ಭಾರತ ಬಂದ್‌ಗೆ ಬೆಂಬಲ ನೀಡಿದ ಎಚ್.ಡಿ.ದೇವೇಗೌಡ

Recommended Video

      Bharat Bandh : ಭಾರತ್ ಬಂದ್ ಗೆ ಬೆಂಬಲ ಕೊಟ್ಟ ಎಚ್ ಡಿ ದೇವೇಗೌಡ | Oneindia Kannada

      ಬೆಂಗಳೂರು, ಸೆಪ್ಟೆಂಬರ್ 09 : 'ತೈಲ ದರಗಳ ಏರಿಕೆ ಖಂಡಿಸಿ ಸೆ.10ರಂದು ಕರೆ ನೀಡಿರುವ ಭಾರತ ಬಂದ್‌ಗೆ ನನ್ನ ಮತ್ತು ಪಕ್ಷ ಸಂಪೂರ್ಣ ಬೆಂಬಲವಿದೆ' ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಹೇಳಿದರು.

      ಬೆಂಗಳೂರಿನಲ್ಲಿ ಭಾನುವಾರ ಮಾತನಾಡಿದ ಅವರು, 'ಭಾರತ ಬಂದ್‌ಗೆ ಬಿಜೆಪಿ ಹೊರತುಪಡಿಸಿ ಎಲ್ಲಾ ಪ್ರಾದೇಶಿಕ ಪಕ್ಷಗಳು ಬೆಂಬಲ ನೀಡುತ್ತಿವೆ. ಜೆಡಿಎಸ್ ಪಕ್ಷವೂ ಬೆಂಬಲ ನೀಡಿದೆ' ಎಂದರು.

      'ಅಗತ್ಯ ವಸ್ತುಗಳ ಬೆಲೆ ಗಗನಕ್ಕೆ ಏರುತ್ತಿದೆ. ಪೆಟ್ರೋಲ್, ಡೀಸೆಲ್ ಬೆಲೆಗಳು ಅಡೆ-ತಡೆ ಇಲ್ಲದೇ ಏರಿಕೆಯಾಗುತ್ತಿದೆ. ಇದರಿಂದಾಗಿ ಜನಸಾಮಾನ್ಯರ ಮೇಲೆ ಹೊರೆ ಬೀಳುತ್ತಿದೆ. ಆದ್ದರಿಂದ, ನಾವು ಬಂದ್‌ಗೆ ಬೆಂಬಲ ನೀಡಿದ್ದೇವೆ' ಎಂದು ದೇವೇಗೌಡರು ಹೇಳಿದರು.

      JDS extends support for Bharat Bandh on September 10th

      'ಸೋಮವಾರ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ನಿಯೋಗದ ಜೊತೆ ನಾನು ದೆಹಲಿಗೆ ಹೋಗುತ್ತೇನೆ. ರಾಜ್ಯದಲ್ಲಿ ಮಳೆಯಿಂದ ಆಗಿರುವ ಹಾನಿ ಕುರಿತು ಅಂಕಿ-ಅಂಶಗಳನ್ನು ನೀಡಿ, ಪರಿಹಾರಕ್ಕಾಗಿ ಮನವಿ ಮಾಡುತ್ತೇನೆ' ಎಂದು ತಿಳಿಸಿದರು.

      'ತೈಲ ಬೆಲೆ ಏರಿಕೆಯಿಂದಾಗಿ ಸಾರ್ವಜನಿಕರಿಗೆ ತೊಂದರೆ ಆಗುತ್ತಿದೆ. ಬಂದ್‌ಗೆ ಸರ್ಕಾರದ ಸಂಪೂರ್ಣ ಬೆಂಬಲವಿದೆ' ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+