ಕುಮಾರಸ್ವಾಮಿಗೆ ಕೈ ಕೊಟ್ಟವರನ್ನು ಪಕ್ಷದಿಂದ ಹೊರ ದಬ್ಬಿದ ದೇವೇಗೌಡ
Recommended Video
ಬೆಂಗಳೂರು, ಜುಲೈ 31: ಕುಮಾರಸ್ವಾಮಿಗೆ ಕೈಕೊಟ್ಟು ಮೈತ್ರಿ ಸರ್ಕಾರ ಪತನವಾಗುವಂತೆ ಮಾಡಿದ ಶಾಸಕರ ಗುಂಪಿನಲ್ಲಿದ್ದ ಮೂವರು ಜೆಡಿಎಸ್ ಶಾಸಕರನ್ನು ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ.
ಅಸಮಾಧಾನಗೊಂಡು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಹುಣಸೂರು ಕ್ಷೇತ್ರದಿಂದ ಸ್ಪರ್ಧಿಸಿ ಗೆದ್ದಿದ್ದ ಎಚ್.ವಿಶ್ವನಾಥ್, ಮಹಾಲಕ್ಷ್ಮಿ ಲೇಔಟ್‌ನಿಂದ ಗೆದ್ದಿದ್ದ ಕೆ.ಗೋಪಾಲಯ್ಯ, ಕೆ.ಆರ್.ಪೇಟೆ ಕ್ಷೇತ್ರದಿಂದ ಗೆದ್ದಿದ್ದ ಕೆ.ಸಿ.ನಾರಾಯಣಗೌಡ ಅವರನ್ನು ಜೆಡಿಎಸ್ ಪಕ್ಷದಿಂದ ಅಮಾನತ್ತು ಮಾಡಿ ರಾಷ್ಟ್ರೀಯ ಅಧ್ಯಕ್ಷ ದೇವೇಗೌಡ ಅವರು ಆದೇಶ ಹೊರಡಿಸಿದ್ದಾರೆ.
ಈ ಮೂವರೂ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದರು ಎಂದು ಜೆಡಿಎಸ್ ತಮ್ಮ ಪ್ರಕಟಣೆಯಲ್ಲಿ ತಿಳಿಸಿದೆ. ಈ ಮೂವರನ್ನು ಈಗಾಗಲೇ ರಮೇಶ್ ಕುಮಾರ್ ಅವರು ಶಾಸಕರ ಸ್ಥಾನದಿಂದ ಅನರ್ಹಗೊಳಿಸಿದ್ದಾರೆ.

ಕಾಂಗ್ರೆಸ್ ಸಹ ಅತೃಪ್ತ ಶಾಸಕರ ಗುಂಪಿನಲ್ಲಿದ್ದ 14 ಕಾಂಗ್ರೆಸ್ ಶಾಸಕರನ್ನು ಪಕ್ಷದಿಂದ ಅಮಾನತ್ತು ಮಾಡಿದೆ. ಒಟ್ಟು 17 ಶಾಸಕರನ್ನು ಈ ಹಿಂದಿನ ಸ್ಪೀಕರ್ ರಮೇಶ್ ಕುಮಾರ್ ಅವರು ಅಮಾನತ್ತು ಮಾಡಿ ಆದೇಶ ಹೊರಡಿಸಿದ್ದರು. ಈಗ ಅವರೆಲ್ಲಾ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ.












Click it and Unblock the Notifications