ಹೆಚ್‌ ಡಿ ದೇವೇಗೌಡರ ಆಪ್ತ ಹೆಚ್.ಟಿ ರಾಜೇಂದ್ರ ನಿಧನ; ರಾಜಕೀಯ ಗಣ್ಯರಿಂದ ಸಂತಾಪ

ಬೆಂಗಳೂರು, ಜುಲೈ 14: ಕರ್ನಾಟಕದಲ್ಲಿ ಕಳೆದ ಎರಡು ತಿಂಗಳನಿಂದ ಹೃದಯಾಘಾತದಿಂದ ಸಾವನ್ನಪ್ಪುವವರ ಸಂಖ್ಯೆ ಹೆಚ್ಚಾಗಿದೆ. ಮಾಜಿ ಪ್ರಧಾನಿ ಹೆಚ್‌ ಡಿ ದೇವೇಗೌಡರ ಆಪ್ತ ಹಾಗೂ ಜೆಡಿಎಸ್‌ ಮುಖಂಡರಾದ ಚಿಕ್ಕಮಗಳೂರಿನ ಹೆಚ್.ಟಿ ರಾಜೇಂದ್ರ (72) ಹೃದಯಾಘಾತದಿಂದ ನಿಧನರಾಗಿದ್ದಾರೆ.

NR ಪುರ ತಾಲೂಕಿನ ಮುತ್ತಿನಕೊಪ್ಪ ಗ್ರಾಮದಲ್ಲಿ JDS ಪಕ್ಷದ ನಾಯಕ ಹೆಚ್.ಟಿ ರಾಜೇಂದ್ರ ಕೊನೆಯುಸಿರೆಳೆದಿದ್ದಾರೆ. ಹೃದಯಾಘಾತದಿಂದ ಮೃತಪಟ್ಟಿರುವ JDS ಮುಖಂಡ ರಾಜೇಂದ್ರ ಅವರು HD ದೇವೇಗೌಡರ ಕುಟುಂಬದ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದರು. ಜೆಡಿಎಸ್‌ ವರಿಷ್ಠ ಹಾಗೂ ಮಾಜಿ ಪ್ರಧಾನಿ ಹೆಚ್‌ ಡಿ ದೇವೇಗೌಡರ ಆಪ್ತ ರಾಜೇಂದ್ರ ಅವರ ದಿಢೀರ್ ಸಾವಿನ ಸುದ್ದಿ ಕೇಳಿ ಬೆಂಬಲರಿಗೆ ಆಘಾತಕ್ಕೆ ಒಳಗಾಗಿದ್ದಾರೆ. ಜೆಡಿಎಸ್ ಮುಖಂಡನ ನಿಧನಕ್ಕೆ ಮಾಜಿ ಪ್ರಧಾನಿ ಹೆಚ್‌ ಡಿ ದೇವೇಗೌಡರು ಹಾಗೂ ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ.

JDS leader H T Rajendra passes away

ಇನ್ನೂ ದೇವೇಗೌಡರ ಆಪ್ತರಾದ ರಾಜೇಂದ್ರ ಅವರು ಜೆಡಿಎಸ್ ಪಕ್ಷದಿಂದ MLA ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ರು. ಶೃಂಗೇರಿ ಕ್ಷೇತ್ರದಿಂದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ರು. 72ವರ್ಷದ ಹೆಚ್‌ ಡಿ ರಾಜೇಂದ್ರ ಅವರಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದೆ. ನೋವಿನಿಂದ ರಾಜೇಂದ್ರ ಅವರು ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದೆದೆ. ರಾಜೇಂದ್ರ ಅವರ ಸಾವಿನ ಸುದ್ದಿ ಕೇಳಿ ಬೆಂಬಲಿಗರು ಆಘಾತಕ್ಕೆ ಒಳಗಾಗಿದ್ದಾರೆ. ರಾಜೇಂದ್ರ ಅವರ ಮೃತಪಟ್ಟಿದ್ದು, ಟ್ವೀಟ್ ಮೂಲಕ ಮಾಜಿ ಪ್ರಧಾನಿ ಹೆಚ್‌ ಡಿ ದೇವೇಗೌಡ್ರು ಹಾಗೂ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ.

ಹೆಚ್ ಡಿ ದೇವೇಗೌಡರಿಂದ ಸಂತಾಪ

ಜೆಡಿಎಸ್ ಪಕ್ಷದ ರಾಜ್ಯ ಉಪಾಧ್ಯಕ್ಷರು, ಶೃಂಗೇರಿ ವಿಧಾನಸಭಾ ಕ್ಷೇತ್ರದ ಹಿರಿಯ ಮುಖಂಡರು, ರೈತಪರ ಹೋರಾಟಗಾರರು ಹಾಗೂ ಆತ್ಮೀಯರಾಗಿದ್ದ ಶ್ರೀ ಹೆಚ್.ಟಿ ರಾಜೇಂದ್ರ ಅವರ ನಿಧನ ಬಹಳ ನೋವುಂಟು ಮಾಡಿದೆ. ಶ್ರೀಯುತರ ಆತ್ಮಕ್ಕೆ ಚಿರಶಾಂತಿ ಕೋರುತ್ತಾ, ಅವರ ಕುಟುಂಬ ಸದಸ್ಯರಿಗೆ ದುಃಖ ಭರಿಸುವ ಶಕ್ತಿ ನೀಡಲೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಮಾಜಿ ಪ್ರಧಾನಿ ಹೆಚ್‌ ಡಿ ದೇವೇಗೌಡರು ಸಂತಾಪವನ್ನ ಸೂಚಿಸಿದ್ದಾರೆ.

ಹೆಚ್‌ ಡಿ ಕುಮಾರಸ್ವಾಮಿ ಅವರಿಗೆ ಸಂತಾಪ

ಮಾಜಿ ಪ್ರಧಾನಮಂತ್ರಿಗಳಾದ ಶ್ರೀ ಹೆಚ್.ಡಿ.ದೇವೇಗೌಡರ ಆಪ್ತರು, ಜೆಡಿಎಸ್‌ ಪಕ್ಷದ ರಾಜ್ಯ ಉಪಾಧ್ಯಕ್ಷರು, ಶೃಂಗೇರಿ ವಿಧಾನಸಭೆ ಕ್ಷೇತ್ರದ ಹಿರಿಯ ನೇತಾರರು ಆಗಿದ್ದ ಶ್ರೀ ಹೆಚ್.ಟಿ. ರಾಜೇಂದ್ರ ಅವರ ನಿಧನದ ವಾರ್ತೆ ಕೇಳಿ ತೀವ್ರ ಆಘಾತವಾಗಿದೆ ಎಂದು ಹೆಚ್‌ ಡಿ ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ. ಅತ್ಯಂತ ನಿಷ್ಠಾವಂತ ಸೇನಾನಿಯಾಗಿ, ತಳಮಟ್ಟದಿಂದ ಸಂಘಟನೆಯನ್ನು ಬಲಿಷ್ಠವಾಗಿ ಕಟ್ಟುವಲ್ಲಿ ಅವಿರತವಾಗಿ ಶ್ರಮಿಸಿದ್ದ ಅವರು, ತಮ್ಮ ಇಡೀ ಬದುಕನ್ನು ಪಕ್ಷಕ್ಕೇ ಸಮರ್ಪಿಸಿಕೊಂಡಿದ್ದರು. ಶ್ರೀಯುತರ ಅಗಲಿಕೆ ಬಹುದೊಡ್ಡ ನಷ್ಟ ಹಾಗೂ ವೈಯಕ್ತಿಕವಾಗಿ ನಾನು ಬಹಳ ದುಃಖಿತನಾಗಿದ್ದೇನೆ. ಶ್ರೀ ರಾಜೇಂದ್ರ ಅವರ ಆತ್ಮಕ್ಕೆ ಸದ್ಗತಿ ಸಿಗಲಿ ಹಾಗೂ ಈ ದುಃಖವನ್ನು ಭರಿಸುವ ಶಕ್ತಿಯನ್ನು ಕುಟುಂಬಕ್ಕೆ, ಅಭಿಮಾನಿಗಳಿಗೆ ಭಗವಂತ ದಯಪಾಲಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+