ಸೇವೆ v/s ಸುಲಿಗೆ: ಡಿ.ಕೆ.ಸುರೇಶ್‌ರವರೇ ನೀವೇನು? ಡಾ.ಸಿ.ಎನ್.ಮಂಜುನಾಥ್ ಅವರೇನು? ಹೆಚ್ಚು ಹೇಳುವ ಅಗತ್ಯವಿಲ್ಲ ಎಂದ ಜೆಡಿಎಸ್
ಬೆಂಗಳೂರು, ಮಾರ್ಚ್ 14: ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ ಕಾಂಗ್ರೆಸ್ ಹಾಗೂ ಮೈತ್ರಿ ಪಕ್ಷಗಳ ನಡುವೆ ಈ ಬಾರಿ ತೀವ್ರ ಪೈಪೋಟಿ ಏರ್ಪಡಲಿದೆ. ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಸದ್ಯ ಹಾಲಿ ಕಾಂಗ್ರೆಸ್ ಸಂಸದರಾದ ಡಿ ಕೆ ಸುರೇಶ್ ಅವರಿದ್ದು, ಮೈತ್ರಿ ಅಭ್ಯರ್ಥಿಯಾಗಿ ಜಯದೇವ ಹೃದ್ರೋಗ ಆಸ್ಪತ್ರೆಯ ಮಾಜಿ ನಿರ್ದೇಶಕ ಡಾ.ಸಿ.ಎನ್. ಮಂಜುನಾಥ್ ಅವರನ್ನ ಕಮಲ-ದಳ ನಾಯಕರು ಕಣಕ್ಕಿಳಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಡಿ ಕೆ ಸುರೇಶ್ ವಿರುದ್ಧ ರಾಜ್ಯ ಜೆಡಿಎಸ್ ಘಟಕ ಕಿಡಿಕಾರಿದ್ದರು, ಸರಣಿ ಟ್ವೀಟ್ ಮಾಡಿದೆ. ಡಿ.ಕೆ.ಸುರೇಶ್ ರವರೇ ನೀವೇನು? ಡಾ.ಸಿ.ಎನ್.ಮಂಜುನಾಥ್ ಅವರೇನು? ಎನ್ನುವುದು ರಾಜ್ಯಕ್ಕಷ್ಟೇ ಅಲ್ಲ, ಇಡೀ ಭಾರತ ದೇಶಕ್ಕೇ ಗೊತ್ತಿದೆ. ಅನಗತ್ಯವಾಗಿ ನಾಲಿಗೆ ಜಾರಿ ಗುಣ ಹಾಳು ಮಾಡಿಕೊಳ್ಳಬೇಡಿ ಎಂದು ಕಿಡಿಕಾರಿದೆ.

•ಡಾ.ಸಿ.ಎನ್.ಮಂಜುನಾಥ್ v/s ಡಿ.ಕೆ.ಸುರೇಶ್
•ನಿಸ್ವಾರ್ಥ vs ಸ್ವಾರ್ಥ!
•ಸೇವೆ v/s ಸುಲಿಗೆ!!
•ಒಳಿತು v/s ಕೆಡುಕು!!! ಇದಕ್ಕೆ ಮಿಗಿಲಾಗಿ ಹೆಚ್ಚಿನದನ್ನು ಹೇಳುವ ಅಗತ್ಯವಿಲ್ಲ.
ಆರೋಗ್ಯ ಕ್ಷೇತ್ರದಲ್ಲಿ ಎಣೆ ಇಲ್ಲದಷ್ಟು ಸೇವೆ ಮಾಡಿ ಲಕ್ಷಾಂತರ ಬಡಜನರ ಹೃದಯದಲ್ಲಿ ನೆಲೆಸಿರುವ ಡಾ.ಸಿ.ಎನ್.ಮಂಜುನಾಥ್ ಅವರ ಬಗ್ಗೆ ಅನಾರೋಗ್ಯಕರ ಅಪಪ್ರಚಾರದಲ್ಲಿ ನೀವು ನಿರತರಾಗಿದ್ದೀರಿ. ಸೋಲಿನ ದುಸ್ವಪ್ನದಿಂದ ನೀವು ಬಳಲುತ್ತಿರುವುದು ಸ್ಪಷ್ಟ. ದೇವೇಗೌಡರ ಕುಟುಂಬದ ಬಗ್ಗೆ ಮಾತನಾಡುವ ನೈತಿಕತೆ ನಿಮಗೆಲ್ಲಿದೆ? ಇಡೀ ಕಾಂಗ್ರೆಸ್ ನಿಮ್ಮ ಕಬಂಧಬಾಹುಗಲ್ಲಿ ಬಂಧಿಯಾಗಿದೆ. ಅಣ್ಣ ಡಿಸಿಎಂ, ತಮ್ಮ ಎಂಪಿ, ಸಹೋದರಿಯ ಗಂಡ ವಿಧಾನ ಪರಿಷತ್ ಸದಸ್ಯ, ಇನ್ನೊಬ್ಬರು ಕುಣಿಗಲ್ ಶಾಸಕ. ಇದೇನು ಫ್ಯಾಮಿಲಿ ಪಾಲಿಟಿಕ್ಸೋ ಅಥವಾ ಫ್ಯಾಮಿಲಿ ಪ್ಯಾಕೇಜೋ? ನೀವು ಏನೆಂದು ಕರೀತೀರಿ ಡಿ.ಕೆ.ಸುರೇಶ್ ರವರೇ? ಎಂದು ಪ್ರಶ್ನಿಸಿದ್ದಾರೆ.
•ಡಾ.ಸಿ.ಎನ್.ಮಂಜುನಾಥ್ v/s ಡಿ.ಕೆ.ಸುರೇಶ್
— Janata Dal Secular (@JanataDal_S) March 14, 2024
•ನಿಸ್ವಾರ್ಥ vs ಸ್ವಾರ್ಥ!
•ಸೇವೆ v/s ಸುಲಿಗೆ!!
•ಒಳಿತು v/s ಕೆಡುಕು!!!
ಇದಕ್ಕೆ ಮಿಗಿಲಾಗಿ ಹೆಚ್ಚಿನದನ್ನು ಹೇಳುವ ಅಗತ್ಯವಿಲ್ಲ. 1/6
ಅಳಿಯ ಜಾಣ ಆಗೋದು ತಪ್ಪಲ್ಲ. ನಿಮ್ಮಂತೆ ಇನ್ನೊಬ್ಬರ ಜೀವನಕ್ಕೆ ಎರವಾಗೋದು ತಪ್ಪಲ್ಲವೇ? ಡಾ.ಮಂಜುನಾಥ್ ಅವರು ಯಾವ ಪಕ್ಷದಿಂದ ಸ್ಪರ್ಧಿಸಿದರೆ ನಿಮಗೇನು? ಅವರು ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ನಿಮ್ಮ ಎದುರಾಳಿ, ಸೆಣಸಿ. ಅದು ಬಿಟ್ಟು ವ್ಯರ್ಥ ಆಲಾಪ ಏಕೆ ಸುರೇಶ್ ರವರೇ? ಎಂದು ಜೆಡಿಎಸ್ ರಾಜ್ಯ ಘಟಕ ಪ್ರಶ್ನಿಸಿದೆ.

ದೇವೇಗೌಡರ ಪಾರ್ಟಿ ಕಥೆ ಇರಲಿ, ನಿಮ್ಮ ಪಾರ್ಟಿ ಹಣೆಬರಹ ನೋಡಿಕೊಳ್ಳಿ. ದೇಶದ ಉದ್ದಗಲಕ್ಕೂ ಕಾಂಗ್ರೆಸ್ ಕರ್ಮಕಾಂಡದ ಬಗ್ಗೆ ಹೇಳುತ್ತಾ ಹೋದರೆ ಅದೇ ಮಹಾ ಕಾದಂಬರಿ ಆಗುತ್ತದೆ. ನಿಮ್ಮ ತಟ್ಟೆಯಲ್ಲಿ ಹೆಗ್ಗಣ ಬಿದ್ದಿದೆ, ಪಕ್ಕದವರ ತಟ್ಟೆಯಲ್ಲಿ ನೊಣ ಹುಡುಕುವ ದಡ್ಡತನವೇಕೆ? ಅಕ್ವರ್ಡ್ ಪದಕ್ಕೆ ನಿಮಗಿಂತ ಸರಿಯಾದ ಅನ್ವರ್ಥ ಇದೆಯೇ? ಏನಂತೀರಿ? ಎಂದು ಜೆಡಿಎಸ್ ರಾಜ್ಯ ಘಟಕ ಪ್ರಸ್ನಿಸಿದೆ.












Click it and Unblock the Notifications