ಮಾರ್ಚ್19ಕ್ಕೆ ಅಮಾನತ್ತಾದ ಜೆಡಿಎಸ್ ಶಾಸಕರ ವಿಚಾರಣೆ
ಬೆಂಗಳೂರು, ಮಾರ್ಚ್ 17: ಕಳೆದ ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿ ಪಕ್ಷದಿಂದ ಉಚ್ಛಾಟಿತರಾದ ಏಳು ಜನ ಜೆಡಿಎಸ್ ಶಾಸಕರನ್ನು ಸೋಮವಾರ ವಿಧಾನಸಭಾಧ್ಯಕ್ಷರ ಸಮಕ್ಷಮದಲ್ಲಿ ವಿಚಾರಣೆ ನಡೆಸಲಾಗುವುದು.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ
ವಿಪ್ ಜಾರಿ ಮಾಡಿದ್ದರೂ ಸಹ ಜೆಡಿಎಸ್‌ನ ಶಾಸಕರಾದ ಎನ್. ಚಲುವರಾಯಸ್ವಾಮಿ, ಅಖಂಡ ಶ್ರೀನಿವಾಸಮೂರ್ತಿ, ಜಮೀರ್ ಅಹಮದ್ ಖಾನ್, ಎಚ್.ಸಿ.ಬಾಲಕೃಷ್ಣ, ರಮೇಶ್ ಬಂಡಿಸಿದ್ದೇಗೌಡ, ಇಕ್ಬಾಲ್ ಅನ್ಸಾರಿ ಮತ್ತು ಭೀಮಾ ನಾಯಕ್ ಅವರುಗಳು ಅಡ್ಡಮತದಾನ ಮಾಡಿದ್ದ ಕಾರಣ ಅವರ ಸದಸ್ಯತ್ವವನ್ನು ರದ್ದು ಮಾಡಬೇಕು ಎಂದು ಜೆಡಿಎಸ್ ದೂರು ಸಲ್ಲಿಸಿತ್ತು.
ರಾಜ್ಯಸಭಾ ಚುನಾವಣೆ ಮತದಾನ ದಿನ ಹತ್ತಿರವಾಗುತ್ತಿದ್ದು ಕೂಡಲೇ ಉಚ್ಛಾಟಿತ ಶಾಸಕರ ಪ್ರಕರಣವನ್ನು ವಿಚಾರಣೆ ನಡೆಸಿ ಅವರ ಸದಸ್ಯತ್ವ ರದ್ದು ಮಾಡಬೇಕು ಎಂದು ಜೆಡಿಎಸ್ ಒತ್ತಡ ಹೇರಿದೆ, ಹೀಗಾಗಿ ಅಮಾನತ್ತಾದ ಶಾಸಕರಿಗೆ ವಿಧಾನಸಭಾಧ್ಯಕ್ಷರ ಅರೆನ್ಯಾಯಿಕ ಪ್ರಾಧಿಕಾರದ ಮುಂದೆ ಹಾಜರಾಗಬೇಕು ಎಂದು ಸಮನ್ಸ್ ನೀಡಲಾಗಿದೆ ಎಂದು ವಿಧಾನ ಸಭಾ ಕಾರ್ಯದರ್ಶಿ ಎಸ್.ಮೂರ್ತಿ ತಿಳಿಸಿದ್ದಾರೆ.

ಅಮಾನತ್ತಾದ ಶಾಸಕರ ವಿಚಾರಣೆ ಇನ್ನೂ ಪೂರ್ಣವಾಗಿರದ ಕಾರಣ ಈ ಬಾರಿಯ ರಾಜ್ಯಸಭಾ ಚುನಾವಣೆಯಲ್ಲಿ ಏಳೂ ಜನ ಶಾಸಕರಿಗೆ ಮತದಾನಕ್ಕೆ ಅವಕಾಶ ನೀಡಬಾರದು ಎಂದೂ ಜೆಡಿಎಸ್ ಮನವಿ ಮಾಡಿದೆ. ವಿಧಾನಸೌಧದಲ್ಲಿ ಸೋಮವಾರ ಬೆಳಿಗ್ಗೆ ವಿಚಾರಣೆ ನಡೆಯಲಿದ್ದು, ಶಾಸಕರಿಗೆ ಮತದಾನಕ್ಕೆ ಅವಕಾಶ ಸಿಗುತ್ತದೆಯೋ ಇಲ್ಲವೋ ಕಾದು ನೋಡಬೇಕಿದೆ.
-
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್












Click it and Unblock the Notifications