಿತ ನಾಯಕರ ಸಭೆ ರದ್ದು; ಹೊರಟ್ಟಿ ಹೇಳಿದ್ದೇನು?ಜೆಡಿಎಸ್ ಅಸಮಾಧಾನಿತ ನಾಯಕರ ಸಭೆ ರದ್ದು; ಹೊರಟ್ಟಿ ಹೇಳಿದ್ದೇನು?

ಬೆಂಗಳೂರು ವಕೀಲರ ಸಂಘದ ಅಧ್ಯಕ್ಷರಾಗಿರುವ ಎ. ಪಿ. ರಂಗನಾಥ್ ಜೆಡಿಎಸ್ ಪಕ್ಷದ ಜೊತೆ ಗುರುತಿಸಿಕೊಂಡಿದ್ದಾರೆ. ಅವರಿಗೆ ಟಿಕೆಟ್ ನೀಡಿ ಪರಿಷತ್ ಚುನಾವಣೆ ಗೆಲ್ಲುವುದು ಜೆಡಿಎಸ್ ತಂತ್ರವಾಗಿದೆ.

ಜೆಡಿಎಸ್ ಪಕ್ಷದ ಚಟುವಟಿಕೆಯಿಂದ ದೂರವಾಗಿರುವ ಪುಟ್ಟಣ್ಣ, ಬಿಜೆಪಿ ಸೇರುವುದು ಖಚಿತವಾಗಿದೆ. "ಜೆಡಿಎಸ್‌ನ ಬಹುತೇಕ ಪರಿಷತ್ ಸದಸ್ಯರು ಬಿಜೆಪಿ ಸೇರುವ ತೀರ್ಮಾನಕ್ಕೆ ಬಂದಿದ್ದೇವೆ" ಎಂದು ಅವರು ಹೇಳಿರುವುದು ಕುತೂಹಲಕ್ಕೆ ಕಾರಣವಾಗಿದೆ.

ಎಚ್. ಡಿ. ಕುಮಾರಸ್ವಾಮಿ ವಿರುದ್ಧ ವಿಧಾನ ಪರಿಷತ್ ಸದಸ್ಯರು ಅಸಮಾಧಾನಗೊಂಡಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರವಿದ್ದಾಗ ಕುಮಾರಸ್ವಾಮಿ ಪರಿಷತ್ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ. ಯಾವುದೇ ಹುದ್ದೆ ನೀಡಿಲ್ಲ ಎಂಬುದು ಅಸಮಾಧಾನಕ್ಕೆ ಕಾರಣ.

English summary
JD(S) MLC Puttanna who elected from Bangalore teachers constituency all set to quit party. JD(S) finalized candidate for the constituency for the election which will be held on June 2020.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X