ನರಸತ್ತ ಪಕ್ಷ, ಕರೆಂಟ್ ವೈರ್ ಹಿಡಿದು 'ಶಕುನಿ ಯುದ್ಧ' ಆರಂಭಿಸಿದೆ. ಯುದ್ಧಕ್ಕೆ ನಾವೂ ಸಿದ್ದ!
ಬೆಂಗಳೂರು, ನವೆಂಬರ್ 15: ಹಳ್ಳ ಹಿಡಿದ ಗ್ಯಾರಂಟಿಗಳು ಕಾಂಗ್ರೆಸ್ಸಿನಲ್ಲಿ ಹಾಲಾಹಲವನ್ನೇ ಸೃಷ್ಟಿಸಿವೆ ಎನ್ನುವುದಕ್ಕೆ ಕುಮಾರಸ್ವಾಮಿ ಅವರ ಮನೆಯ ಕರೆಂಟ್ ವೈರ್ ಕೊಟ್ಟ ಶಾಕೇ ಸಾಕ್ಷಿ. ರಾಜಕೀಯವಾಗಿ ಅವರನ್ನು ಎದುರಿಸಲಾಗದ ನರಸತ್ತ ಪಕ್ಷ, ಕರೆಂಟ್ ವೈರ್ ಹಿಡಿದು 'ಶಕುನಿ ಯುದ್ಧ' ಆರಂಭಿಸಿದೆ. ಯುದ್ಧಕ್ಕೆ ನಾವೂ ಸಿದ್ಧರಿದ್ದೇವೆ ಎಂದು ಜೆಡಿಎಸ್ ರಾಜ್ಯ ಘಟಕ ಕಿಡಿಕಾರಿದೆ.
ಈ ಕುರಿತು ಸರಣಿ ಟ್ವೀಟ್ ಮಾಡಿರುವ ಜೆಡಿಎಸ್ ರಾಜ್ಯ ಘಟಕ, ಕೊಳಕು ಮಂಡಲ ಕಾಂಗ್ರೆಸ್ ಗೆ ಅರ್ಜೆಂಟಾಗಿ ಜನರ ಗಮನ ಬೇರೆಡೆಗೆ ಸೆಳೆಯುವ ತುರ್ತು ಇತ್ತು. ಕಳೆದೊಂದು ವಾರದಿಂದ ಹೆಚ್ ಡಿ ಕುಮಾರಸ್ವಾಮಿ ಅವರು ನಡೆಸಿದ ಸರ್ಜಿಕಲ್ ಸ್ಟ್ರೈಕ್ʼಗೆ ಕೈ ಪಡೆ ಪತರಗುಟ್ಟಿ ಹೋಗಿತ್ತು. ಅವರ ಭಾನುವಾರದ ಮಾಧ್ಯಮಗೋಷ್ಠಿ ಒಂದರಿಂದಲೇ ಅದರ ನವರಂಧ್ರಗಳು ಆಸ್ಫೋಟಗೊಂಡಿವೆ.

ಈಗ ಮಾರಿ ಉಳಿಸಿಕೊಳ್ಳಲು ಕರೆಂಟ್ ವೈರ್ ಮೊರೆ ಹೋಗಿದೆ ಕಾಂಗ್ರೆಸ್. ಗ್ಯಾರಂಟಿಗಳ ವೈಫಲ್ಯಕ್ಕೆ ದಿನ ಬೆಳಗಾದರೆ ಜನರಿಂದ ಕ್ಯಾಕರಿ ಉಗಿಸಿಕೊಳ್ಳುತ್ತಿರುವ ಆ ಪಕ್ಷ, ದಿಕ್ಕಿಲ್ಲದೆ ಅಪಾಯಕಾರಿ ಕರೆಂಟ್ ವೈರ್ ಹಿಡಿದುಬಿಟ್ಟಿದೆ. ದರಬೇಸಿ ಕಾಂಗ್ರೆಸ್ಸಿಗೆ ದಾರಿ ಕಾಣುತ್ತಿಲ್ಲ ಎಂದು ಹೇಳಿದ್ದಾರೆ.
ಉತ್ತರಪ್ರದೇಶದಲ್ಲಿ ಮೂರಂಕಿಗೆ ಕುಸಿದಿತ್ತು. ತೆಲಂಗಾಣ ಸೇರಿ 5 ರಾಜ್ಯಗಳಲ್ಲಿ ಏದುಸಿರು ಬಿಡುತ್ತಿದೆ. ವಿಕಾರ, ವಿಕೃತಿಗೆ ತುತ್ತಾಗಿ ಕತ್ತಲಾದ ಮೇಲೆ ಗೋಡೆ ಮೇಲೆ ಕಳ್ಳಕಳ್ಳವಾಗಿ ಪೋಸ್ಟರ್ ಅಂಟಿಸುವ 'ಶಿಖಂಡಿ'ಸ್ಥಿತಿಗೆ ಬಂದಿದೆ. ಪಾಪ.. ಆ ಪಕ್ಷ ಭೂಗಳ್ಳ, ಕಲ್ಲುಕಳ್ಳ, ಕೊತ್ವಾಲನ ಶಿಷ್ಯನ ಕೈಗೆ ಸಿಕ್ಕಿ ಹುಚ್ಚುನಾಯಿಯಂತೆ ಒದ್ದಾಡುತ್ತಿದೆ.
ಕುಮಾರಸ್ವಾಮಿ ಅವರು ಸ್ಪಷ್ಟನೆ ಕೊಟ್ಟ ಮೇಲೂ ಕಾಂಗ್ರೆಸ್ ವಿಕೃತಿ ಮಿತಿಮೀರಿದೆ. ಬೆಸ್ಕಾಂ ವಿದ್ಯುತ್ ವೇಗದಲ್ಲಿ ಎಫ್ ಐಆರ್ ದಾಖಲಿಸಿದೆ. ಕುಮಾರಸ್ವಾಮಿ ಅವರು ತಿಹಾರ್ ಜೈಲಿಗೆ ಹೋಗುವ ತಪ್ಪೇನೂ ಮಾಡಿಲ್ಲ. ಈಡಿ, ಸಿಬಿಐ, ಐಟಿ ಅವರ ಬೆನ್ಹತ್ತಿಲ್ಲ. ಪುಡಿರೌಡಿ 'ಕಿಡಿಗೇಡಿಕುಮಾರ'ನ ಕೈಚಳಕಕ್ಕೆ ಹೆದರುವ ಪ್ರಶ್ನೆಯೂ ಇಲ್ಲ ಎಂದು ಜೆಡಿಎಸ್ ವಾಗ್ದಾಳಿ ನಡೆಸಿದ್ದಾರೆ.
ಈಗ ಮಾರಿ ಉಳಿಸಿಕೊಳ್ಳಲು ಕರೆಂಟ್ ವೈರ್ ಮೊರೆ ಹೋಗಿದೆ ಕಾಂಗ್ರೆಸ್. ಗ್ಯಾರಂಟಿಗಳ ವೈಫಲ್ಯಕ್ಕೆ ದಿನ ಬೆಳಗಾದರೆ ಜನರಿಂದ ಕ್ಯಾಕರಿ ಉಗಿಸಿಕೊಳ್ಳುತ್ತಿರುವ ಆ ಪಕ್ಷ, ದಿಕ್ಕಿಲ್ಲದೆ ಅಪಾಯಕಾರಿ ಕರೆಂಟ್ ವೈರ್ ಹಿಡಿದುಬಿಟ್ಟಿದೆ. ದರಬೇಸಿ ಕಾಂಗ್ರೆಸ್ಸಿಗೆ ದಾರಿ ಕಾಣುತ್ತಿಲ್ಲ.2/8
— Janata Dal Secular (@JanataDal_S) November 15, 2023
ರಾಜ್ಯವನ್ನೇ ಗುಡಿಸಿ ಗಂಡಾಂತರಿಸಿ ತಿಪ್ಪೆ ಸಾರಿಸಿದೆ ಲಜ್ಜೆಗೇಡಿ ಕಾಂಗ್ರೆಸ್. #YstTax, #SstTax, ಕಾಸಿಗಾಗಿ ಪೋಸ್ಟಿಂಗ್, ಸಿಎಂ ಕಚೇರಿಲಿ ಸುಲಿಗೆ, ಗುತ್ತಿಗೆದಾರರಿಂದ ಪರ್ಸಂಟೇಜ್, ಸ್ಟಾನ್ಲಿ ಸೋಫಾ-ಮಂಚ, ಹ್ಯುಬ್ಲೆಟ್ ವಾಚು.. ಒಂದಾ ಎರಡಾ? ಐಷಾರಾಮಯ್ಯನ ಮುಖ ಉಳಿಸಲು ಕರೆಂಟ್ ವೈರ್ ಹಿಡಿದು ಕೆಟ್ಟಿದೆ ಗುಜರಿ ಶಾಪ್ ಕಾಂಗ್ರೆಸ್.
ಇನೊಬ್ಬರು ಹೇಳಿದ್ದನ್ನು ತಿರುಚಿ ವಕ್ರೀಕರಿಸುವ 'ವಿಕೃತಿ ವಿಕಾರಪೀಡಿತʼ ಕಾಂಗ್ರೆಸ್ಸಿಗೆ, ಮಾಜಿ ಸಿಎಂ ಸ್ಪಷ್ಟನೆಗಿಂತ ನೀತಿಗೆಟ್ಟ ರಾಜಕಾರಣದಲ್ಲೇ ಹೆಚ್ಚು ನಂಬಿಕೆ. ಅದೇ ಅದರ ಧರ್ಮ. ಕಂಡ ಕಂಡವರ ಭೂಮಿಗೆ ಬೇಲಿ ಹಾಕುವ 'ಕಿಡಿಗೇಡಿಕುಮಾರ'ನ ಪರ ಬ್ಯಾಟಿಂಗ್ ಬೀಸಿದ್ದು ಬಿಟ್ಟರೆ ಕೊಳಕುಮಂಡಲ ಕಾಂಗ್ರೆಸ್ ಕನ್ನಡಿಗರಿಗಾಗಿ ಕಿಸಿದಿದ್ದೇನೂ ಇಲ್ಲ ಎಂದು ಹೇಳಿದೆ.
ಹಳ್ಳ ಹಿಡಿದ ಗ್ಯಾರಂಟಿಗಳು ಕಾಂಗ್ರೆಸ್ಸಿನಲ್ಲಿ ಹಾಲಾಹಲವನ್ನೇ ಸೃಷ್ಟಿಸಿವೆ ಎನ್ನುವುದಕ್ಕೆ ಕುಮಾರಸ್ವಾಮಿ ಅವರ ಮನೆಯ ಕರೆಂಟ್ ವೈರ್ ಕೊಟ್ಟ ಶಾಕೇ ಸಾಕ್ಷಿ. ರಾಜಕೀಯವಾಗಿ ಅವರನ್ನು ಎದುರಿಸಲಾಗದ ನರಸತ್ತ ಪಕ್ಷ, ಕರೆಂಟ್ ವೈರ್ ಹಿಡಿದು 'ಶಕುನಿ ಯುದ್ಧ' ಆರಂಭಿಸಿದೆ. ಯುದ್ಧಕ್ಕೆ ನಾವೂ ಸಿದ್ಧರಿದ್ದೇವೆ.
ಕಂಬದ ಕರೆಂಟಿನ ಬಗ್ಗೆ ಕಾಂಗ್ರೆಸ್ ಈ ಪರಿ ಕೈಕೈ ಹಿಚುಕಿಕೊಳ್ಳುತ್ತಿರುವುದನ್ನು ನೋಡಿದರೆ ವೈರಿನಲ್ಲಿಯೂ ನರಿ ರಾಜಕೀಯ ದಿಟವೆನಿಸುತ್ತದೆ. ಕುಮಾರಸ್ವಾಮಿ ಅವರ ಒಂದೇ ಒಂದು ಕ್ಷಿಪಣಿ ಸಾಕು, ಕಾಂಗ್ರೆಸ್ 'ರಕ್ಕಸ ರಿಪಬ್ಲಿಕ್' ಉಡೀಸ್ ಆಗಲಿಕ್ಕೆ. ಶಿಖಂಡಿ ಅಂತ್ಯಕಾಲ ಆರಂಭವಾಗಿದೆ ಎಂದು ತೀವ್ರ ವಾಗ್ದಾಳಿ ನಡೆಸಿದೆ.
-
Siddaramaiah: ಜನರ ದಾರಿತಪ್ಪಿಸುವ ಬಿಜೆಪಿಯನ್ನು ನಂಬಬೇಡಿ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾರಣವೇನು -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ? -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ












Click it and Unblock the Notifications