ಒಂದು ಕಡೆ ಉಚಿತ ಕೊಡುಗೆ! ಇನ್ನೊಂದು ಕಡೆ ಖಚಿತ ಸುಲಿಗೆ!: ಇದು ಕಾಂಗ್ರೆಸ್ ನ 6ನೇ ಗ್ಯಾರಂಟಿ
ಬೆಂಗಳೂರು, ಜುಲೈ13: ರಾಜ್ಯದ ಜನ ಇಷ್ಟು ದಿನ ಟೊಮ್ಯಾಟೋ, ತರಕಾರಿ,ಆಹಾರ ಧಾನ್ಯ, ಗ್ಯಾಸ್ ಇತ್ಯಾದಿಗಳ ಬೆಲೆ ಏರಿಕೆಯಿಂದ ಚಕಿತರಾಗಿ ಬಸವಳಿದು ಹೋಗಿದ್ದಾರೆ.ಈಗ ವರ್ಗಾವಣೆ ದರಪಟ್ಟಿಯಿಂದ ಅಧಿಕಾರಿ, ನೌಕರರೂ ಹೌಹಾರಿದ್ದಾರೆ.ಇದು ಕಾಂಗ್ರೆಸ್ ಸರಕಾರದ 6ನೇ ಗ್ಯಾರಂಟಿ ಎಂದು ಜೆಡಿಎಸ್ ರಾಜ್ಯ ಘಟಕ ಕಿಡಿಕಾರಿದೆ.
ಈ ಕುರಿತು ಸರಣಿ ಟ್ವೀಟ್ ಮಾಡಿರವ ಜೆಡಿಎಸ್ ರಾಜ್ಯ ಘಟಕ, ಒಂದು ಕಡೆ ಉಚಿತ ಕೊಡುಗೆ! ಇನ್ನೊಂದು ಕಡೆ ಖಚಿತ ಸುಲಿಗೆ!! ಭಾಗ್ಯಗಳ ಮೇಲೆ ಭಾಗ್ಯಗಳನ್ನು ಕೊಟ್ಟ ಕಾಂಗ್ರೆಸ್ ಸರಕಾರ ಕೊಡುತ್ತಿರುವ ವರ್ಗಾವಣೆ ' ಸಂಕಷ್ಟಭಾಗ್ಯ ' ವರ್ಣಿಸದಸಳ. ಕೊಡುಗೆ ಮತ್ತು ಸುಲಿಗೆ ಒಟ್ಟೊಟ್ಟಿಗೆ ಕೊಂಡೊಯ್ಯುವುದೇ ಅಭಿವೃದ್ದಿಯ ಹೊಸ ಭರವಸೆ, ಹೊಸ ಕನಸು ಎಂಬುದು ನನಗೆ ಈಗಷ್ಟೇ ಅರ್ಥವಾಗಿದೆ. ಕರ್ನಾಟಕ ಮಾದರಿ ಅಭಿವೃದ್ಧಿ ಎಂದರೆ ಇದೇನಾ? ಎಂದು ಜೆಡಿಎಸ್ ಪ್ರಶ್ನಿಸಿದೆ.

ಈ ಕಾಂಗ್ರೆಸ್ ಸರಕಾರ ಬಂದು ಎರಡು ತಿಂಗಳೂ ಕಳೆದಿಲ್ಲ. ಆಗಲೇ ಕಾಸಿಗಾಗಿ ಹುದ್ದೆ ಬಿಸ್ನೆಸ್ ಪರಾಕಾಷ್ಠೆ ಮುಟ್ಟಿದ್ದು, ಇವರು ವರ್ಗಾವಣೆ ಅಂಕದಲ್ಲಿ ' ಪರಕಾಯ ಪ್ರವೇಶ ' ಮಾಡಿದ್ದಾರೆ. ಗ್ಯಾರಂಟಿ, ಭಾಗ್ಯಗಳ ಮೂಲಕ ಜನರನ್ನು ಯಾಮಾರಿಸಿ ಇವರು ಹುಂಡಿಗಳನ್ನು ಭರ್ತಿ ಮಾಡಿಕೊಳ್ಳುತ್ತಿದ್ದಾರೆ.
ರಾಜ್ಯದ ಜನ ಇಷ್ಟು ದಿನ ಟೊಮ್ಯಾಟೋ, ತರಕಾರಿ,ಆಹಾರ ಧಾನ್ಯ, ಗ್ಯಾಸ್ ಇತ್ಯಾದಿಗಳ ಬೆಲೆ ಏರಿಕೆಯಿಂದ ಚಕಿತರಾಗಿ ಬಸವಳಿದು ಹೋಗಿದ್ದಾರೆ.ಈಗ ವರ್ಗಾವಣೆ ದರಪಟ್ಟಿಯಿಂದ ಅಧಿಕಾರಿ, ನೌಕರರೂ ಹೌಹಾರಿದ್ದಾರೆ.ಇದು @INCKarnataka ಸರಕಾರದ 6ನೇ ಗ್ಯಾರಂಟಿ.
— Janata Dal Secular (@JanataDal_S) July 13, 2023
ಒಂದು ಕಡೆ ಉಚಿತ ಕೊಡುಗೆ! ಇನ್ನೊಂದು ಕಡೆ ಖಚಿತ ಸುಲಿಗೆ!! 1/5#YstTax #CashForPosting pic.twitter.com/HvXXsYdp0n
ಇದೇ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಹಿಂದಿನ ಬಿಜೆಪಿ ಸರಕಾರದ ವಿರುದ್ಧ ರೇಟ್ ಕಾರ್ಡ್ ಬಿಡುಗಡೆ ಮಾಡಿ ಪ್ರಚಾರ ಮಾಡಿತ್ತು. ಈಗ ಕೈ ಸರಕಾರದ ರೇಟ್ ಕಾರ್ಡ್ ಎಲ್ಲರ ಕೈಗಳಲ್ಲೂ ನಲಿದು ನರ್ತಿಸುತ್ತಿದೆ. #CashForPosting ಸರಕಾರದ ' ಅಧಿಕೃತ ಅರ್ಥನೀತಿ ' ಆಗಿದೆ ಎಂದು ಜೆಡಿಎಸ್ ಕಾಂಗ್ರೆಸ್ ಸರ್ಕಾರವ ವಿರುದ್ ತೀವ್ರ ವಾಗ್ದಾಳಿ ನಡೆಸಿದೆ.

ಹನಿಮೂನ್ ಪೀರಿಯಡ್ ಹೊತ್ತಿನಲ್ಲೇ ಹೀಗಾದರೆ ಫುಲ್ ಮೂನ್ ಸಮಯದಲ್ಲಿ ಇದು ಇನ್ನಾವ ಹಂತಕ್ಕೆ ಹೋಗಲಿದೆ ಎನ್ನುವ ಊಹೆ ಜನರಿಗೇ ಬಿಟ್ಟಿದ್ದು. ಇಂಥ ಕಮಿಷನ್'ಗೇಡಿ ಸರಕಾರದ ಬಗ್ಗೆ ಸರಕಾರಿ ನೌಕರರು, ಅಧಿಕಾರಿಗಳು ಆತಂಕಗೊಂಡಿದ್ದಾರೆ. ಜನರಲ್ಲೂ ಆಕ್ರೋಶ ಮಡುಗತ್ತುತ್ತಿದೆ ಎಂದು ಜೆಡಿಎಸ್ ಕಿಡಿಕಾರಿದೆ.












Click it and Unblock the Notifications