ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಂಪುಟ ವಿಸ್ತರಣೆಗೆ ಕಾಂಗ್ರೆಸ್‌ ಮೇಲೆ ಜೆಡಿಎಸ್ ಒತ್ತಡ?

|
Google Oneindia Kannada News

ಬೆಂಗಳೂರು, ನವೆಂಬರ್ 12 : ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಸಂಪುಟದಲ್ಲಿ 8 ಸಚಿವ ಸ್ಥಾನಗಳು ಖಾಲಿ ಇವೆ. 5 ಕ್ಷೇತ್ರಗಳ ಉಪ ಚುನಾವಣೆ ಬಳಿಕ ಸಂಪುಟ ವಿಸ್ತರಣೆ ಮಾಡಲು ಚಿಂತನೆ ನಡೆಸಲಾಗುತ್ತಿದೆ. ಆದರೆ, ಕಾಂಗ್ರೆಸ್ ಪಟ್ಟಿ ಇನ್ನೂ ಅಂತಿಮಗೊಂಡಿಲ್ಲ.

ಎಚ್.ಡಿ.ಕುಮಾರಸ್ವಾಮಿ ಅವರ ಸಂಪುಟದಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ 6 ಮತ್ತು ಜೆಡಿಎಸ್ ಪಕ್ಷಕ್ಕೆ 2 ಸಚಿವ ಸ್ಥಾನಗಳು ಸಿಗಲಿವೆ. ಜೆಡಿಎಸ್ ಸಂಪುಟಕ್ಕೆ ಸೇರಿಸಿಕೊಳ್ಳುವ ನಾಯಕರ ಪಟ್ಟಿ ಅಂತಿಮಗೊಳಿಸಿದೆ. ಆದರೆ, ಕಾಂಗ್ರೆಸ್‌ನಲ್ಲಿ ಸಚಿವ ಸ್ಥಾನಕ್ಕೆ ಭಾರೀ ಪೈಪೋಟಿ ನಡೆದಿದೆ.

ಮತ್ತೆ ಸಂಪುಟ ವಿಸ್ತರಣೆ ಮುಂದಕ್ಕೆ, ಈ ಬಾರಿ ಏನು ಕಾರಣ?ಮತ್ತೆ ಸಂಪುಟ ವಿಸ್ತರಣೆ ಮುಂದಕ್ಕೆ, ಈ ಬಾರಿ ಏನು ಕಾರಣ?

5 ಕ್ಷೇತ್ರಗಳ ಉಪ ಚುನಾವಣೆಯಲ್ಲಿ 4ರಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿಗಳು ಜಯಗಳಿಸಿದ್ದಾರೆ. ಆದ್ದರಿಂದ, ಸರ್ಕಾರದ ಮೇಲಿನ ವಿಶ್ವಾಸ ಹೆಚ್ಚಿದೆ. ಈ ಸಮಯದಲ್ಲಿಯೇ ಸಂಪುಟ ವಿಸ್ತರಣೆ ಮಾಡಿಬಿಡಬೇಕು ಆಗ ಅತೃಪ್ತಿ ಉಂಟಾದರೆ ಬಗೆಹರಿಸುವುದು ಸುಲಭ ಎಂಬುದು ಜೆಡಿಎಸ್ ಲೆಕ್ಕಾಚಾರ.

ಸಂಪುಟ ವಿಸ್ತರಣೆ ಪ್ರಸವ ವೇದನೆಗೆ ಕೊನೆ ಎಂದು? ಕೂಡ ಬಾರದ ಮುಹೂರ್ತಸಂಪುಟ ವಿಸ್ತರಣೆ ಪ್ರಸವ ವೇದನೆಗೆ ಕೊನೆ ಎಂದು? ಕೂಡ ಬಾರದ ಮುಹೂರ್ತ

ಆದರೆ, ಕಾಂಗ್ರೆಸ್ ಪಕ್ಷಕ್ಕೆ ಸಿಗುವ 6 ಸಚಿವ ಸ್ಥಾನ ಪಡೆಯಲು 12ಕ್ಕೂ ಅಧಿಕ ಶಾಸಕರು ಆಕಾಂಕ್ಷಿಗಳಾಗಿದ್ದಾರೆ. ಯಾವ ಶಾಸಕರಿಗೆ ಸಚಿವ ಸ್ಥಾನ ನೀಡಬೇಕು ಎಂದು ಪಕ್ಷ ಇನ್ನೂ ತೀರ್ಮಾನ ಕೈಗೊಂಡಿಲ್ಲ. ಜೆಡಿಎಸ್ ಸಹ ಬೇಗ ಪಟ್ಟಿ ತಯಾರಿಸಿ ಕೊಡಿ ಎಂದು ಕಾಂಗ್ರೆಸ್ ನಾಯಕರನ್ನು ಒತ್ತಾಯಿಸಿದೆ.

ಮಧು ಬಂಗಾರಪ್ಪಗೆ ಸಚಿವ ಸ್ಥಾನ : ಓದುಗರ ಅಭಿಪ್ರಾಯವೇನು?ಮಧು ಬಂಗಾರಪ್ಪಗೆ ಸಚಿವ ಸ್ಥಾನ : ಓದುಗರ ಅಭಿಪ್ರಾಯವೇನು?

ಸಿದ್ದರಾಮಯ್ಯ ಬಳಿ ಚರ್ಚೆ

ಸಿದ್ದರಾಮಯ್ಯ ಬಳಿ ಚರ್ಚೆ

ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಅವರ ಜೊತೆ ಸಂಪುಟ ವಿಸ್ತರಣೆ ಬಗ್ಗೆ ಮಾತುಕತೆ ನಡೆಸಿದ್ದಾರೆ. 'ಆದಷ್ಟು ಬೇಗ ಸಂಪುಟ ವಿವಸ್ತರಣೆ ಮಾಡಿ ಬಿಡೋಣ. ನಿಮ್ಮ ಕಡೆಯ ಪಟ್ಟಿ ಸಿದ್ದಪಡಿಸಿ ಕೊಡಿ' ಎಂದು ಕುಮಾರಸ್ವಾಮಿ ಸೂಚಿಸಿದ್ದಾರೆ.

ಜೆಡಿಎಸ್ ಸಿದ್ಧವಿದೆ

ಜೆಡಿಎಸ್ ಸಿದ್ಧವಿದೆ

ಎಚ್.ಡಿ.ಕುಮಾರಸ್ವಾಮಿ ಅವರು ಈ ವಾರದಲ್ಲಿ ದೆಹಲಿಗೆ ಭೇಟಿ ನೀಡಲಿದ್ದು, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಲಿದ್ದಾರೆ. ಸಿದ್ದರಾಮಯ್ಯ ಅವರು ದೆಹಲಿಗೆ ಭೇಟಿ ನೀಡಿ ಹೈಕಮಾಂಡ್ ನಾಯಕರ ಜೊತೆ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆಸಲಿದ್ದಾರೆ. ನವೆಂಬರ್ 20ರ ಬಳಕ ಸಂಪುಟ ವಿಸ್ತರಣೆ ನಡೆಯುವ ನಿರೀಕ್ಷೆ ಇದೆ.

ಸಿದ್ದರಾಮಯ್ಯ ಅವರಿಗೆ ಅಧಿಕಾರ

ಸಿದ್ದರಾಮಯ್ಯ ಅವರಿಗೆ ಅಧಿಕಾರ

ಕಾಂಗ್ರೆಸ್‌ನಲ್ಲಿ ಯಾರು ಸಂಪುಟಕ್ಕೆ ಸೇರಬೇಕು? ಎಂಬ ಪಟ್ಟಿ ಸಿದ್ದಪಡಿಸುವ ಹೊಣೆಯನ್ನು ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರಿಗೆ ನೀಡಲಾಗಿದೆ. ಅವರ ಒಪ್ಪಿಗೆ ಸಿಕ್ಕರೆ ಮಾತ್ರ ಹೈಕಮಾಂಡ್ ಪಟ್ಟಿಗೆ ಅಂತಿಮ ಮುದ್ರೆ ಹಾಕಲಿದೆ. ಆದ್ದರಿಂದ, ಜೆಡಿಎಸ್ ನಾಯಕರು ಸಹ ಸಿದ್ದರಾಮಯ್ಯ ಬಳಿ ಶೀಘ್ರವೇ ಸಂಪುಟ ವಿಸ್ತರಣೆ ಮಾಡಲು ತಯಾರಿ ನಡೆಸುವಂತೆ ಮನವಿ ಮಾಡಿದ್ದಾರೆ.

ಅಧಿವೇಶನಕ್ಕೂ ಮುನ್ನ ಸಂಪುಟ ವಿಸ್ತರಣೆ?

ಅಧಿವೇಶನಕ್ಕೂ ಮುನ್ನ ಸಂಪುಟ ವಿಸ್ತರಣೆ?

ನವೆಂಬರ್ ಅಂತ್ಯ ಅಥವ ಡಿಸೆಂಬರ್ ಮೊದಲ ವಾರದಲ್ಲಿ ವಿಧಾನಸಭೆಯ ಚಳಿಗಾಲದ ಅಧಿವೇಶನ ನಡೆಯಲಿದೆ. ವಿಧಾನ ಪರಿಷತ್ ಸಭಾಪತಿ ಆಯ್ಕೆಯೂ ನಡೆಯಬೇಕಿದೆ. ಆದ್ದರಿಂದ ಅಧಿವೇಶನಕ್ಕೂ ಮೊದಲು ಸಂಪುಟ ವಿಸ್ತರಣೆ ಮಾಡುವಂತೆ ಜೆಡಿಎಸ್ ನಾಯಕರು ಕಾಂಗ್ರೆಸ್‌ಗೆ ಸೂಚಿಸಿದ್ದಾರೆ.

English summary
Karnataka JD(S) demanded the Congress to expand Chief Minister H.D.Kumaraswamy cabinet. 8 minister post vacant in the cabinet and JD(S) will get 2 and Congress will get 6 minister post.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X