ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜೆಡಿಎಸ್ಸಿಗೆ ದೊಡ್ಡ ಸಲಾಂ ಹೊಡೆದ ಅಬ್ದುಲ್ ಅಜೀಂ

|
Google Oneindia Kannada News

ಬೆಂಗಳೂರು, ಅ.31 : ನಿವೃತ್ತ ಪೊಲೀಸ್ ಅಧಿಕಾರಿ ಮತ್ತು ಜೆಡಿಎಸ್ ಮಹಾಪ್ರಧಾನ ಕಾರ್ಯದರ್ಶಿ ಅಬ್ದುಲ್ ಅಜೀಂ ಜೆಡಿಎಸ್ ತೊರೆಯಲು ನಿರ್ಧರಿಸಿದ್ದಾರೆ. ಶೀಘ್ರವೇ ಬಿಜೆಪಿಗೆ ಸೇರ್ಪಡೆಗೊಳ್ಳುವುದಾಗಿ ಅಬ್ದುಲ್ ಅಜೀಂ ಹೇಳಿದ್ದಾರೆ.

ಕಳೆದ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಡಿ.ವಿ.ಸದಾನಂದ ಗೌಡರ ವಿರುದ್ಧ ಸ್ಪರ್ಧಿಸಿದ್ದ ಅಬ್ದುಲ್ ಅಜೀಂ ಸೋಲು ಅನುಭವಿಸಿದ್ದರು. ನಂತರ ಹಲವಾರು ಬಾರಿ ಜೆಡಿಎಸ್ ನಾಯಕರ ವಿರುದ್ಧ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದರು.

Abdul Azeem

ಶುಕ್ರವಾರ ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಅಬ್ದುಲ್ ಅಜೀಂ ಅವರು ಜೆಡಿಎಸ್ ಪಕ್ಷಕ್ಕೆ ರಾಜೀನಾಮೆ ನೀಡುತ್ತಿದ್ದು, ಶೀಘ್ರದಲ್ಲೇ ಬಿಜೆಪಿಗೆ ಸೇರ್ಪಡೆಗೊಳ್ಳಲಿದ್ದೇನೆ ಎಂದು ಹೇಳಿದ್ದಾರೆ. ನ.2ರಂದು ರಾಜೀನಾಮೆಯನ್ನು ಅಧಿಕೃತವಾಗಿ ನೀಡುವುದಾಗಿ ತಿಳಿಸಿದ್ದಾರೆ. [2014ರ ಚುನಾವಣಾ ಫಲಿತಾಂಶ ಇಲ್ಲಿದೆ]

ಬಿಜೆಪಿ ಸೇರ್ಪಡೆ ಕುರಿತು ಪಕ್ಷದ ನಾಯಕರೊಂದಿಗೆ ಮಾತುಕರೆ ನಡೆಸಿದ್ದೇನೆ. ರಾಜ್ಯದ ಕೋರ್ ಕಮಿಟಿ ನಾಯಕರು ಪಕ್ಷ ಸೇರ್ಪಡೆಗೆ ಒಪ್ಪಿಗೆ ನೀಡಿದ್ದಾರೆ ಎಂದು ಅಜೀಂ ಹೇಳಿದ್ದಾರೆ. ಈ ಮೂಲಕ ಜೆಡಿಎಸ್‌ನ ನಾಯಕರೊಬ್ಬರು ಪಕ್ಷ ತೊರೆಯಲು ಸಿದ್ಧರಾಗುತ್ತಿದ್ದಾರೆ.

ಹಲವಾರು ಬಾರಿ ಜೆಡಿಎಸ್ ರಾಷ್ಟ್ರಾಧ್ಯಕ್ಷ ಎಚ್.ಡಿ.ದೇವೇಗೌಡ ಮತ್ತು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಮಾತನಾಡಿದ್ದ ಅಬ್ದುಲ್ ಅಜೀಂ ಜೆಡಿಎಸ್ ನಾಯಕರ ಕೆಂಗಣ್ಣಿಗೆ ಗುರಿಯಾಗಿದ್ದರು. ಬಸವರಾಜ್ ಹೊರಟ್ಟಿ ಸೇರಿದಂತೆ ಹಲವು ನಾಯಕರು ಅಜೀಂ ಅವರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರು.

ಜೆಡಿಎಸ್ ನಾಯಕರ ನಿರ್ಧಾರದ ಕುರಿತು ಹಲವು ಬಾರಿ ಅವರು ದೇವೇಗೌಡರಿಗೆ ಪತ್ರ ಬರೆದು ಅಸಮಾಧಾನ ವ್ಯಕ್ತಪಡಿಸಿದ್ದರು. ಕೆಲವು ದಿನಗಳ ಹಿಂದೆ ನಡೆದ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆಗೂ ಗೈರು ಹಾಜರಾಗಿದ್ದರು. ಅಂತಿಮವಾಗಿ ಅವರು ಜೆಡಿಎಸ್ ತೊರೆಯುತ್ತಿರುವುದಾಗಿ ಘೋಷಿಸಿದ್ದಾರೆ.

ಅಂದಹಾಗೆ ಕಳೆದ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಉತ್ತರ ಕ್ಷೇತ್ರದಲ್ಲಿ 718,326 ಮತಗಳನ್ನು ಪಡೆದ ಡಿ.ವಿ.ಸದಾನಂದ ಗೌಡರು ಜಯಗಳಿಸಿದ್ದರೆ, ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಸಿ.ನಾರಾಯಣಸ್ವಾಮಿ 488,562 ಮತಗಳನ್ನು ಪಡೆದು ಎರಡನೇ ಸ್ಥಾನಗಳಿಸಿದ್ದರು, ಜೆಡಿಎಸ್‌ನಿಂದ ಸ್ಪರ್ಧಿಸಿದ್ದ ಅಬ್ದುಲ್ ಅಜೀಂ 92,681 ಮತಗಳನ್ನು ಪಡೆದು ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದರು. [ಮಾಹಿತಿ ಇಂಡಿಯಾ ವೋಟ್ಸ್]

English summary
Former Assistant Commissioner of Police and JDS Leader Abdul Azeem wish to join BJP. On Friday Abdul Azeem said, he will join BJP soon. For 2014 Lok Sabha election Abdul Azeem contested in Bangalore north constituency as JDS candidate.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X