ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಿದ್ದರಾಮಯ್ಯ, ವಿಶ್ವನಾಥ್ ವಾಕ್ಸಮರ : ಯಾರು, ಏನು ಹೇಳಿದರು?

|
Google Oneindia Kannada News

Recommended Video

ಸಿದ್ದರಾಮಯ್ಯ vs ಎಚ್ ವಿಶ್ವನಾಥ್ ವಾಕ್ಸಮರ | ಯಾರು ಏನು ಹೇಳಿದರು? | Oneindia Kannada

ಬೆಂಗಳೂರು, ಮೇ 13 : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಗ್ಗೆ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ಅವರು ನೀಡಿರುವ ಹೇಳಿಕೆ ಬಾರಿ ಚರ್ಚೆಗೆ ಕಾರಣವಾಗಿದೆ. ಹಲವು ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ಈ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ.

ಲೋಕಸಭಾ ಚುನಾವಣೆ 2019 | ವಿಶೇಷ ಪುಟ | ಗ್ಯಾಲರಿ

ಎಚ್.ವಿಶ್ವನಾಥ್ ಮತ್ತು ಸಿದ್ದರಾಮಯ್ಯ ಅವರು ನಡುವೆ ಟ್ವೀಟ್‌ ವಾರ್ ಮುಂದುವರೆದಿದೆ. ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರು ರಾಜ್ಯಕ್ಕೆ ಆಗಮಿಸಿದ್ದು, ಸಮನ್ವಯ ಸಮಿತಿ ಸಭೆಯನ್ನು ಕರೆಯುವ ಸಾಧ್ಯತೆ ಇದೆ.

ಸಿದ್ದರಾಮಯ್ಯ ಟ್ವೀಟ್‌ಗೆ ವಿಶ್ವನಾಥ್ ಪ್ರತಿಟ್ವೀಟ್‌ಸಿದ್ದರಾಮಯ್ಯ ಟ್ವೀಟ್‌ಗೆ ವಿಶ್ವನಾಥ್ ಪ್ರತಿಟ್ವೀಟ್‌

'ಸಿದ್ದರಾಮಯ್ಯ ಒಂದು ಆನೆ ರೀತಿ ಇದ್ದಂತೆ. ಆನೆ ದಾರಿಯಲ್ಲಿ ನಡೆದುಕೊಂಡು ಹೋಗುವಾಗ ನಾಯಿಗೆಳೆಲ್ಲಾ ಬೊಗಳುತ್ತಿರುತ್ತವೆ. ಸಿದ್ದರಾಮಯ್ಯ ಅವರು ಹೊಗಳಿಕೆಗೆ ಹಿಗ್ಗೋದು ಇಲ್ಲ, ತೆಗೆಳಿಕೆಗೆ ಕುಗ್ಗೋದು ಇಲ್ಲ' ಎಂದು ಯಶವಂತಪುರ ಶಾಸಕ ಎಸ್.ಟಿ.ಸೋಮಶೇಖರ್ ಹೇಳಿಕೆ ನೀಡಿದ್ದಾರೆ.

'ಸಿದ್ದರಾಮಯ್ಯ ಸಿಎಂ ಆಗಲೆಂದು ಕೆಲವರು ಚಮಚಾಗಿರಿ ಮಾಡುತ್ತಿದ್ದಾರೆ''ಸಿದ್ದರಾಮಯ್ಯ ಸಿಎಂ ಆಗಲೆಂದು ಕೆಲವರು ಚಮಚಾಗಿರಿ ಮಾಡುತ್ತಿದ್ದಾರೆ'

ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮತ್ತು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಈ ಕುರಿತು ಮೌನವಾಗಿದ್ದಾರೆ. ಸಿದ್ದರಾಮಯ್ಯ ಮತ್ತು ಎಚ್.ವಿಶ್ವನಾಥ್ ನಡುವಿನ ಹೇಳಿಕೆಗಳ ಬಗ್ಗೆ ಯಾವ ನಾಯಕರು ಏನು ಹೇಳಿದರು?....

ಸರಿಯಾದ ನಡವಳಿಕೆಯಲ್ಲ

ಸರಿಯಾದ ನಡವಳಿಕೆಯಲ್ಲ

'ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್‌ ಶಾಸಕರ ವಿರುದ್ಧ ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ವಿಶ್ವಾನಾಥ್‌ ಹೇಳಿಕೆ ನೀಡಿರುವುದು ಸರಿಯಾದ ನಡವಳಿಕೆಯಲ್ಲ. ಸಿದ್ದರಾಮಯ್ಯ ಅವರು ಸಮರ್ಥ ಮುಖ್ಯಮಂತ್ರಿ ಎಂಬುದು ನಿರ್ವಿವಾದ, ನಾಡಿನ ಜನರೇ ಇದನ್ನು ಒಪ್ಪಿಕೊಂಡಿದ್ದಾರೆ' ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು.

ಎಚ್.ವಿಶ್ವನಾಥ್ ಟ್ವೀಟ್

ಸಮನ್ವಯ ಸಮಿತಿಗೆ ನನ್ನನ್ನು ಆಹ್ವಾನಿಸಿ ಬಂದು ಉತ್ತರಿಸುತ್ತೇನೆ. ನಿಮಗೆ ನಮ್ಮ ಕುಲದೈವ ಬೀರೇಶ್ವರ ಒಳ್ಳೆಯ ಬುದ್ಧಿ ಕೊಡಲಿ ಎಂದು ಎಚ್.ವಿಶ್ವನಾಥ್ ಸಿದ್ದರಾಮಯ್ಯ ಟ್ವೀಟ್‌ಗೆ ಪ್ರತಿಕ್ರಿಯೆ ನೀಡಿದ್ದಾರೆ.

ಜೆಡಿಎಸ್ ನಾಯಕರ ಆಕ್ರೋಶ

ಜೆಡಿಎಸ್ ನಾಯಕರ ಆಕ್ರೋಶ

ಯಶವಂತಪುರ ಕ್ಷೇತ್ರದ ಕಾಂಗ್ರೆಸ್ ಶಾಸಕ 'ಸಿದ್ದರಾಮಯ್ಯ ಒಂದು ಆನೆ ರೀತಿ ಇದ್ದಂತೆ. ಆನೆ ದಾರಿಯಲ್ಲಿ ನಡೆದುಕೊಂಡು ಹೋಗುವಾಗ ನಾಯಿಗೆಳೆಲ್ಲಾ ಬೊಗಳುತ್ತಿರುತ್ತವೆ' ಎಂದು ಹೇಳಿಕೆ ನೀಡಿದ್ದು ಇದು ಜೆಡಿಎಸ್ ನಾಯಕರ ಆಕ್ರೋಶಕ್ಕೆ ಕಾರಣವಾಗಿದೆ.

ಜಮೀರ್ ಅಹಮದ್ ಆಕ್ರೋಶ

ಜಮೀರ್ ಅಹಮದ್ ಆಕ್ರೋಶ

ಸಚಿವ ಜಮೀರ್ ಅಹಮದ್ ಖಾನ್ ಅವರು ವಿಶ್ವನಾಥ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ್ದಾರೆ. 'ನಮಗೆ ಚಮಚಾಗಿರಿ ಮಾಡಿ ಅಭ್ಯಾಸ ಇಲ್ಲ. ಕಾಂಗ್ರೆಸ್‌ನ ಎಲ್ಲಾ ಸಚಿವರು, ಶಾಸಕರು ಎಲ್ಲರೂ ಮೈತ್ರಿ ಧರ್ಮಪಾಲನೆ ಮಾಡುತ್ತಿದ್ದೇವೆ. ಕುಮಾರಸ್ವಾಮಿ 5 ವರ್ಷ ಸಿಎಂ ಆಗಿರುತ್ತಾರೆ' ಎಂದರು.

ಎಚ್.ವಿಶ್ವನಾಥ್ ವಿರುದ್ಧ ಟ್ವೀಟ್

ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ಅವರ ವಿರುದ್ಧ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದರು.ಎಚ್.ವಿಶ್ವನಾಥ್ ಹೊಟ್ಟೆಕಿಚ್ಚಿನ ಮಾತುಗಳನ್ನು ಸಮನ್ವಯ ಸಮಿತಿ ಸಭೆಯಲ್ಲಿ ಪ್ರಸ್ತಾಪಿಸುತ್ತೇನೆ ಎಂದು ಹೇಳಿದ್ದರು.

English summary
JD(S) Karnataka president H.Viswanath remarks on Siddaramaiah sparks controversy. Many Congress and JD(S) leaders commented for statement. Who said what on this issue.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X