ಇಂದಿನಿಂದ 5ದಿನ ದೇವೇಗೌಡರಿಂದ ಉತ್ತರ ಕರ್ನಾಟಕ ಪ್ರವಾಸ

Posted By:
Subscribe to Oneindia Kannada

ಬೆಂಗಳೂರು, ಆಗಸ್ಟ್ 18 : ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ ದೇವೇಗೌಡ ಇಂದಿನಿಂದ 5ದಿನಗಳ ವರೆಗೆ ಉತ್ತರ ಕರ್ನಾಟಕ ಪ್ರವಾಸ ಕೈಗೊಂಡಿದ್ದಾರೆ.

2018ರ ವಿಧಾನಸಭೆ ಚುನಾವಣೆ ದೃಷ್ಠಿಯಿಂದ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಿಗೆ ಭೇಟಿ ನೀಡಿ ಪ್ರಚಾರ ನಡೆಸಲಿದ್ದಾರೆ.

JDS chief H D Deve Gowda to tour North Karnataka for 5 days from today

ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಉತ್ತರ ಕರ್ನಾಟಕದಲ್ಲಿ ಹೆಚ್ಚು ಸ್ಥಾನ ಗೆಲ್ಲಬೇಕೆನ್ನುವ ಗುರಿ ಇಟ್ಟುಕೊಂಡಿರುವ ಜೆಡಿಎಸ್ ಮೇಲಿಂದ ಮೇಲೆ ಉತ್ತರ ಕರ್ನಾಟಕ ಪ್ರವಾಸ ಕೈಗೊಂಡಿದೆ.

ಈಗಾಗಲೇ ಒಂದು ಸುತ್ತಿನ ಪ್ರವಾಸ ಮುಗಿಸಿರುವ ಕುಮಾರಸ್ವಾಮಿ ಆರೋಗ್ಯ ಸಮಸ್ಯೆಯಿಂದ ಒಂದು ವಾರ ವಿಶ್ರಾಂತಿಯಲ್ಲಿರುವುದರಿಂದ ದೇವೇಗೌಡರು ಪ್ರವಾಸ ಆರಂಭಿಸಿದ್ದಾರೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Former Prime Minister and JDS chief H D Deve Gowda will tour north Karnataka for 5 days from today.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ