ಡಿಕೆಶಿ ಭೇಟಿಯಾದ ಜೆಡಿಎಸ್ ನಾಯಕ ಆಯನೂರು ಮಂಜುನಾಥ!
ಬೆಂಗಳೂರು, ಆಗಸ್ಟ್ 20; ಕರ್ನಾಟಕ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ವಿಧಾನ ಪರಿಷತ್‌ನ ಮಾಜಿ ಸದಸ್ಯ, ಜೆಡಿಎಸ್ ನಾಯಕ ಆಯನೂರು ಮಂಜುನಾಥ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಭೇಟಿ ಮಾಡಿದ್ದಾರೆ. ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಆಯನೂರು ಮಂಜುನಾಥ ಸೋಲು ಕಂಡಿದ್ದರು.
ಭಾನುವಾರ ಬೆಂಗಳೂರಿನ ಸದಾಶಿವನಗರದಲ್ಲಿರುವ ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನಿವಾಸದಲ್ಲಿ ಆಯನೂರು ಮಂಜುನಾಥ ಭೇಟಿ ಮಾಡಿದರು. ಆಯನೂರು ಮಂಜುನಾಥ ಕಾಂಗ್ರೆಸ್ ಸೇರಲಿದ್ದಾರೆ? ಎಂಬ ಸುದ್ದಿಗಳ ನಡುವೆ ಈ ಭೇಟಿ ನಡೆದಿದ್ದು, ಕುತೂಹಲಕ್ಕೆ ಕಾರಣವಾಗಿದೆ.

ಬಿಜೆಪಿ ಮೂಲಕ ವಿಧಾನ ಪರಿಷತ್‌ಗೆ ಆಯ್ಕೆಯಾಗಿದ್ದ ಆಯನೂರು ಮಂಜುನಾಥ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅಲ್ಲದೇ ಬಿಜೆಪಿ ಬಿಟ್ಟು ಜೆಡಿಎಸ್ ಸೇರಿದ್ದರು. ಆದರೆ ಈಗ ಅವರು ಡಿ. ಕೆ. ಶಿವಕುಮಾರ್ ಭೇಟಿ ಮಾಡಿದ್ದಾರೆ.
ರಾಜ್ಯದಲ್ಲಿ ಆಪರೇಷನ್ ಹಸ್ತದ ಬಗ್ಗೆ ಭಾರೀ ಚರ್ಚೆ ನಡೆಯುತ್ತಿದೆ. ಇಂತಹ ಸಂದರ್ಭದಲ್ಲಿ ಜೆಡಿಎಸ್ ನಾಯಕರೊಬ್ಬರು ಕೆಪಿಸಿಸಿ ಅಧ್ಯಕ್ಷರನ್ನು ಭೇಟಿ ಮಾಡಿದ್ದಾರೆ. ಈ ಭೇಟಿ ಶಿವಮೊಗ್ಗದ ರಾಜಕೀಯ ಲೆಕ್ಕಾಚಾರವನ್ನು ಬದಲಾವಣೆ ಮಾಡಲಿದೆಯೇ? ಎಂದು ಕಾದು ನೋಡಬೇಕಿದೆ.
ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ; ಆಯನೂರು ಮಂಜುನಾಥ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಮಂಗಳೂರು, ಉಡುಪಿ, ತುಮಕೂರು, ಕೊಡಗು, ಶಿವಮೊಗ್ಗ ಹಾಗೂ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕು ಒಳಗೊಂಡ ನೈಋತ್ಯ ಪದವೀಧರ ಕ್ಷೇತ್ರದಿಂದ ಅವರು ಪರಿಷತ್‌ಗೆ ಆಯ್ಕೆಯಾಗಿದ್ದರು.
ಈ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯಬೇಕಿದೆ. ಉಪ ಚುನಾವಣೆಯಲ್ಲಿ ಆಯನೂರು ಮಂಜುನಾಥ ಕಾಂಗ್ರೆಸ್ ಅಭ್ಯರ್ಥಿಯಾಗಲಿದ್ದಾರೆ?. 2024ರ ಲೋಕಸಭೆ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಅವರು ಕಾಂಗ್ರೆಸ್ ಅಭ್ಯರ್ಥಿಯಾಗಲಿದ್ದಾರೆ? ಎಂಬ ಸುದ್ದಿಗಳು ಹಬ್ಬಿವೆ. ಆದರೆ ಈ ಕುರಿತು ಯಾವುದೇ ನಾಯಕರು ಅಧಿಕೃತ ಹೇಳಿಕೆ ಕೊಟ್ಟಿಲ್ಲ.
ಕೆ. ಎಸ್. ಈಶ್ವರಪ್ಪ ರಾಜಕೀಯ ನಿವೃತ್ತಿ ಘೋಷಣೆ ಮಾಡಿದ ಬಳಿಕ ಆಯನೂರು ಮಂಜುನಾಥ ಶಿವಮೊಗ್ಗ ನಗರ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಈ ಬಗ್ಗೆ ಬಹಿರಂಗವಾಗಿಯೂ ಹಲವು ಹೇಳಿಕೆಗಳನ್ನು ನೀಡಿದ್ದರು. ಆದರೆ ಬಿಜೆಪಿ ಈಶ್ವರಪ್ಪ ಆಪ್ತರಾದ ಚನ್ನಬಸಪ್ಪ (ಚೆನ್ನಿ) ಅವರನ್ನು ಅಭ್ಯರ್ಥಿಯಾಗಿ ಘೋಷಣೆ ಮಾಡಿತು.
ಆಯನೂರು ಮಂಜುನಾಥ ವಿಧಾನ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಬಳಿಕ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೂ ರಾಜೀನಾಮೆ ನೀಡಿದ್ದರು. ಬಳಿಕ ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಸಮ್ಮುಖದಲ್ಲಿ ಜೆಡಿಎಸ್ ಸೇರ್ಪಡೆಗೊಂಡಿದ್ದರು. ಪಕ್ಷ ಶಿವಮೊಗ್ಗ ನಗರದ ಅಭ್ಯರ್ಥಿಯಾಗಿಯೂ ಅವರನ್ನು ಘೋಷಣೆ ಮಾಡಿತ್ತು.
ಆಯನೂರು ಮಂಜುನಾಥ ಜೆಡಿಎಸ್ ಸೇರುತ್ತಿದ್ದಂತೆಯೇ ಶಿವಮೊಗ್ಗ ನಗರದ ಮಾಜಿ ಶಾಸಕ, ಕಾಂಗ್ರೆಸ್ ನಾಯಕ ಕೆ. ಬಿ. ಪ್ರಸನ್ನ ಕುಮಾರ್ ಸಹ ಜೆಡಿಎಸ್ ಸೇರಿದ್ದರು. ಶಿವಮೊಗ್ಗ ನಗರದಲ್ಲಿ ಬಿಜೆಪಿಗೆ ಹಿನ್ನಡೆಯಾಗಲಿದೆ ಎಂದು ಅಂದಾಜಿಸಲಾಗಿತ್ತು. ಆದರೆ ಚುನಾವಣೆಯಲ್ಲಿ ಆಯನೂರು ಮಂಜುನಾಥ ಸೋಲು ಕಂಡಿದ್ದರು.
ಈ ಬಾರಿಯ ಚುನಾವಣೆಯಲ್ಲಿ ಆಯನೂರು ಮಂಜುನಾಥ 8,863 ಮತಗಳನ್ನು ಮಾತ್ರ ಪಡೆದು ಹೀನಾಯ ಸೋಲು ಕಂಡಿದ್ದರು. ಬಿಜೆಪಿ ಅಭ್ಯರ್ಥಿ ಚನ್ನಬಸಪ್ಪ 96,490 ಮತಗಳನ್ನು ಪಡೆದು ಗೆಲುವು ಕಂಡರು. ಕಾಂಗ್ರೆಸ್‌ನ ಹೆಚ್. ಸಿ. ಯೋಗೇಶ್ 68,816 ಮತಗಳನ್ನು ಪಡೆದು 2ನೇ ಸ್ಥಾನಗಳಿಸಿದ್ದರು.
ಡಿ. ಕೆ. ಶಿವಕುಮಾರ್ ಭೇಟಿಯಾದ ಆಯನೂರು ಮಂಜುನಾಥ ಕಾಂಗ್ರೆಸ್ ಸೇರಿ 2024ರ ಲೋಕಸಭೆ ಚುನಾವಣೆಗೆ ಶಿವಮೊಗ್ಗದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಲಿದ್ದಾರೆಯೇ? ಅಥವ ವಿಧಾನ ಪರಿಷತ್ ಚುನಾವಣಾ ಕಣಕ್ಕಿಳಿಯಲಿದ್ದಾರೆಯೇ? ಎಂದು ಕಾದು ನೋಡಬೇಕಿದೆ.
-
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್‌ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ












Click it and Unblock the Notifications