ಸಿಎಂ ಸ್ಥಾನದ ಆಕಾಂಕ್ಷಿ ಸಿದ್ದರಾಮಯ್ಯ ವಿರುದ್ಧ ಗಂಭೀರ ಆರೋಪ!

ಬೆಂಗಳೂರು, ಮೇ 17; ಕರ್ನಾಟಕ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟಗೊಂಡಿದೆ. ಕಾಂಗ್ರೆಸ್ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಸರ್ಕಾರ ರಚನೆ ಪ್ರಕ್ರಿಯೆ ನಡೆಯುತ್ತಿದ್ದು, ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಯಾಗಿದ್ದಾರೆ. ಇಂತಹ ಸಮಯದಲ್ಲಿಯೇ ಅವರ ವಿರುದ್ಧ ಗಂಭೀರ ಆರೋಪ ಕೇಳಿ ಬಂದಿದೆ.

ಮಾಜಿ ಸಚಿವ, ಚಿಕ್ಕಬಳ್ಳಾಪುರದಲ್ಲಿ ಈ ಬಾರಿಯ ಚುನಾವಣೆಯಲ್ಲಿ ಸೋಲು ಕಂಡ ಡಾ. ಕೆ. ಸುಧಾಕರ್ ಬುಧವಾರ ಬೆಳಗ್ಗೆ ಮಾಡಿರುವ ಟ್ವೀಟ್ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ. ಈ ಟ್ವೀಟ್ 2018ರ ಚುನಾವಣೆ ಬಳಿಕ ರಾಜ್ಯದಲ್ಲಿ ಅಸ್ತಿತ್ವಕ್ಕೆ ಬಂದಿದ್ದ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದ ಕುರಿತು.

Sudhakar Tweet Against Siddaramaiah Govt

ಸುಧಾಕರ್ ತಮ್ಮ ಟ್ವೀಟ್‌ನಲ್ಲಿ, '2018ರಲ್ಲಿ ಅಂದಿನ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದಲ್ಲಿ ನಮಗಾಗುತ್ತಿದ್ದ ಅನ್ಯಾಯದ ಬಗ್ಗೆ ಹೇಳಿಕೊಳ್ಳಲು ಶಾಸಕರುಗಳು ಸಮನ್ವಯ ಸಮಿತಿ ಅಧ್ಯಕ್ಷರಾಗಿದ್ದ ಮಾನ್ಯ ಸಿದ್ದರಾಮಯ್ಯನವರ ಬಳಿ ಹೋದಾಗಲೆಲ್ಲ ಈ ಸರ್ಕಾರದಲ್ಲಿ ನನ್ನದೇ ಏನು ನಡೆಯುತ್ತಿಲ್ಲ, ನನ್ನ ಕ್ಷೇತ್ರದ, ನನ್ನ ಜಿಲ್ಲೆಯ ಕೆಲಸಗಳೇ ಆಗುತ್ತಿಲ್ಲ ಎಂದು ಹೇಳುತ್ತಿದ್ದರು'

'2019ರ ಲೋಕಸಭೆ ಚುನಾವಣೆವರೆಗೂ ಸಹಿಸಿಕೊಳ್ಳಿ, ಲೋಕಸಭೆ ಚುನಾವಣೆ ಮುಗಿದ ನಂತರ ಯಾವುದೇ ಕಾರಣಕ್ಕೂ ಒಂದು ದಿವಸವೂ ಮಾನ್ಯ ಕುಮಾರಸ್ವಾಮಿ ಅವರ ನೇತೃತ್ವದ ಈ ಸಮ್ಮಿಶ್ರ ಸರ್ಕಾರ ಇರಲು ಬಿಡುವುದಿಲ್ಲ ಎಂದು ಶಾಸಕರುಗಳಿಗೆ ಸಮಾಧಾನ ಮಾಡುತ್ತಿದ್ದರು'

Sudhakar Tweet Against Siddaramaiah Govt

'ನಮ್ಮ ಕ್ಷೇತ್ರಗಳಲ್ಲಿ ನಮ್ಮನ್ನು ನಂಬಿದ ಕಾರ್ಯಕರ್ತರನ್ನ, ಮುಖಂಡರನ್ನ ಉಳಿಸಿಕೊಳ್ಳಲು ದೊಡ್ಡ ರಿಸ್ಕ್ ತೆಗೆದುಕೊಂಡು ರಾಜೀನಾಮೆ ಕೊಟ್ಟು ಮತ್ತೊಮ್ಮೆ ಜನರಿಂದ ಆರಿಸಿ ಬಂದು ಮಂತ್ರಿಗಳಾದೆವು. ನಮ್ಮ ನಡೆಯಲ್ಲಿ ಮಾನ್ಯ ಸಿದ್ದರಾಮಯ್ಯನವರ ಪ್ರೇರಣೆ, ಪರೋಕ್ಷ ಅಥವಾ ಅಪರೋಕ್ಷ ಪಾತ್ರ ಇಲ್ಲವೆಂದು ಸಿದ್ದರಾಮಯ್ಯನವರು ನಿರಾಕರಿಸಲು ಸಾಧ್ಯವೇ?' ಎಂದು ಸುಧಾಕರ್ ಪ್ರಶ್ನೆ ಮಾಡಿದ್ದಾರೆ.

ಸಿದ್ದರಾಮಯ್ಯ ವಿರುದ್ಧ ಆರೋಪ; 2018ರ ಚುನಾವಣೆ ಬಳಿಕ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೊಂಡಿತು. ಎಚ್. ಡಿ. ಕುಮಾರಸ್ವಾಮಿ ಮುಖ್ಯಮಂತ್ರಿಯಾದರು. ಆದರೆ 17 ಶಾಸಕರು ರಾಜೀನಾಮೆ ನೀಡಿದ ಬಳಿಕ ಮೈತ್ರಿ ಸರ್ಕಾರ ಬಹುಮತ ಕಳೆದುಕೊಂಡು ಪತನಗೊಂಡಿತು. ಆಗ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮನ್ವಯ ಸಮಿತಿಯ ಅಧ್ಯಕ್ಷರಾಗಿದ್ದರು.

Sudhakar Tweet Against Siddaramaiah Govt

ಮೈತ್ರಿ ಸರ್ಕಾರ ಪತನಗೊಂಡ ಬಳಿಕ ಜೆಡಿಎಸ್ ನಾಯಕರು ಮೈತ್ರಿ ಸರ್ಕಾರ ಪತನಕ್ಕೆ ಸಿದ್ದರಾಮಯ್ಯ ಕಾರಣ ಎಂದು ಆರೋಪ ಮಾಡುತ್ತಿದ್ದರು. ಎಚ್. ಡಿ. ಕುಮಾರಸ್ವಾಮಿ ಇದೇ ವಿಚಾರವನ್ನು ಪದೇ ಪದೇ ಹೇಳುವ ಮೂಲಕ ವಾಗ್ದಾಳಿ ನಡೆಸುತ್ತಿದ್ದರು. ಈಗ ಸುಧಾಕರ್ ಮಾಡಿರುವ ಟ್ವೀಟ್ ಚರ್ಚೆಗೆ ಕಾರಣವಾಗಿದೆ.

ಒಕ್ಕಲಿಗರು ಸಿಎಂ ಆಗಲಿ; ಡಾ. ಕೆ. ಸುಧಾಕರ್ ಸಿದ್ದರಾಮಯ್ಯ ವಿರುದ್ಧ ಟ್ವೀಟ್ ಮಾಡುತ್ತಿರುವುದು ಇದೇ ಮೊದಲಲ್ಲ. ಮೇ 14ರಂದು ಟ್ವೀಟ್ ಮಾಡಿದ್ದ ಅವರು, 'ಸನ್ಮಾನ್ಯ ಎಸ್. ಎಂ. ಕೃಷ್ಣ ಅವರ ನಂತರ ಒಕ್ಕಲಿಗ ಸಮುದಾಯದ ನಾಯಕರೊಬ್ಬರು ಸ್ಪಷ್ಟ ಬಹುಮತದೊಂದಿಗೆ ನಾಡಿನ ಆಡಳಿತದ ಚುಕ್ಕಾಣಿ ಹಿಡಿಯಲಿದ್ದಾರೆ ಎಂಬ ವಿಶ್ವಾಸದಿಂದ ಈ ಬಾರಿ ಒಕ್ಕಲಿಗ ಸಮಾಜ ಕಾಂಗ್ರೆಸ್ ಪಕ್ಷವನ್ನ ಬೆಂಬಲಿಸಿದ್ದು, ಹಳೇ ಮೈಸೂರು ಭಾಗದಲ್ಲಿ ಜೆಡಿಎಸ್‌ನ ಶೇ 5 ಮತಗಳು ಕಾಂಗ್ರೆಸ್ ಪಕ್ಷಕ್ಕೆ ವರ್ಗಾವಣೆಯಾಗಿರುವುದೇ ಇದಕ್ಕೆ ಸಾಕ್ಷಿ' ಎಂದು ಹೇಳಿದ್ದರು.

'ಒಕ್ಕಲಿಗ ಸಮುದಾಯದ ಈ ನಿರೀಕ್ಷೆಯನ್ನ ಕಾಂಗ್ರೆಸ್ ಪಕ್ಷ ಹುಸಿಯಾಗಿಸುವುದಿಲ್ಲ, ನಾಡಿಗೆ ಅನ್ನ ನೀಡುವ ಅನ್ನದಾತರ ಸಮುದಾಯವಾದ ಒಕ್ಕಲಿಗ ಸಮಾಜ ಕಾಂಗ್ರೆಸ್ ಪಕ್ಷದ ಮೇಲಿಟ್ಟಿರುವ ಈ ನಂಬಿಕೆಗೆ ದ್ರೋಹ ಎಸಗುವುದಿಲ್ಲ ಎಂದು ಭಾವಿಸುತ್ತೇನೆ' ಎಂದು ಟ್ವೀಟ್ ಮಾಡುವ ಮೂಲಕ ಡಿ. ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗಬೇಕು ಎಂದು ಪರೋಕ್ಷವಾಗಿ ಹೇಳಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+