ಚನ್ನಪಟ್ಟಣ ಉಪಚುನಾವಣೆಗೆ ಜೆಡಿಎಸ್‌ ಪಕ್ಷದಿಂದ ಅಭ್ಯರ್ಥಿ ಕಣಕ್ಕೆ?

ರಾಮನಗರ, ಆಗಸ್ಟ್‌ 21: ಚನ್ನಪಟ್ಟಣ ಉಪಚುನಾವಣೆಯಲ್ಲಿ ಜೆಡಿಎಸ್ ಪಕ್ಷವು 'ಸಾಮಾನ್ಯ' ಕಾರ್ಯಕರ್ತನನ್ನು ಕಣಕ್ಕಿಳಿಸಲು ನಿರ್ಧರಿಸಿದೆ ಮೂಲಗಳು ತಿಳಿಸಿವೆ. ಪಕ್ಷದ ಕಾರ್ಯಕರ್ತನನ್ನು ಕಣಕ್ಕಿಳಿಸಲು ನಿರ್ಧರಿಸಿದ್ದು, ಚನ್ನಪಟ್ಟಣ ಕ್ಷೇತ್ರವನ್ನ ಬಿಜೆಪಿಗೆ ಬಿಟ್ಟುಕೊಡುವುದಿಲ್ಲ ಎಂದು ಸ್ಪಷ್ಟಪಡಿಸಿದೆ.

ಜೆಡಿಎಸ್ ಪಕ್ಷದ ಚನ್ನಪಟ್ಟಣ ತಾಲೂಕು ಅಧ್ಯಕ್ಷ ಅಥವಾ ಹಾಪ್‌ಕಾಮ್ಸ್ ದೇವರಾಜ್ ಅವರನ್ನು ಚನ್ನಪಟ್ಟಣ ಉಪಚುನಾವಣೆಯಲ್ಲಿ ಅಭ್ಯರ್ಥಿಯನ್ನಾಗಿ ಪರಿಗಣಿಸುತ್ತಿದ್ದು, ಬಿಜೆಪಿಗೆ ಬಿಟ್ಟುಕೊಡುವುದು ಅನುಮಾನವಾಗಿದೆ. ಈಗಾಗಲೇ ಬಿಜೆಪಿ ಮಾಜಿ ಸಚಿವ ಸಿ ಪಿ ಯೋಗೇಶ್ವರ್‌ ಅವರು ಅಭ್ಯರ್ಥಿಯಾಗಲಿದ್ದಾರೆ ಎನ್ನುವ ಮಾತುಗಳು ಕೇಳಿ ಬಂದಿತ್ತು. ಆದ್ರೆ, ಇದೀಗ ಜೆಡಿಎಸ್‌ ಪಕ್ಷದ ಕಾರ್ಯಕರ್ತನನ್ನು ಕಣಕ್ಕಿಳಿಸುವ ಚಿಂತನೆಯನ್ನ ನಡೆಸಿದೆ.

JDS firm on Channapatna bypoll decides to field common party worker

ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆ ಟಿಕೆಟ್‌ಗಾಗಿ ಜೆಡಿಎಸ್ ಇಬ್ಬರು 'ಸಾಮಾನ್ಯ' ಕಾರ್ಯಕರ್ತರನ್ನು ಜೆಡಿಎಸ್‌ ಪಕ್ಷವು ಪರಿಗಣಿಸಿದೆ. ಟಿಕೆಟ್‌ ಸಿಗುವ ನಿರೀಕ್ಷೆಯಲ್ಲಿ ಬಿಜೆಪಿಯ ಮಾಜಿ ಸಚಿವ ಸಿಪಿ ಯೋಗೇಶ್ವರ್ ಅವರಿದ್ದು, ಒಂದು ವೇಳೆ ಸಿ ಪಿ ಯೋಗೇಶ್ವರ್‌ ಗೆ ಟಿಕೆಟ್‌ ಸಿಗದಿದ್ದರೇ ಹಲವು ರಾಜಕೀಯ ಬದಲಾವಣೆಗಳಾಗುವ ಸಾಧ್ಯತೆ ಇವೆ ಎನ್ನಲಾಗಿದೆ.

ಇತ್ತೀಚೆಗಷ್ಟೇ ಮಂಡ್ಯ ಸಂಸದರಾಗಿ ಆಯ್ಕೆಯಾಗುವವರೆಗೂ ಚನ್ನಪಟ್ಟಣ ಎಚ್‌ಡಿ ಕುಮಾರಸ್ವಾಮಿ ಅವರ ಹಿಡಿತದಲ್ಲಿತ್ತು. ಪಕ್ಷದ ಹಿರಿಯ ನಾಯಕ ಮಾತನಾಡಿ , ಇದು ಜೆಡಿಎಸ್ ಗೆದ್ದಿರುವ ಸ್ಥಾನ ಮತ್ತು ನಾವು ಅದನ್ನು ಬಿಜೆಪಿಗೆ ಏಕೆ ನೀಡಬೇಕು? ಇತ್ತೀಚೆಗೆ ಪಕ್ಷದ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಕುಮಾರಸ್ವಾಮಿಯವರೊಂದಿಗೆ ಈ ಕುರಿತು ಚರ್ಚಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಇದೇ ವೇಳೆ, ಕುಮಾರಸ್ವಾಮಿ ಅವರ ಪುತ್ರ ಹಾಗೂ ಜೆಡಿಎಸ್ ಯುವ ಮುಖಂಡ ನಿಖಿಲ್, ನಾನೇ ಅಭ್ಯರ್ಥಿ ಎಂಬ ಊಹಾಪೋಹವನ್ನು ತಳ್ಳಿಹಾಕಿದ್ದಾರೆ. ಹಾಗೇನಾದರೂ ಆಗಿದ್ದರೆ ಲೋಕಸಭೆ ಚುನಾವಣೆಯಲ್ಲಿ ಮಂಡ್ಯದಿಂದ ಸ್ಪರ್ಧಿಸಬಹುದಿತ್ತು ಎಂದು ತಿಳಿಸಿದರು. ಪಕ್ಷವನ್ನು ತಳಮಟ್ಟದಲ್ಲಿ ಬಲಪಡಿಸುವುದು ನನ್ನ ಗುರಿ. ಚುನಾವಣೆಗೆ ಸ್ಪರ್ಧಿಸುವುದು ನನ್ನ ಅಜೆಂಡಾ ಆಗಿದ್ದರೆ, ಮಂಡ್ಯದಿಂದ ಸ್ಪರ್ಧಿಸಲು ನನಗೆ ಎಲ್ಲಾ ಅವಕಾಶವಿತ್ತು ಎಂದು ಜೆಡಿಎಸ್‌ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಹೇಳಿದರು.

ಇನ್ನೂ ಜೆಡಿಎಸ್ ಕ್ಷೇತ್ರವನ್ನು ಬಿಜೆಪಿಗೆ ಬಿಟ್ಟುಕೊಡುವುದಿಲ್ಲ ಎಂಬ ಸುಳಿವು ನೀಡಿದ ನಿಖಿಲ್ ಕುಮಾರಸ್ವಾಮಿ ಅವರು, ಇದು ನನ್ನ ತಂದೆ ಪ್ರತಿನಿಧಿಸುವ ಕ್ಷೇತ್ರವಾಗಿದ್ದು, ಅದನ್ನು ಜೆಡಿಎಸ್‌ನೊಂದಿಗೆ ಉಳಿಸಿಕೊಳ್ಳುವುದು ಪಕ್ಷದ ಕಾರ್ಯಕರ್ತರ ಅಭಿಪ್ರಾಯವಾಗಿದೆ ಎಂದು ಹೇಳಿದರು.

Petrol price: ಆಗಸ್ಟ್ 21 ರಂದು ಭಾರತದ ವಿವಿಧ ನಗರಗಳಲ್ಲಿ ಪೆಟ್ರೋಲ್‌ ಡಿಸೇಲ್‌ ಬೆಲೆ ತಿಳಿಯಿರಿ

ಇದೇ ವೇಳೆ, ಪಕ್ಷದ ಸಾಮಾನ್ಯ ಕಾರ್ಯಕರ್ತನನ್ನು ಕಣಕ್ಕಿಳಿಸಲು ಬ್ಯಾಟಿಂಗ್ ಮಾಡಿದ ನಿಖಿಲ್‌ ಕುಮಾರಸ್ವಾಮಿ ಅವರು, ಈ ಹಿಂದೆ ಚನ್ನಪಟ್ಟಣ ಕ್ಷೇತ್ರದಿಂದ ನಾಗರಾಜು ಅವರು ಸ್ಪರ್ಧಿಸಿದ್ದನ್ನು ನೆನಪಿಸಿಕೊಂಡರು. ನಾಗರಾಜು 50 ಸಾವಿರ ಮತ ಗಳಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ತಿಳಿಸಿದರು.

ಟಿಕೆಟ್‌ಗೆ ಪ್ರಬಲ ಆಕಾಂಕ್ಷಿಯಾಗಿರುವ ಯೋಗೇಶ್ವರ್, ಪಕ್ಷಕ್ಕೆ ಸೀಟು ಏಕೆ ಮುಖ್ಯ ಎಂಬುದನ್ನು ಬಿಜೆಪಿ ಹೈಕಮಾಂಡ್‌ಗೆ ತಿಳಿಸಿದ್ದೇನೆ ಎಂದು ಹೇಳಿದರು. ''ಹಳೆ ಮೈಸೂರು ಭಾಗದಲ್ಲಿ ಬಿಜೆಪಿಗೆ ಭದ್ರ ನೆಲೆ ಇರುವ ಏಕೈಕ ಕ್ಷೇತ್ರ ಇದಾಗಿದ್ದು, ಅದನ್ನು ಉಳಿಸಿಕೊಳ್ಳುವುದು ಅನಿವಾರ್ಯವಾಗಿದೆ. ಕಾಂಗ್ರೆಸ್ ಬೆಂಬಲದಿಂದ ಕುಮಾರಸ್ವಾಮಿ ಇಲ್ಲಿ ಗೆದ್ದಿದ್ದಾರೆ ಎಂದು ಯೋಗೇಶ್ವರ್ ಹೇಳಿದ್ದಾರೆ.

ಬಿಜೆಪಿಯ ರಾಜ್ಯ ನಾಯಕರು ಮುಂದಿನ ವಾರ ದೆಹಲಿಗೆ ಭೇಟಿ ನೀಡಿ ಕುಮಾರಸ್ವಾಮಿ ಅವರೊಂದಿಗೆ ಚರ್ಚಿಸಲಿದ್ದಾರೆ ಎಂದರು. ಉಪಚುನಾವಣೆಯಲ್ಲಿ ಗೆಲುವು ಸಾಧಿಸುವುದು ಎರಡೂ ಪಕ್ಷಗಳಿಗೆ ಅಗತ್ಯವಾಗಿದೆ. ಜನರು ನನ್ನೊಂದಿಗಿದ್ದು, ನಾನು ಸ್ಪರ್ಧಿಸುವ ಪಕ್ಷ ಈ ಬಾರಿ ಗೆಲ್ಲುವುದು ಖಚಿತ ಎಂದು ತಿಳಿಸಿದ್ದಾರೆ. ಇನ್ನೂ ಟಿಕೆಟ್ ನಿರಾಕರಿಸಿದರೆ ಕಾಂಗ್ರೆಸ್ ಸೇರುವ ಬಗ್ಗೆ ಕೇಳಿದ ಪ್ರಶ್ನೆಗೆ ಯೋಗೇಶ್ವರ್, ಸ್ವತಂತ್ರವಾಗಿ ಸ್ಪರ್ಧಿಸಿದರೂ ಗೆಲ್ಲುತ್ತೇನೆ ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+