Rahul Gandhi: ಪ್ರಜ್ವಲ್ ರೇವಣ್ಣ ಬಗ್ಗೆ ಭಾಷಣ; ರಾಹುಲ್ ಗಾಂಧಿ ವಿರುದ್ಧ ದೂರು ನೀಡಿದ ಜೆಡಿಎಸ್
ಮೇ 2ರಂದು ಶಿವಮೊಗ್ಗ ಮತ್ತು ರಾಯಚೂರಿನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾಷಣ ಮಾಡಿದ್ದರ ವಿರುದ್ಧ ಜೆಡಿಎಸ್ ದೂರು ದಾಖಲಿಸಿದೆ ಎಂದು ಎಎನ್‌ಐ ವರದಿ ಮಾಡಿದೆ.
ಎಚ್‌ಎಂ ರಮೇಶ್ ಗೌಡ ಎನ್ನುವವರು ರಾಹುಲ್ ಡಿಜಿಪಿ, ಬೆಂಗಳೂರು. ಎಸ್‌ಪಿ ಶಿವಮೊಗ್ಗ ಮತ್ತು ಎಸ್‌ಪಿ ರಾಯಚೂರು ಇವರಿಗೆ ದೂರು ನೀಡಿದ್ದು, ಭಾರತೀಯ ದಂಡ ಸಂಹಿತೆ 202 ರ ಅಡಿಯಲ್ಲಿ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ದೂರಿನಲ್ಲಿ ಕೇಳಿದ್ದಾರೆ.

ದೂರಿನಲ್ಲಿ ಏನಿದೆ?
ಹೆಚ್.ಎಂ.ರಮೇಶ್ ಗೌಡ ಸಹಿ ಹಾಕಿರುವ ದೂರಿನಲ್ಲಿ ರಾಹುಲ್ ಗಾಂಧಿ ವಿರುದ್ಧ ಅನೇಕ ಗಂಭೀರ, ಗುರುತರ ಆರೋಪಗಳನ್ನು ಮಾಡಲಾಗಿದೆ. ಕಾಂಗ್ರೆಸ್ ನಾಯಕ, ವೈನಾಡು ಲೋಕಸಭೆ ಕ್ಷೇತ್ರದ ಸಂಸದ ರಾಹುಲ್ ಗಾಂಧಿ ಅವರು, ಪ್ರಜ್ವಲ್ ರೇವಣ್ಣ 400 ಮಹಿಳೆಯರ ಮೇಲೆ ಮಾಸ್ ರೇಪ್ ಮಾಡಿ ಅದನ್ನು ವಿಡಿಯೋ ಚಿತ್ರೀಕರಣ ಮಾಡಿಕೊಂಡಿದ್ದಾರೆ. ಇದು ಕೇವಲ ಅತ್ಯಾಚಾರ ಅಷ್ಟೇ ಅಲ್ಲ, ಇದೊಂದು ಸಾಮೂಹಿಕ ಅತ್ಯಾಚಾರ. ಒಬ್ಬ ಮಾಸ್ ರೇಪಿಸ್ಟ್ ಪರ ಪ್ರಧಾನಿ ನರೇಂದ್ರ ಮೋದಿ ಅವರು ಮತ ಯಾಚಿಸಿರುವುದು ಇಡೀ ಜಗತ್ತಿಗೆ ಗೊತ್ತಾಗಿದೆ ಎಂದು ಇದೇ ಮೇ 2ರಂದು ಹೇಳಿಕೆ ನೀಡಿದ್ದರು.
ರಾಹುಲ್ ಗಾಂಧಿ ಅವರ ಹೇಳಿಕೆ, ಭಾಷಣ ಎಲ್ಲವೂ ವಿದ್ಯುನ್ಮಾನ ಮಾಧ್ಯಮಗಳಲ್ಲಿ ಪ್ರಸಾರವಾಗಿದೆ. ಮುದ್ರಣ ಮಾಧ್ಯಮದಲ್ಲಿಯೂ ವರದಿಯಾಗಿದೆ ಎಂದು ಪೊಲೀಸ್ ಮಹಾ ನಿರ್ದೇಶಕರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದ್ದು, ಅದಕ್ಕೆ ಸಂಬಂಧಿಸಿದ ಎಲ್ಲ ದಾಖಲೆಗಳನ್ನು ಸಲ್ಲಿಸಿದೆ.
Janata Dal (Secular) files a complaint against Congress leader Rahul Gandhi over his address during his election rallies in Shivamogga & Raichur on May 2, 2024. pic.twitter.com/cp8N8j1cRl
— ANI (@ANI) May 22, 2024
ನೊಂದ ಮಹಿಳೆಯರ ನ್ಯಾಯ ಕೊಡಿಸುವುದನ್ನು ಕಡೆಗಣಿಸಿ ಒಬ್ಬ ಜನಪ್ರತಿನಿಧಿಯಾಗಿ ರಾಹುಲ್ ಗಾಂಧಿ ಅವರು ಇಂಥ ಹೇಳಿಕೆ ನೀಡಿರುವುದು ಕಾನೂನು ಉಲ್ಲಂಘನೆ ಆಗಿರುತ್ತದೆ. ನಾನೂರು ಮಹಿಳೆಯರ ಮೇಲೆ ಮಾಸ್ ರೇಪ್ ಆಗಿರುವ ಬಗ್ಗೆ ರಾಹುಲ್ ಗಾಂಧಿ ಅವರಿಗೆ ಎಲ್ಲಾ ಮಾಹಿತಿ ಇದೆ ಹಾಗೂ ಅತ್ಯಾಚಾರಕ್ಕೆ ತುತ್ತಾದ ಅಷ್ಟೂ ಮಹಿಳೆಯರ ಮಾಹಿತಿ ಅವರಲ್ಲಿ ಇದೆ ಎನ್ನುವುದು ಅವರದೇ ಹೇಳಿಕೆಯಿಂದ ಸ್ಪಷ್ಟವಾಗಿದೆ. ಈ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಅವರ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್ 1860ರ ಅಡಿಯಲ್ಲಿ ಕೇಸ್ ದಾಖಲಿಸಬೇಕು ಎಂದು ಪೊಲೀಸ್ ಮಹಾ ನಿರ್ದೇಶಕರಲ್ಲಿ ಜೆಡಿಎಸ್ ಪಕ್ಷ ಒತ್ತಾಯ ಮಾಡಿದೆ.
ರಾಜ್ಯ ಸರ್ಕಾರವೂ ಈ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ (SIT) ರಚನೆ ಮಾಡಿದ್ದು, ಕೂಡಲೇ ಈ ತಂಡವು ರಾಹುಲ್ ಗಾಂಧಿ ಅವರಿಗೆ ಸಮನ್ಸ್ ಜಾರಿ ಮಾಡಿ ಕರೆಸಬೇಕು. ನಾನೂರು ಮಹಿಳೆಯರು ಎಂದು ತಪ್ಪು ಮಾಹಿತಿ, ಸಮಾಜಕ್ಕೆ ಕೆಟ್ಟ ಸಂದೇಶ ಹೋಗುವಂತೆ ಮಾಡಿದ ಅವರ ವಿರುದ್ಧ ಕೂಡಲೇ ಸೆಕ್ಷನ್ 202, 1860ರ ಅಡಿಯಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು ಎಂದು ಜೆಡಿಎಸ್ ಆಗ್ರಹಪಡಿಸಿದೆ.
ಅಲ್ಲದೆ, ಪೆನ್ ಡ್ರೈವ್ ಹಂಚಿಕೆಯ ಬಗ್ಗೆಯೂ ಜೆಡಿಎಸ್ ಡಿಜಿ ಅವರ ಜತೆ ಮಾತುಕತೆ ನಡೆಸಿತು. ಎಸ್ ಐಟಿ ಏಕಪಕ್ಷೀಯವಾಗಿ ತನಿಖೆ ನಡೆಸುತ್ತಿದೆ. ಪ್ರಜ್ವಲ್ ಪ್ರಕರಣಕ್ಕೆ ಸಂಬಂಧಿಸಿ ನಮ್ಮ ಪಕ್ಷದ ಕಾರ್ಯಕರ್ತರಿಗೆ ವಿನಾಕಾರಣ ಕಿರುಕುಳ ನೀಡುತ್ತಿದೆ. ಆದರೆ ಪೆನ್ ಡ್ರೈವ್ ಹಂಚಿಕೆ ಆರೋಪಿಗಳ ಬಗ್ಗೆ ಮೌನ ವಹಿಸಿದೆ. ನ್ಯಾಯಾಲಯ ಜಾಮೀನು ನಿರಾಕರಿಸಿದ್ದರೂ ಈವರೆಗೆ ಅವರನ್ನು ಎಸ್ ಐಟಿ ಬಂಧನ ಮಾಡಿಲ್ಲ ಎಂದು ನಿಯೋಗ ದೂರಿತು.
-
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ












Click it and Unblock the Notifications