ಚಾಮರಾಜಪೇಟೆಯಲ್ಲಿ ಜಮೀರ್ ಸೋಲಿಸಲು ಗೌಡರ ತಂತ್ರವೇನು?
Recommended Video

ಬೆಂಗಳೂರು, ಫೆಬ್ರವರಿ 08 : ಬೆಂಗಳೂರು ನಗರದ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರ ಈ ಬಾರಿ ಕುತೂಹಲದ ಕಣವಾಗಿದೆ. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ವಿರೋಧ ಕಟ್ಟಿಕೊಂಡಿರುವ ಜಮೀರ್ ಅಹಮದ್ ಖಾನ್ ಗೆಲುವು ಸಾಧಿಸುವರೇ ಕಾದು ನೋಡಬೇಕು.
ರಾಜ್ಯಸಭೆಯ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬೆಂಬಲಿಸಿದ ಚಾಮರಾಜಪೇಟೆ ಶಾಸಕ ಜಮೀರ್ ಅಹಮದ್ ಖಾನ್ ಜೆಡಿಎಸ್‌ನಿಂದ ಅಮಾನತುಗೊಂಡಿದ್ದಾರೆ. ಅವರು ಕಾಂಗ್ರೆಸ್ ಸೇರಲು ಪ್ರಯತ್ನ ನಡೆಸುತ್ತಿದ್ದು, 2018ರ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಸಾಧ್ಯತೆ ಇದೆ.
2005ರಲ್ಲಿ ನಡೆದ ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಜಮೀರ್ ಅಹಮದ್ ಖಾನ್ ನಂತರ ಕ್ಷೇತ್ರದಲ್ಲಿ ಸೋಲು ಕಂಡಿಲ್ಲ. ಸತತ ಮೂರು ಬಾರಿ ಗೆಲುವು ಸಾಧಿಸಿ ಹ್ಯಾಟ್ರಿಕ್ ಹಿರೋ ಎನಿಸಿಕೊಂಡಿದ್ದಾರೆ.
ಕಳೆದ ಬಾರಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ನಿವೃತ್ತ ಪೊಲೀಸ್ ಅಧಿಕಾರಿ ಜಿ.ಎ.ಬಾವಾ ಅವರು ಈ ಬಾರಿಯೂ ಟಿಕೆಟ್ ಆಕಾಂಕ್ಷಿ. ಜಮೀರ್ ಅಹಮದ್ ಅವರಿಗೆ ಟಿಕೆಟ್ ಖಚಿತವಾದರೆ ಬಾವಾ ಅವರ ನಡೆ ಏನು? ಎಂಬುದು ಕುತೂಹಲಕ್ಕೆ ಕಾರಣವಾಗಿದೆ.

ಜೆಡಿಎಸ್, ಕಾಂಗ್ರೆಸ್ ಹಣಾಹಣಿ
ಚಾಮರಾಜಪೇಟೆ ಕ್ಷೇತ್ರದಲ್ಲಿ ಈ ಬಾರಿ ಜೆಡಿಎಸ್ ಮತ್ತು ಕಾಂಗ್ರೆಸ್ ನಡುವೆ ನೇರ ಸ್ಪರ್ಧೆ ನಡೆಯುವ ಸಾಧ್ಯತೆ ಇದೆ. 1994ನಂತರ ಬಿಜೆಪಿ ಕ್ಷೇತ್ರದಲ್ಲಿ ಗೆಲುವು ಕಂಡಿಲ್ಲ. ಈ ಬಾರಿ ಅಭ್ಯರ್ಥಿ ಯಾರು? ಎಂಬುದರ ಮೇಲೆ ಸ್ಪರ್ಧೆಯ ಚಿತ್ರಣ ಅಂತಿಮಗೊಳ್ಳಲಿದೆ.

ಜೆಡಿಎಸ್ ಅಭ್ಯರ್ಥಿ ಅಂತಿಮ?
ಜಮೀರ್ ಅಹಮದ್ ಖಾನ್ ಸೋಲಿಸಬೇಕು ಎಂದು ಎಚ್.ಡಿ.ದೇವೇಗೌಡರು ಪಣ ತೊಟ್ಟಿದ್ದಾರೆ. ಆದ್ದರಿಂದ, ಜಮೀರ್ ಕಟ್ಟಾ ಬೆಂಬಲಿಗ, ಬ್ಯಾಟರಾಯನಪುರ ವಾರ್ಡ್ ಬಿಬಿಎಂಪಿ ಸದಸ್ಯ ಇಮ್ರಾನ್ ಪಾಷಾ ಅವರಿಗೆ ಟಿಕೆಟ್ ನೀಡಲು ನಿರ್ಧರಿಸಿದ್ದಾರೆ. ಆದರೆ, ಈ ಕುರಿತು ಅಂತಿಮ ಘೋಷಣೆ ಬಾಕಿ ಇದೆ.

ಜಾತಿ ಲೆಕ್ಕಾಚಾರದಲ್ಲಿ ಯಾರಿಗೆ ಬಲ
ಮುಸ್ಲಿಂ, ಬ್ರಾಹ್ಮಣರು, ಒಕ್ಕಲಿಗರು ಕ್ಷೇತ್ರದ ಶಾಸಕರು ಯಾರಾಗಬೇಕು? ಎಂದು ನಿರ್ಧರಿಸುತ್ತಾರೆ. ಕ್ಷೇತ್ರದಲ್ಲಿ ಮೂರು ಬಾರಿ ಗೆದ್ದಿರುವ ಜಮೀರ್ ಅಹಮದ್ ಖಾನ್ ಭಾರೀ ಪ್ರಭಾವ ಹೊಂದಿದ್ದಾರೆ. ಯಾವುದೇ ಪಕ್ಷವಾದರೂ ಅವರನ್ನು ಸುಲಭವಾಗಿ ಸೋಲಿಸಲು ಸಾಧ್ಯವಿಲ್ಲ.

ಜಿ.ಎ.ಬಾವ ನಡೆ ಏನು?
ಕಳೆದ ಬಾರಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ನಿವೃತ್ತ ಪೊಲೀಸ್ ಅಧಿಕಾರಿ ಜಿ.ಎ.ಬಾವ ಅವರು 26,177 ಮತಗಳನ್ನು ಪಡೆದಿದ್ದರು. ಈ ಬಾರಿಯೂ ಅವರು ಟಿಕೆಟ್ ಆಕಾಂಕ್ಷಿ. ಒಂದು ವೇಳೆ ಸಿದ್ದರಾಮಯ್ಯ ಆಪ್ತರಾದ ಜಮೀರ್ ಅಹಮದ್‌ಗೆ ಕಾಂಗ್ರೆಸ್ ಟಿಕೆಟ್ ಸಿಕ್ಕಿದರೆ ಬಾವ ಅವರು ಪಕ್ಷೇತರರಾಗಿ ಸ್ಪರ್ಧಿಸುವ ಸಾಧ್ಯತೆ ಇದೆ. ಹಾಗಾದರೆ ಮತಗಳು ಹಂಚಿಕೆಯಾಗಲಿವೆ.

ಇಬ್ಬರ ಜಗಳದಲ್ಲಿ ಬಿಜೆಪಿಗೆ ಲಾಭ?
ಕ್ಷೇತ್ರದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಜಗಳದಿಂದ ಬಿಜೆಪಿಗೆ ಸಹಾಯಕವಾಗಲಿದೆಯೇ?. ಕಳೆದ ಬಾರಿ ಬಿಜೆಪಿಯಿಂದ ಸ್ಪರ್ಧಿಸಿದ್ದ ಬಿ.ವಿ.ಗಣೇಶ್, ಲಹರಿ ವೇಲು ಅವರು ಟಿಕೆಟ್ ಆಕಾಂಕ್ಷಿಗಳು. ಮಾಜಿ ಉಪ ಮೇಯರ್ ಎಂ.ಲಕ್ಷ್ಮೀನಾರಾಯಣ ಅವರ ಹೆಸರು ಸಹ ಕೇಳಿಬರುತ್ತಿದೆ. ಯಾರಿಗೆ ಟಿಕೆಟ್? ಎಂಬುದು ಇನ್ನೂ ಖಚಿತವಾಗಿಲ್ಲ.

ಜಮೀರ್ ಅಹಮದ್ ಗೆಲುವು
2013ರ ಚುನಾವಣೆಯಲ್ಲಿ ಜಮೀರ್ ಅಮಹದ್ ಖಾನ್ 56,339 ಮತ ಪಡೆದಿದ್ದರು. ಕಾಂಗ್ರೆಸ್‌ನ ಜಿ.ಎ.ಬಾವ 26,177 ಮತ, ಬಿಜೆಪಿಯ ಬಿ.ವಿ.ಗಣೇಶ್ 17,720 ಮತಗಳನ್ನು ಪಡೆದಿದ್ದರು.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications