ಡಿಕೆ ಶಿವಕುಮಾರ್ ಆಪ್ತಮಿತ್ರ ಚಿತ್ರದ ನಾಗವಲ್ಲಿಗಿಂತಲೂ ಬಹುಬೇಗ ಬದಲಾಗುತ್ತಿದ್ದಾರೆ : ಜೆಡಿಎಸ್ ವ್ಯಂಗ್ಯ

ಬೆಂಗಳೂರು, ಆಗಸ್ಟ್‌ 27: ಚಾಮುಂಡಿ ಬೆಟ್ಟಕ್ಕೆ ಎಲ್ಲ ಧರ್ಮದವರಿಗೂ ಪ್ರವೇಶವಿದೆ. ಎಲ್ಲಾ ಸಮಾಜದವರು ಚಾಮುಂಡಿ ಬೆಟ್ಟಕ್ಕೆ ಹೋಗುತ್ತಾರೆ, ದೇವರ ಬಳಿ ಪ್ರಾರ್ಥನೆ ಮಾಡಿಕೊಳ್ಳುತ್ತಾರೆ. ಇದು ಹಿಂದೂಗಳ ಆಸ್ತಿಯಲ್ಲ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಇದೀಗ ಭಾರೀ ವಿವಾದಕ್ಕೆ ಕಾರಣವಾಗಿದ್ದು, ಡಿ ಕೆ ಶಿವಕುಮಾರ್‌ ಅವರ ವಿರುದ್ದ ಜೆಡಿಎಸ್‌ ರಾಜ್ಯ ಘಟಕ ವ್ಯಂಗ್ಯವಾಡಿದೆ.

ಬಾನು ಮುಷ್ತಾಕ್ ಅವರಿಂದ ದಸರಾ ಉದ್ಘಾಟನಾ ವಿಚಾರವಾಗಿ ಜೆಡಿಎಸ್, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಕಾಲೆಳೆದಿದೆ. ತಾಯಿ ಚಾಮುಂಡಿ ಬೆಟ್ಟ ಏನು ಹಿಂದುಗಳ ಆಸ್ತಿಯಲ್ಲ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ಹೇಳಿಕೆಗೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದ್ದು, ಜೆಡಿಎಸ್ ತನ್ನ ಟ್ವೀಟ್ ಖಾತೆಯಲ್ಲಿ, ಚಾಮುಂಡಿ ಬೆಟ್ಟ ಹಿಂದೂ ಧರ್ಮದ ಆಸ್ತಿಯಲ್ಲ ಎಂಬ ಡಿಕೆ ಶಿವಕುಮಾ‌ರ್ ಹೇಳೀಕೆಗೆ ಆಪ್ತಮಿತ್ರ ಚಿತ್ರದಲ್ಲಿ ಗಂಗಾ ನಾಗವಲ್ಲಿಯಾಗಿ ಹಂತ ಹಂತವಾಗಿ ಬದಲಾಗುತ್ತಾಳೆ. ಆದರೆ ಡಿಕೆ ಶಿವಕುಮಾರ್ ನಾಗವಲ್ಲಿಗಿಂತಲೂ ಬಹುಬೇಗ ಬದಲಾಗುತ್ತಿದ್ದಾರೆ ಎಂದು ವ್ಯಂಗ್ಯವಾಡಿದೆ.

JDS launches Attack on DCM DK Shivakumar

ಚಾಮುಂಡಿ ಬೆಟ್ಟಕ್ಕೆ ಎಲ್ಲಾ ಧರ್ಮದವರಿಗೂ ಪ್ರವೇಶವಿದೆ: ಡಿ.ಕೆ.ಶಿವಕುಮಾರ್

ಚಾಮುಂಡಿ ಬೆಟ್ಟಕ್ಕೆ ಎಲ್ಲ ಧರ್ಮದವರಿಗೂ ಪ್ರವೇಶವಿದೆ. ಎಲ್ಲಾ ಸಮಾಜದವರು ಚಾಮುಂಡಿ ಬೆಟ್ಟಕ್ಕೆ ಹೋಗುತ್ತಾರೆ, ದೇವರ ಬಳಿ ಪ್ರಾರ್ಥನೆ ಮಾಡಿಕೊಳ್ಳುತ್ತಾರೆ. ಇದು ಹಿಂದೂಗಳ ಆಸ್ತಿಯಲ್ಲ" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ನಾವುಗಳು ಮಸೀದಿ, ದರ್ಗಾಗಳಿಗೆ, ಜೈನರ ಬಸದಿಗಳಿಗೆ, ಚರ್ಚ್, ಗುರುದ್ವಾರಗಳಿಗೆ ಹೋಗುತ್ತೇವೆ. ನಾವು ಗುರುದ್ವಾರಕ್ಕೆ ಹೋಗೋದನ್ನ ಯಾರಾದರೂ ತಪ್ಪಿಸಿದ್ದಾರಾ? ಹಿಂದೂ ದೇವಸ್ಥಾನಗಳಿಗೆ ಅವರುಗಳು ಬರುವುದನ್ನು ನಾವು ವಿರೋಧಿಸಿದ್ದೇವೆಯೇ? ಯಾವುದೇ ಶ್ರದ್ದಾ ಕೇಂದ್ರಗಳಿಗೆ ಯಾರು ಬೇಕಾದರೂ ಹೋಗಿ ಬರಬಹುದು ಎಂದರು.

ಎಷ್ಟೋ ಜನ ಹಿಂದೂಗಳು ಮುಸ್ಲಿಮರಾಗಿ, ಕ್ರಿಶ್ಚಿಯನ್ನರಾಗಿ ಹಾಗೂ ಬೇರೆ ಧರ್ಮದವರು ಹಿಂದೂಗಳಾಗಿ ಮತಾಂತರವಾಗಿಲ್ಲವೇ? ಮುಸ್ಲಿಮರು ಹಿಂದೂ ಧರ್ಮದ ಆಚರಣೆಗಳನ್ನು ಮಾಡುತ್ತಿಲ್ಲವೇ? ಅಯೋಧ್ಯೆ ರಾಮನಿಗೆ ಹಿಂದುಗಳು ಮಾತ್ರ ಬರಬೇಕು ಎಂದು ಏಕೆ ಬೋರ್ಡ್ ಹಾಕಿಲ್ಲ? ಬಿಜೆಪಿ ಸರ್ಕಾರ ಇದ್ದ ವೇಳೆ ಹಾಗೂ ಈಗ ಇಡೀ ದೇಶದಲ್ಲಿ ಹಜ್ ಕಮಿಟಿ, ಅಲ್ಪಸಂಖ್ಯಾತ ಇಲಾಖೆಗಳನ್ನು ಏಕೆ ರದ್ದು ಮಾಡಲಿಲ್ಲ? ಇದೆಲ್ಲವೂ ರಾಜಕೀಯ" ಎಂದು ತಿರುಗೇಟು ನೀಡಿದರು.

ನಮ್ಮದು ಜಾತ್ಯಾತೀತ ರಾಷ್ಟ್ರ. ನಮ್ಮ ಸಂವಿಧಾನದ ಮೂಲಕ ಎಲ್ಲರಿಗೂ ಅವಕಾಶ, ಸ್ವಾತಂತ್ರ್ಯ ಕಲ್ಪಿಸಲಾಗಿದೆ.‌ ಎಲ್ಲರಿಗೂ ಸಂವಿಧಾನದ ರಕ್ಷಣೆಯಿದೆ. ಎಲ್ಲರಿಗೂ ಅವರವರ ನಂಬಿಕೆ ಮೇಲೆ ವಿಶ್ವಾಸವಿದೆ. ಮುಸ್ಲಿಂ ಅಥವಾ ಕ್ರಿಶ್ಚಿಯನ್ ಹೆಣ್ಣು, ಹಿಂದು ಅಥವಾ ಇತರೇ ಧರ್ಮದ ಗಂಡಿಗೆ ಜನಿಸಿದ ಮಕ್ಕಳು ತಮಗೆ ಬೇಕಾದ್ದನ್ನು ಅನುಸರಿಸುತ್ತಾರೆ ಎಂದು ಡಿ ಕೆ ಶಿವಕುಮಾರ್‌ ಅವರು ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+