ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕ ಉಪಚುನಾವಣೆಯಲ್ಲಿ ಜೆಡಿಎಸ್ ಸ್ವತಂತ್ರ ಸ್ಪರ್ಧೆ

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 21: ಕರ್ನಾಟಕ ಉಪಚುನಾವಣೆಯಲ್ಲಿ ಜೆಡಿಎಸ್ ಸ್ವತಂತ್ರವಾಗಿ ಸ್ಪರ್ಧಿಸಲಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.

Big Breaking: ಅನರ್ಹ ಶಾಸಕರು ಚುನಾವಣೆ ಸರ್ಧಿಸಲು ಅವಕಾಶವಿಲ್ಲBig Breaking: ಅನರ್ಹ ಶಾಸಕರು ಚುನಾವಣೆ ಸರ್ಧಿಸಲು ಅವಕಾಶವಿಲ್ಲ

ಕರ್ನಾಟಕದ ಒಟ್ಟು 15 ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದ್ದು, ಜೆಡಿಎಸ್ ಸ್ವತಂತ್ರವಾಗಿ ಸ್ಪರ್ಧಿಸಲಿದೆ. ಮೈತ್ರಿ ಸರ್ಕಾರದ ಪತನದ ಬಳಿಕ ಸಿದ್ದರಾಮಯ್ಯ ಹಾಗೂ ಕುಮಾರಸ್ವಾಮಿ ಹಾವು ಮುಂಗುಸಿಯಂತೆ ಆಡುತ್ತಿದ್ದು, ಇದೀಗ ಉಪಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ತಮ್ಮ ತಮ್ಮ ದಾರಿಯನ್ನು ನೋಡಿಕೊಳ್ಳಲು ತೀರ್ಮಾನಿಸಿದೆ.

ನಮ್ಮ ಸರ್ಕಾರವಿದ್ದಾಗ ಯಾರದ್ದೂ ಬೆಂಬಲ ಸಿಗಲಿಲ್ಲ

ನಮ್ಮ ಸರ್ಕಾರವಿದ್ದಾಗ ಯಾರದ್ದೂ ಬೆಂಬಲ ಸಿಗಲಿಲ್ಲ

ಜೆಡಿಎಸ್-ಕಾಂಗ್ರೆಸ್ ಸರ್ಕಾರವಿದ್ದಾಗ ನಮಗೆ ಯಾರದ್ದೂ ಬೆಂಬಲ ದೊರೆಯಲಿಲ್ಲ. ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡು ತಪ್ಪು ಮಾಡಿದ್ದೆವು, ಈಗ ಮತ್ತದೇ ತಪ್ಪು ಮರುಕಳಿಸುವುದಿಲ್ಲ. ನಾವು ಯಾರಜೊತೆಗೂ ಕೈಜೋಡಿಸುವುದಿಲ್ಲ ಎಂದು ಹೇಳಿದ್ದಾರೆ.

ಕುಮಾರಸ್ವಾಮಿ, ಸಿದ್ದರಾಮಯ್ಯ ನಡುವಿನ ಸಂಬಂಧ ಸರಿಯಿಲ್ಲ

ಕುಮಾರಸ್ವಾಮಿ, ಸಿದ್ದರಾಮಯ್ಯ ನಡುವಿನ ಸಂಬಂಧ ಸರಿಯಿಲ್ಲ

ಜೆಡಿಎಸ್ ಕಾಂಗ್ರೆಸ್ ಮೈತ್ರಿ ಸರ್ಕಾರ ಬಿದ್ದ ಬಳಿಕ ಕುಮಾರಸ್ವಾಮಿ ಹಾಗೂ ಸಿದ್ದರಾಮಯ್ಯ ಅವರ ನಡುವಿನ ಸಂಬಂಧ ಹಳಸಿದೆ. ನಿತ್ಯವೂ ಒದಲ್ಲಾ ಒಂದು ವಿಷಯವನ್ನಿಟ್ಟುಕೊಂಡು ಇಬ್ಬರೂ ವಾದ ಪ್ರತಿವಾದ ಮಾಡುತ್ತಾ ಜನರ ಬಾಯಿಗೆ ಆಹಾರವಾಗಿದ್ದರು. ಮೈತ್ರಿ ಸರ್ಕಾರ ಪತನವಾಗಲು ಸಿದ್ದರಾಮಯ್ಯ ಅವರೇ ನೇರ ಕಾರಣ ಎನ್ನುವ ಆರೋಪವನ್ನು ಕುಮಾರಸ್ವಾಮಿ ಹೊರಿಸಿದ್ದರು.

ಉಪಚುನಾವಣೆ: ಕಾಂಗ್ರೆಸ್‌ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಉಪಚುನಾವಣೆ: ಕಾಂಗ್ರೆಸ್‌ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ

ಅನರ್ಹ ಶಾಸಕರ ಜೊತೆಗೆ ಸಿಎಂ ಸಭೆ

ಅನರ್ಹ ಶಾಸಕರ ಜೊತೆಗೆ ಸಿಎಂ ಸಭೆ

ಅನರ್ಹ ಶಾಸಕರೊಂದಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಅರಣ್ಯ ಭವನದಲ್ಲಿ ಸಭೆ ನಡೆಸುತ್ತಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಉಪಚುನಾವಣೆ ಘೋಷಣೆಯಾದ ಹಿನ್ನೆಲೆಯಲ್ಲಿ ಅನರ್ಹ ಶಾಸಕರಿಗೆ ಉಂಟಾಗಿರುವ ಆತಂಕವನ್ನು ದೂರಮಾಡಲು ಅವರು ಮುಂದಾಗಿದ್ದಾರೆ. ಚುನಾವಣಾ ಆಯುಕ್ತ ಸಂಜೀವ್ ಕುಮಾರ್ ಅವರು ಯಾವುದೇ ಕಾರಣಕ್ಕೂ ಅನರ್ಹ ಶಾಸಕರು ಚುನಾವಣೆ ಸ್ಪರ್ಧಿಸುವಂತಿಲ್ಲ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಈ ಕುರಿತು ಚರ್ಚೆ ನಡೆಸಲಾಗುತ್ತಿದೆ.

ಜೆಡಿಎಸ್‌ನಿಂದ ಕಾರ್ಯಕರ್ತರು ದೂರ ಉಳಿಯುತ್ತಿದ್ದಾರೆ

ಜೆಡಿಎಸ್‌ನಿಂದ ಕಾರ್ಯಕರ್ತರು ದೂರ ಉಳಿಯುತ್ತಿದ್ದಾರೆ

ಜೆಡಿಎಸ್‌ನಿಂದ ಕಾರ್ಯಕರ್ತರು ದೂರವಾಗುತ್ತಿದ್ದಾರೆ, ಅದರಿಂದ ತುಂಬಾ ನೋವಾಗಿದೆ. ಕರ್ನಾಟಕದಲ್ಲಿ ಜೆಡಿಎಸ್ ಹೋಗಲಿ ಎಂದು ತುಂಬಾ ಜನ ಕಾಯುತ್ತಿದ್ದಾರೆ ಆದರೆ ಹೈಕಮಾಂಡ್‌ನಲ್ಲಿ ಹಾಗಿಲ್ಲ. ನಮ್ಮದಂತೂ ಕೆಟ್ಟ ಸರ್ಕಾರವಾಗಿತ್ತು ಎಂದು ನಾನು ಒಪ್ಪಿಕೊಳ್ಳುತ್ತೇನೆ. ಕರ್ನಾಟಕದಲ್ಲಿ ಜೆಡಿಎಸ್ ಗೆಲಿಸಲು ನನ್ನಿಂದಾಗುವ ಎಲ್ಲಾ ಪ್ರಯತ್ನ ಮಾಡುತ್ತೇನೆ ಎಂದರು.

ಉಪಚುನಾವಣೆ ಘೋಷಣೆಯಾದ ವಿಧಾನಸಭೆ ಕ್ಷೇತ್ರಗಳ ಪಟ್ಟಿಉಪಚುನಾವಣೆ ಘೋಷಣೆಯಾದ ವಿಧಾನಸಭೆ ಕ್ಷೇತ್ರಗಳ ಪಟ್ಟಿ

English summary
Former chief minister HD Kumaraswamy has made it clear that the JDS will contest independently in the Karnataka by-election.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X