ಜಮೀರ್ ಸೇರಿ 7 ಶಾಸಕರ ನಾಮಪತ್ರ ತಿರಸ್ಕರಿಸುವಂತೆ ಜೆಡಿಎಸ್ ಮನವಿ

ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡಿದ್ದ ಏಳು ಜನ ಶಾಸಕರ ನಾಮಪತ್ರವನ್ನು ಅಂಗೀಕರಿಸದಂತೆ ಜೆಡಿಎಸ್ ಪಕ್ಷವು ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

ಪಕ್ಷದ ವಿಪ್​ ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಈ ಏಳು ಮಂದಿಯನ್ನು ಅನರ್ಹಗೊಳಿಸುವಂತೆ ಸಲ್ಲಿಸಲಾಗಿದ್ದ ಅರ್ಜಿ ನ್ಯಾಯಾಲಯದಲ್ಲಿದೆ. ಹೀಗಾಗಿ ಎಲ್ಲ ಏಳು ಮಂದಿ ಮಾಜಿ ಶಾಸಕರ ನಾಮಪತ್ರಗಳನ್ನು ಅಂಗೀಕರಿಸಬಾರದು ಎಂದು ಮಂಡ್ಯ ಜಿಲ್ಲಾ ಜೆಡಿಎಸ್​ ಅಧ್ಯಕ್ಷ ಡಿ. ರಮೇಶ್​ ಅವರು ಆಯಾ ವಿಭಾಗದ ಚುನಾವಣಾ ಅಧಿಕಾರಿಗಳಿಗೆ ದೂರು ಸಲ್ಲಿಸಿದ್ದಾರೆ. ಪ್ರಕರಣ ಕುರಿತು ತೀರ್ಪು ಇನ್ನೂ ಪ್ರಕಟವಾಗಬೇಕಿದೆ.

ಜೆಡಿಎಸ್‌ ಪಕ್ಷದ ವಿಪ್‌ ಉಲ್ಲಂಘಿಸಿ ಏಳು ಜನ ಶಾಸಕರು ಅಡ್ಡಮತದಾನ ಮಾಡಿ ಪಕ್ಷದಿಂದ ಉಚ್ಛಾಟನೆಗೊಂಡಿದ್ದರು. ಆದರೀಗ ಏಳೂ ಜನ ಶಾಸಕರು ಕಾಂಗ್ರೆಸ್ ಪಕ್ಷ ಸೇರಿದ್ದು ಕಾಂಗ್ರೆಸ್‌ನಿಂದ ಟಿಕೆಟ್ ಗಿಟ್ಟಿಸಿಕೊಂಡಿದ್ದಾರೆ.

jds complaint against expelled MLAs to election commission

ಜಮೀರ್ ಅಹ್ಮದ್, ಎನ್.ಚಲುವರಾಯಸ್ವಾಮಿ, ಮಾಗಡಿ ಬಾಲಕೃಷ್ಣ, ರಮೇಶ್ ಬಂಡಿಸಿದ್ದೇಗೌಡ, ಭೀಮಾನಾಯಕ್, ಅಖಂಡ ಶ್ರೀನಿವಾಸಮೂರ್ತಿ, ಇಕ್ಬಾಲ್ ಅನ್ಸಾರಿ ಅವರನ್ನು ಅನರ್ಹಗೊಳಿಸುವಂತೆ ಜೆಡಿಎಸ್​ ಹೈಕೋರ್ಟ್​ನಲ್ಲಿ ಅರ್ಜಿ ಸಲ್ಲಿಸಿದ್ದು, ಈ ಸಂಬಂಧ ವಿಚಾರಣೆ ನಡೆಸಿರುವ ಹೈಕೋರ್ಟ್​ ಮೇ 7 ಒಳಗೆ ತೀರ್ಪು ಪ್ರಕಟಿಸುವಂತೆ ಸ್ಪೀಕರ್​ಗೆ ಆದೇಶ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+