Prajwal Revanna Case: ಕಾಂಗ್ರೆಸ್ ವಿರುದ್ಧ ದೂರು ಕೊಟ್ಟ ಜೆಡಿಎಸ್
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಆರೋಪ ಸದ್ಯ ರಾಜ್ಯ ಮತ್ತು ರಾಷ್ಟ್ರ ರಾಜಕಾರಣದಲ್ಲಿ ವ್ಯಾಪಕ ಸದ್ದು ಮಾಡುತ್ತಿದೆ. ರಾಜಕೀಯವಾಗಿ ಈ ಪ್ರಕರಣವನ್ನು ಬಳಕೆ ಮಾಡಿಕೊಳ್ಳಲಾಗುತ್ತಿದ್ದು, ವಾಕ್ಸಮರ ಶುರುವಾಗಿದೆ. ಇದೆಲ್ಲದರ ನಡುವೆ ಜೆಡಿಎಸ್ ಈಗ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ದೂರು ಕೊಟ್ಟಿದೆ.
ಪ್ರಜ್ವಲ್ ರೇವಣ್ಣ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ಮಾಡಿದ್ದು ಜೆಡಿಎಸ್ ಆಕ್ರೋಶಕ್ಕೆ ಕಾರಣವಾಗಿದೆ. ಪ್ರತಿಭಟನೆಯಲ್ಲಿ ಹೆಚ್‌ಡಿ ದೇವೇಗೌಡ ಮತ್ತು ಹೆಚ್‌ಡಿ ಕುಮಾರಸ್ವಾಮಿ ಅವರಿಗೆ ಕಾಂಗ್ರೆಸ್ ಕಾರ್ಯಕರ್ತರು ಅವಮಾನ ಆಗುವ ರೀತಿ ನಡೆದುಕೊಂಡಿದ್ದಾರೆ ಎಂದು ಜೆಡಿಎಸ್ ಆರೋಪಿಸಿದೆ.

ಎಕ್ಸ್ ಪೋಸ್ಟ್‌ನಲ್ಲಿ ಈ ಬಗ್ಗೆ ಮಾಹಿತಿ ನೀಡಿರುವ ಜೆಡಿಎಸ್ ಅಧಿಕೃತ ಖಾತೆಯಲ್ಲಿ, ಗೌರವಾನ್ವಿತ ಮಾಜಿ ಪ್ರಧಾನಮಂತ್ರಿಗಳು, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್‌ಡಿ ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿಗಳು, ಪಕ್ಷದ ರಾಜ್ಯಾಧ್ಯಕ್ಷರಾದ ಹೆಚ್‌ಡಿ ಕುಮಾರಸ್ವಾಮಿ ಅವರ ಗೌರವಕ್ಕೆ ಧಕ್ಕೆ ಆಗುವ ರೀತಿಯಲ್ಲಿ ಪ್ರತಿಭಟನೆ ನಡೆಸಿರುವ, ಕೀಳು ಅಭಿರುಚಿಯ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ವಿರುದ್ಧ ಬೆಂಗಳೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ. ಅವರನ್ನು ಬಂಧಿಸಿ ಕಾನೂನು ಕ್ರಮ ಜರುಗಿಸಬೇಕು ಎಂದು ಮನವಿ ಮಾಡಲಾಗಿದೆ." ಎಂದು ಹೇಳಿದೆ.
ಪ್ರಕರಣ ತನಿಖೆಗೆ ಎಸ್‌ಐಟಿ ರಚನೆ
ಇನ್ನು ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಅಶ್ಲೀಲ ವಿಡಿಯೋ ಪ್ರಕರಣ ತನಿಖೆಗಾಗಿ ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚನೆ ಮಾಡಿ ಆದೇಶ ಹೊರಡಿಸಿದೆ. ಪ್ರಜ್ವಲ್ ರೇವಣ್ಣ ಸದ್ಯ ಜರ್ಮನಿಯಲ್ಲಿದ್ದಾರೆ ಎನ್ನುವ ಸುದ್ದಿ ಇದ್ದು, ಪ್ರಕರಣದ ತನಿಖೆ ವೇಳೆ ಅವರನ್ನು ಬಂಧಿಸುವ ಸಾಧ್ಯತೆ ಕೂಡ ಇದೆ.
ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರತಿಕ್ರಿಯೆ ನೀಡಿರುವ ಪ್ರಜ್ವಲ್ ರೇವಣ್ಣ ತಂದೆ ಹೆಚ್ ಡಿ ರೇವಣ್ಣ, ಇದು ಹಳೆಯ ಕೇಸ್, ರಾಜಕೀಯ ಕಾರಣದಿಂದ ದೂರು ನೀಡಲಾಗಿದೆ. ಇಲ್ಲೇ ಇದ್ದು ಕಾನೂನು ಮೂಲಕ ಉತ್ತರ ಕೊಡುತ್ತೇವೆ, ವಿಚಾರಣೆಗೆ ಕರೆದಾಗ ಪ್ರಜ್ವಲ್ ರೇವಣ್ಣ ಬರುತ್ತಾರೆ ಎಂದು ಹೇಳಿದ್ದಾರೆ.
ಗೌರವಾನ್ವಿತ ಮಾಜಿ ಪ್ರಧಾನಮಂತ್ರಿಗಳು, @JanataDal_S ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ @H_D_Devegowda ಅವರು ಹಾಗೂ ಮಾಜಿ ಮುಖ್ಯಮಂತ್ರಿಗಳು, ಪಕ್ಷದ ರಾಜ್ಯಾಧ್ಯಕ್ಷರಾದ ಶ್ರೀ @hd_kumaraswamy ಅವರ ಗೌರವಕ್ಕೆ ಧಕ್ಕೆ ಆಗುವ ರೀತಿಯಲ್ಲಿ ಪ್ರತಿಭಟನೆ ನಡೆಸಿರುವ, ಕೀಳು ಅಭಿರುಚಿಯ @INCKarnataka ಪಕ್ಷದ ಕಾರ್ಯಕರ್ತರ ವಿರುದ್ಧ ಬೆಂಗಳೂರು ನಗರ… pic.twitter.com/RD8ha8ouTV
— Janata Dal Secular (@JanataDal_S) April 29, 2024
ಪ್ರಜ್ವಲ್ ರೇವಣ್ಣ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾದ ಬಳಿಕ ಅವರನ್ನು ಜೆಡಿಎಸ್ ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ.












Click it and Unblock the Notifications