ಯಾವ ಶಾಸಕರು ರಾಜೀನಾಮೆ ಕೊಡಲ್ಲ, ಸರ್ಕಾರ ಸುಭದ್ರ : ದೇವೇಗೌಡ
Recommended Video

ಬೆಂಗಳೂರು, ಡಿಸೆಂಬರ್ 24 : 'ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಅಸಮಾಧಾನವಿಲ್ಲ. ಯಾವ ಶಾಸಕರು ಸಹ ರಾಜೀನಾಮೆ ನೀಡುವುದಿಲ್ಲ. ಆದ್ದರಿಂದ, ಮೈತ್ರಿ ಸರ್ಕಾರಕ್ಕೆ ಯಾವುದೇ ತೊಂದರೆ ಇಲ್ಲ' ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹೇಳಿದರು.
ಸೋಮವಾರ ಬೆಂಗಳೂರಿನಲ್ಲಿ ಮಾತನಾಡಿದ ಅವರು, 'ಮೈತ್ರಿ ಸರ್ಕಾರಕ್ಕೆ ಯಾವುದೇ ತೊಂದರೆ ಇಲ್ಲ. ಸಮ್ಮಿಶ್ರ ಸರ್ಕಾರ ರಾಜ್ಯದಲ್ಲಿ ಸುಭದ್ರವಾಗಿ ಕಾರ್ಯ ನಿರ್ವಹಿಸಲಿದೆ' ಎಂದು ವಿಶ್ವಾಸ ವ್ಯಕ್ತಪಡಿಸಿದರು.
'ಸಚಿವ ಸಂಪುಟ ವಿಸ್ತರಣೆಯನ್ನು ಕಾಂಗ್ರೆಸ್ ವರಿಷ್ಠರು ನೋಡಿಕೊಳ್ಳುತ್ತಾರೆ. ಜೆಡಿಎಸ್ ಚಿಕ್ಕ ಪಕ್ಷ. ಸಂಪುಟ ವಿಸ್ತರಣೆ ಮಾಡುತ್ತೇವೆ. ಆದರೆ, ಸದ್ಯಕ್ಕೆ ಇಲ್ಲ' ಎಂದು ದೇವೇಗೌಡರು ಸ್ಪಷ್ಟಪಡಿಸಿದರು.

'ಮುಂಬರುವ ಲೋಕಸಭಾ ಚುನಾವಣೆಗೆ ಎಲ್ಲಾ ತಯಾರಿಯನ್ನು ಮಾಡಿಕೊಳ್ಳಲಾಗುತ್ತಿದೆ. ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ಮೈತ್ರಿ ಮಾಡಿಕೊಂಡಿದ್ದೇವೆ' ಎಂದು ದೇವೇಗೌಡರು ತಿಳಿಸಿದರು.
'ಜೆಡಿಎಸ್ ಪಕ್ಷವನ್ನು ಕಟ್ಟಲು ಅನೇಕ ರೀತಿಯಲ್ಲಿ ತಯಾರಿ ನಡೆಸುತ್ತಿದ್ದೇವೆ. ಪ್ರತಿ ದಿನ ನಮ್ಮ ಜೊತೆ ಕುಮಾರಸ್ವಾಮಿ ಅವರು ಇರುತ್ತಾರೆ. ಅವರ ಅನುಮತಿ ಪಡೆದು ಸಭೆಗಳನ್ನು ನಡೆಸುತ್ತಿದ್ದೇವೆ. ಚುನಾವಣೆ ಆರಂಭವಾಗುವ ಮುನ್ನ ಪಕ್ಷಕ್ಕೆ ಶಕ್ತಿ ತುಂಬುತ್ತೇವೆ' ಎಂದರು.
ನಾವು ಮುಸ್ಲಿಂ ವಿರೋಧಿ ಅಲ್ಲ : 'ಈ ರಾಷ್ಟ್ರದಲ್ಲಿ ಮಹಿಳೆಯರಿಗೆ ಮೀಸಲಾತಿ ತಂದಿದ್ದು ಜನತಾದಳ. ರಾಜಕೀಯ ಮೀಸಲಾತಿ, ಹೆಣ್ಣು ಮಕ್ಕಳಿಗೆ ಮೀಸಲಾತಿ ಎಲ್ಲವನ್ನು ಗಮನದಲ್ಲಿಟ್ಟುಕೊಂಡು ಆಡಳಿತ ನಡೆಸಿಕೊಂಡು ಹೋಗುತ್ತಿದ್ದೇವೆ. ನಾವು ಮುಸ್ಲಿಂ ವಿರೋಧಿಗಳಲ್ಲ' ಎಂದು ಹೇಳಿದರು.












Click it and Unblock the Notifications