ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಚಾಮರಾಜಪೇಟೆಯಲ್ಲಿ ಜಮೀರ್ ಸೋಲಿಸಲು ಗೌಡರ ತಂತ್ರವೇನು?

|
Google Oneindia Kannada News

Recommended Video

ಚಾಮರಾಜಪೇಟೆಯಲ್ಲಿ ಜಮೀರ್ ಅಹ್ಮದ್ ಖಾನ್ ರನ್ನ ಸೋಲಿಸಲು ಗೌಡ್ರ ತಂತ್ರ | Oneindia Kannada

ಬೆಂಗಳೂರು, ಫೆಬ್ರವರಿ 08 : ಬೆಂಗಳೂರು ನಗರದ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರ ಈ ಬಾರಿ ಕುತೂಹಲದ ಕಣವಾಗಿದೆ. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ವಿರೋಧ ಕಟ್ಟಿಕೊಂಡಿರುವ ಜಮೀರ್ ಅಹಮದ್ ಖಾನ್ ಗೆಲುವು ಸಾಧಿಸುವರೇ ಕಾದು ನೋಡಬೇಕು.

ರಾಜ್ಯಸಭೆಯ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬೆಂಬಲಿಸಿದ ಚಾಮರಾಜಪೇಟೆ ಶಾಸಕ ಜಮೀರ್ ಅಹಮದ್ ಖಾನ್ ಜೆಡಿಎಸ್‌ನಿಂದ ಅಮಾನತುಗೊಂಡಿದ್ದಾರೆ. ಅವರು ಕಾಂಗ್ರೆಸ್ ಸೇರಲು ಪ್ರಯತ್ನ ನಡೆಸುತ್ತಿದ್ದು, 2018ರ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಸಾಧ್ಯತೆ ಇದೆ.

ಚಾಮರಾಜಪೇಟೆ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿ ಅಂತಿಮ?ಚಾಮರಾಜಪೇಟೆ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿ ಅಂತಿಮ?

2005ರಲ್ಲಿ ನಡೆದ ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಜಮೀರ್ ಅಹಮದ್ ಖಾನ್ ನಂತರ ಕ್ಷೇತ್ರದಲ್ಲಿ ಸೋಲು ಕಂಡಿಲ್ಲ. ಸತತ ಮೂರು ಬಾರಿ ಗೆಲುವು ಸಾಧಿಸಿ ಹ್ಯಾಟ್ರಿಕ್ ಹಿರೋ ಎನಿಸಿಕೊಂಡಿದ್ದಾರೆ.

ಚಾಮರಾಜಪೇಟೆಯಲ್ಲಿ ಜಮೀರ್ ಅಹ್ಮದ್ ಗೆಲುವು ನಿಶ್ಚಿತ: ಪುಟ್ಟಣ್ಣಚಾಮರಾಜಪೇಟೆಯಲ್ಲಿ ಜಮೀರ್ ಅಹ್ಮದ್ ಗೆಲುವು ನಿಶ್ಚಿತ: ಪುಟ್ಟಣ್ಣ

ಕಳೆದ ಬಾರಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ನಿವೃತ್ತ ಪೊಲೀಸ್ ಅಧಿಕಾರಿ ಜಿ.ಎ.ಬಾವಾ ಅವರು ಈ ಬಾರಿಯೂ ಟಿಕೆಟ್ ಆಕಾಂಕ್ಷಿ. ಜಮೀರ್ ಅಹಮದ್ ಅವರಿಗೆ ಟಿಕೆಟ್ ಖಚಿತವಾದರೆ ಬಾವಾ ಅವರ ನಡೆ ಏನು? ಎಂಬುದು ಕುತೂಹಲಕ್ಕೆ ಕಾರಣವಾಗಿದೆ.

ಜೆಡಿಎಸ್, ಕಾಂಗ್ರೆಸ್ ಹಣಾಹಣಿ

ಜೆಡಿಎಸ್, ಕಾಂಗ್ರೆಸ್ ಹಣಾಹಣಿ

ಚಾಮರಾಜಪೇಟೆ ಕ್ಷೇತ್ರದಲ್ಲಿ ಈ ಬಾರಿ ಜೆಡಿಎಸ್ ಮತ್ತು ಕಾಂಗ್ರೆಸ್ ನಡುವೆ ನೇರ ಸ್ಪರ್ಧೆ ನಡೆಯುವ ಸಾಧ್ಯತೆ ಇದೆ. 1994ನಂತರ ಬಿಜೆಪಿ ಕ್ಷೇತ್ರದಲ್ಲಿ ಗೆಲುವು ಕಂಡಿಲ್ಲ. ಈ ಬಾರಿ ಅಭ್ಯರ್ಥಿ ಯಾರು? ಎಂಬುದರ ಮೇಲೆ ಸ್ಪರ್ಧೆಯ ಚಿತ್ರಣ ಅಂತಿಮಗೊಳ್ಳಲಿದೆ.

ಜೆಡಿಎಸ್‌ ಅಭ್ಯರ್ಥಿ ಅಂತಿಮ?

ಜೆಡಿಎಸ್‌ ಅಭ್ಯರ್ಥಿ ಅಂತಿಮ?

ಜಮೀರ್ ಅಹಮದ್ ಖಾನ್ ಸೋಲಿಸಬೇಕು ಎಂದು ಎಚ್.ಡಿ.ದೇವೇಗೌಡರು ಪಣ ತೊಟ್ಟಿದ್ದಾರೆ. ಆದ್ದರಿಂದ, ಜಮೀರ್ ಕಟ್ಟಾ ಬೆಂಬಲಿಗ, ಬ್ಯಾಟರಾಯನಪುರ ವಾರ್ಡ್ ಬಿಬಿಎಂಪಿ ಸದಸ್ಯ ಇಮ್ರಾನ್ ಪಾಷಾ ಅವರಿಗೆ ಟಿಕೆಟ್ ನೀಡಲು ನಿರ್ಧರಿಸಿದ್ದಾರೆ. ಆದರೆ, ಈ ಕುರಿತು ಅಂತಿಮ ಘೋಷಣೆ ಬಾಕಿ ಇದೆ.

ಜಾತಿ ಲೆಕ್ಕಾಚಾರದಲ್ಲಿ ಯಾರಿಗೆ ಬಲ

ಜಾತಿ ಲೆಕ್ಕಾಚಾರದಲ್ಲಿ ಯಾರಿಗೆ ಬಲ

ಮುಸ್ಲಿಂ, ಬ್ರಾಹ್ಮಣರು, ಒಕ್ಕಲಿಗರು ಕ್ಷೇತ್ರದ ಶಾಸಕರು ಯಾರಾಗಬೇಕು? ಎಂದು ನಿರ್ಧರಿಸುತ್ತಾರೆ. ಕ್ಷೇತ್ರದಲ್ಲಿ ಮೂರು ಬಾರಿ ಗೆದ್ದಿರುವ ಜಮೀರ್ ಅಹಮದ್ ಖಾನ್ ಭಾರೀ ಪ್ರಭಾವ ಹೊಂದಿದ್ದಾರೆ. ಯಾವುದೇ ಪಕ್ಷವಾದರೂ ಅವರನ್ನು ಸುಲಭವಾಗಿ ಸೋಲಿಸಲು ಸಾಧ್ಯವಿಲ್ಲ.

ಜಿ.ಎ.ಬಾವ ನಡೆ ಏನು?

ಜಿ.ಎ.ಬಾವ ನಡೆ ಏನು?

ಕಳೆದ ಬಾರಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ನಿವೃತ್ತ ಪೊಲೀಸ್ ಅಧಿಕಾರಿ ಜಿ.ಎ.ಬಾವ ಅವರು 26,177 ಮತಗಳನ್ನು ಪಡೆದಿದ್ದರು. ಈ ಬಾರಿಯೂ ಅವರು ಟಿಕೆಟ್ ಆಕಾಂಕ್ಷಿ. ಒಂದು ವೇಳೆ ಸಿದ್ದರಾಮಯ್ಯ ಆಪ್ತರಾದ ಜಮೀರ್‌ ಅಹಮದ್‌ಗೆ ಕಾಂಗ್ರೆಸ್ ಟಿಕೆಟ್ ಸಿಕ್ಕಿದರೆ ಬಾವ ಅವರು ಪಕ್ಷೇತರರಾಗಿ ಸ್ಪರ್ಧಿಸುವ ಸಾಧ್ಯತೆ ಇದೆ. ಹಾಗಾದರೆ ಮತಗಳು ಹಂಚಿಕೆಯಾಗಲಿವೆ.

ಇಬ್ಬರ ಜಗಳದಲ್ಲಿ ಬಿಜೆಪಿಗೆ ಲಾಭ?

ಇಬ್ಬರ ಜಗಳದಲ್ಲಿ ಬಿಜೆಪಿಗೆ ಲಾಭ?

ಕ್ಷೇತ್ರದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್‌ ಜಗಳದಿಂದ ಬಿಜೆಪಿಗೆ ಸಹಾಯಕವಾಗಲಿದೆಯೇ?. ಕಳೆದ ಬಾರಿ ಬಿಜೆಪಿಯಿಂದ ಸ್ಪರ್ಧಿಸಿದ್ದ ಬಿ.ವಿ.ಗಣೇಶ್, ಲಹರಿ ವೇಲು ಅವರು ಟಿಕೆಟ್ ಆಕಾಂಕ್ಷಿಗಳು. ಮಾಜಿ ಉಪ ಮೇಯರ್ ಎಂ.ಲಕ್ಷ್ಮೀನಾರಾಯಣ ಅವರ ಹೆಸರು ಸಹ ಕೇಳಿಬರುತ್ತಿದೆ. ಯಾರಿಗೆ ಟಿಕೆಟ್? ಎಂಬುದು ಇನ್ನೂ ಖಚಿತವಾಗಿಲ್ಲ.

ಜಮೀರ್ ಅಹಮದ್ ಗೆಲುವು

ಜಮೀರ್ ಅಹಮದ್ ಗೆಲುವು

2013ರ ಚುನಾವಣೆಯಲ್ಲಿ ಜಮೀರ್ ಅಮಹದ್ ಖಾನ್ 56,339 ಮತ ಪಡೆದಿದ್ದರು. ಕಾಂಗ್ರೆಸ್‌ನ ಜಿ.ಎ.ಬಾವ 26,177 ಮತ, ಬಿಜೆಪಿಯ ಬಿ.ವಿ.ಗಣೇಶ್ 17,720 ಮತಗಳನ್ನು ಪಡೆದಿದ್ದರು.

English summary
JD(S) and Congress direct fight expected in Chamrajpet assembly constituency, Bengaluru. Sitting MLA B.Z.Zameer Ahmed Khan may contest form Congress. Imran Pasha may get JD(S) ticket. Lahari Velu, B.V.Ganesh name in the race for BJP ticket.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X