ಹಾಸನ ಟಿಕೆಟ್‌ ಫೈಟ್; ಯಾವ ಬಂಡಾಯವಿದ್ದರೂ ಅದಕ್ಕೆ ಸೊಪ್ಪು ಹಾಕಲ್ಲ ಎಂದು ರೇವಣ್ಣ ವಿರುದ್ಧ ಟಾಂಗ್‌ ಕೊಟ್ಟ ಎಚ್ಡಿಕೆ

ಬೆಂಗಳೂರು, ಏಪ್ರಿಲ್1‌ : ವಿಧಾನಸಭೆ ಚುನಾವಣೆ ಘೋಷಣೆಗೂ ಮುನ್ನವೇ ಜೆಡಿಎಸ್‌ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿರುವ ದಳಪತಿಗಳಿಗೆ ಎರಡನೇ ಪಟ್ಟಿಯನ್ನು ದೊಡ್ಡ ಕಗ್ಗಂಟಾಗಿದೆ.

ಈಗಾಗಲೇ ಎರಡನೇ ಪಟ್ಟಿ ರೆಡಿಯಾಘಿದ್ದು, ಹಾಸನ ಟಿಕೆಟ್‌ ರೇವಣ್ಣ ಅವರ ಕುಟುಂಬದವರು ಪಟ್ಟು ಹಿಡಿದು ಕುಳಿತಿದ್ದಾರೆ. ಇತ್ತ ಸಾಮಾನ್ಯ ಕಾರ್ಯಕರ್ತನಿಗೆ ಟಿಕೆಟ್‌ ನೀಡುವುದಾಗಿ ಹೇಳಿದ ಕುಮಾರಸ್ವಾಮಿ ಅವರು ನನ್ನ ಮಾತಿಗೆ ನಾನು ಬದ್ದನಾಗಿದ್ದೇನೆ ಎಂದು ಹೇಳುತ್ತಲೇ ಬಂದಿದ್ದು, ಕೊನೆಗೆ ಎರಡನೇ ಪಟ್ಟಿ ಬಿಡುಗಡೆಗೆ ಕಾಲ ಕೂಡಿ ಬಂದಿದೆ.

JDS Candidates 2nd List Will Be Release On April 3 Says HD Kumaraswamy

ಹೌದು, ಏಪ್ರಿಲ್‌ 3 ರಂದು ಜೆಡಿಎಸ್‌ ಎರಡನೇ ಪಟ್ಟಿ ಬಿಡುಗಡೆ ಮಾಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಹೇಳಿದ ಅವರು, ಹಾಸನ‌ ನಾಯಕರು ಭೇಟಿ ಮಾಡಿ ಚರ್ಚೆ ಮಾಡಿದ್ದಾರೆ. ಯಾವ ಬಂಡಾಯವಿದ್ದರೂ ಅದಕ್ಕೆ ಸೊಪ್ಪು ಹಾಕಲ್ಲ ಎಂದು ಪರೋಕ್ಷವಾಗಿ ಎಚ್‌ ಡಿ ರೇವಣ್ಣ ಅವರಿಗೆ ಟಾಂಗ್‌ ನೀಡಿದ್ಧಾರೆ.

ಹಾಸನ ಟಿಕೆಟ್‌ ವಿಚಾರವಾಗಿ ನಾನು ಈಗಾಗಲೇ ಹಲವಾರು ಬಾರಿ ಹೇಳಿದ್ದೇನೆ. ಪಕ್ಷದ ಕಾರ್ಯಕರ್ತರ ಅಭಿಪ್ರಾಯಕ್ಕೆ ಸ್ಪಂದಿಸುತ್ತೇವೆ, ಯಾವ ಒತ್ತಡ ಹಾಕಿದರೂ ಇಲ್ಲ, ಕಾರ್ಯಕರ್ತರೇ ಅಂತಿಮ
ನಾನು ಕಾರ್ಯಕರ್ತರ ಭಾವನೆಗೆ ಸ್ಪಂದಿಸುತ್ತೇವೆ ಎಂದು ಹೇಳಿದ್ದಾರೆ.

ಕಳೆದ ಚುನಾವಣೆಯಲ್ಲಿ ಯಲಹಂಕದಲ್ಲಿ ಎರಡನೇ ಸ್ಥಾನ ಪಡೆದು ಜನತೆ ಆಶಿರ್ವಾದ ಪಡೆದಿದ್ದರು. ಈ ಬಾರಿ ಕಾರ್ಯಕರ್ತರಲ್ಲಿ ಉತ್ಸಾಹ ಇದೆ. 2013ರಲ್ಲಿ ಚಂದ್ರಣ್ಣ ನಮ್ಮ ಅಭ್ಯರ್ಥಿ ಆಗಿದ್ರೂ,
ಜೆಡಿಎಸ್ ಗೆಲ್ಲಿಸಲು ಇಂದಿನಿಂದ ಸಕ್ರಿಯ ಆಗಿದ್ದಾರೆ. ಮುನೇಗೌಡರು ಅಭ್ಯರ್ಥಿ ಅಂತ ಘೋಷಣೆಯಾದ ಬಳಿಕ ಕಾರ್ಯಕರ್ತರಲ್ಲಿ ಉತ್ಸಾಹ ಬಂದಿದೆ. ಯಲಹಂಕ ವಿಧಾನಸಭಾ ಕ್ಷೇತ್ರದಲ್ಲಿ ಜನ ನೊಂದಿದ್ದಾರೆ, ದೌರ್ಜನ್ಯ ರಾಜಕಾರಣ ನಡೀತಿದೆ ಎಂದು ಪರೋಕ್ಷವಾಗಿ ಯಲಹಂಕ ಶಾಸಕ ಎಸ್. ಆರ್.ವಿಶ್ವನಾಥ್ ವಿರುದ್ಧ ವಾಗ್ದಾಳಿ ನಡೆಸಿದರು.

JDS Candidates 2nd List Will Be Release On April 3 Says HD Kumaraswamy

ಒಬ್ಬರನ್ನು ತುಳಿಯಲು ಇನ್ನೊಬ್ಬರನ್ನು ಬೆಳೆಸುತ್ತಾರೆ ಎಂಬ ನಾರಾಯಣಗೌಡರ ಹೇಳಿಕೆ ಕುರಿತು ಮಾತನಾಡಿ, ನಾರಾಯಣಗೌಡರನ್ನು ಬೆಳೆಸೋಕೆ ನನ್ನ ಪಕ್ಷವನ್ನು ಹಾಳು ಮಾಡಿಕೊಳ್ಳಬೇಕಾ? ಇವರು ಮಹಾನ್ ಕೆಲಸ ಮಾಡಿದ್ದಾರೆ ಅಂತ ಹೇಳಿ ನಾನು ಅಭ್ಯರ್ಥಿ ಹಾಕದೇ‌ ಇರಲಾ? ಕೃಷ್ಣ ವಿರುದ್ದ ಅಭ್ಯರ್ಥಿ ಆಗಬೇಕು ಅಂತ ಬಂದಾಗ ಅವತ್ತು ಈ ಪರಿಜ್ಞಾನ ಇರಲಿಲ್ಲವಾ ಇವರಿಗೆ? ಎಂದು ಪ್ರಶ್ನಿಸಿದರು.

ಇನ್ನೂ ಕೃಷ್ಣ ವಿರುದ್ದ ಅಭ್ಯರ್ಥಿ ಆಗೋಕೆ ಯಾಕೆ ಬಂದರು ಇವರು. ಎರಡನೇ ಬಾರಿ ನಿನಗೆ ಟಿಕೆಟ್ ಕೊಡಬಾರದು ಅಂತ ಇದ್ದಿದ್ದು. ಆದರೂ ಟಿಕೆಟ್ ಕೊಟ್ಟೆವು. ನಾನು ಟಿಕೆಟ್ ಕೊಡಿಸಿದ್ದು ನಾನು. ಕುತ್ತಿಗೆ ಕೊಯ್ದು ಹೋದವನು ಈ ವ್ಯಕ್ತಿ. ನಿನ್ನಿಂದ ನಾವು ಪಾಠ ಕಲಿಯಬೇಕಿಲ್ಲ. ನಾವು ಯಾವ ರೀತಿ ನಡೆದುಕೊಳ್ಳಬೇಕು ಅಂತ ನಮಗೆ ಗೊತ್ತಿದೆ. ನಿನ್ನ ಕಾಲ ಮುಗಿದಿದೆ ಎಂದು ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯ ವಿಧಾನಸಭೆ ಚುನಾವಣೆ ಸಿದ್ಧತೆಯ ಭಾಗವಾಗಿ ಶನಿವಾರ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಪಕ್ಷದ ಎಲ್ಲ ಶಾಸಕರು, ಅಭ್ಯರ್ಥಿಗಳಿಗೆ ಆನ್ಲೈನ್ ವೇದಿಕೆಯ ಮಹತ್ವದ ಟಿಪ್ಸ್ ನೀಡಿದರು.

ಬೆಳಗ್ಗೆ ಹತ್ತು ಗಂಟೆ ಸುಮಾರಿಗೆ ಜೆಪಿ ನಗರದ ತಮ್ಮ ನಿವಾಸದಿಂದಲೇ ಸಭೆ ನಡೆಸಿದ ಅವರು, ಕೆಲ ಅಭ್ಯರ್ಥಿಗಳಿಗೆ ಚಾಟಿ ಬೀಸಿದರು. ಅಲ್ಲದೆ, ಚುನಾವಣೆಯನ್ನು ಲಘುವಾಗಿ ಪರಿಗಣಿಸಬಾರದು ಹಾಗೂ ಗೆಲುವಿನ ಅವಕಾಶ ಕಳೆದುಕೊಳ್ಳಬೇಡಿ ಎಂದು ಕಿವಿಮಾತು ಹೇಳಿದರು.

ಪಕ್ಷದ ಕಚೇರಿಯಿಂದ ಬರುವ ಸೂಚನೆಗಳನ್ನು ಪಾಲಿಸಲು ಸೂಚನೆ ನೀಡಿದ ಮಾಜಿ ಮುಖ್ಯಮಂತ್ರಿಗಳು, ಮತದಾನಕ್ಕೆ ಇನ್ನೂ 37 ದಿನ ಇದೇ, ಇದು ನಿಮಗೆಲ್ಲ ಅಗ್ನಿಪರೀಕ್ಷೆ. ಕ್ಷೇತ್ರದಲ್ಲಿ ಏನಾದರೂ ಸಮಸ್ಯೆ ಇದ್ದರೆ ಬಗೆಹರಿಸಿಕೊಳ್ಳಿ. ಕಾರ್ಯಕರ್ತರು, ಮುಖಂಡರನ್ನು ಒಟ್ಟಿಗೆ ಕರೆದುಕೊಂಡು ಹೋಗಿ ಎಂದು ಅಭ್ಯರ್ಥಿಗಳಿಗೆ ತಿಳಿಸಿದರು.

ಪಂಚರತ್ನ ರಥಯಾತ್ರೆ ಯಶಸ್ವಿ ಆಗಿದೆ. ಮೈಸೂರಿನಲ್ಲಿ ಸಮಾರೋಪ ಸಮಾವೇಶ ಯಶಸ್ವಿ ಆಗಿದೆ. ಪಂಚರತ್ನ ಯೋಜನೆಗಳನ್ನು ಮನೆ ಮನೆಗೂ ತೆಗೆದುಕೊಂಡು ಹೋಗಿ. ಯೋಜನೆಗಳ ಬಗ್ಗೆ ಜನರಿಗೆ ಮನದಟ್ಟು ಮಾಡಿಕೊಡಿ ಎಂದು ಅಭ್ಯರ್ಥಿಗಳಿಗೆ ಎಚ್‌ ಡಿ ಕುಮಾರಸ್ವಾಮಿ ಸೂಚಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+