ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಯಡಿಯೂರಪ್ಪ ಬಜೆಟ್; ಎಚ್ ಡಿ ಕುಮಾರಸ್ವಾಮಿ ಏನಂದ್ರು?

|
Google Oneindia Kannada News

ಬೆಂಗಳೂರು, ಮಾರ್ಚ್ 5; ವಿಧಾನಸೌಧದಲ್ಲಿ ಇಂದು ಮಂಡನೆಯಾದ 2020-21 ನೇ ಸಾಲಿನ ಬಜೆಟ್ ಬಗ್ಗೆ ಮಾಜಿ ಮುಖ್ಯಮಂತ್ರಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಅವರು ಪ್ರತಿಕ್ರಿಯಿಸಿದ್ದಾರೆ.

ಗುರುವಾರ ವಿಧಾನಸೌಧದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರೋಗ್ಯ ಕ್ಷೇತ್ರಕ್ಕೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಬಜೆಟ್‌ನಲ್ಲಿ ಘೋಷಿಸಿರುವ ಅನುದಾನ ಸಾಕಾಗುವುದಿಲ್ಲ. ಆದರಲ್ಲಿ ಆಸ್ಪತ್ರೆಗಳಿಗೆ ಸುಣ್ಣ ಬಣ್ಣ ಬಳಿಯುವುದಕ್ಕೂ ಸಾಧ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಟೀಕಿಸಿದರು.

ಕರ್ನಾಟಕ ಬಜೆಟ್ 2020-21; ಯಾರು ಏನಂದ್ರು? ಪ್ರಮುಖರ ಪ್ರತಿಕ್ರಿಯೆಗಳು ಇಲ್ಲಿವೆಕರ್ನಾಟಕ ಬಜೆಟ್ 2020-21; ಯಾರು ಏನಂದ್ರು? ಪ್ರಮುಖರ ಪ್ರತಿಕ್ರಿಯೆಗಳು ಇಲ್ಲಿವೆ

ವಿಧಾನಸೌಧದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಲವು ಸವಾಲುಗಳ ನಡುವೆಯೂ ರಾಜ್ಯದ ತೆರಿಗೆ ಸಂಗ್ರಹ ಪರಿಸ್ಥಿತಿ ಉತ್ತಮವಾಗಿದೆ. ಕಳೆದ ಬಾರಿ ನಾವು ಬಜೆಟ್‌ ಮಂಡನೆ ವೇಳೆ ನಾವು ನಿರೀಕ್ಷೆ ಮಾಡಿದಷ್ಟು ಶೇ 14ರಷ್ಟು ತೆರಿಗೆ ಹೆಚ್ಚಿಗೆ ಸಂಗ್ರಹವಾಗಿದೆ ಎಂದು ಹೇಳಿದರು.

Karnataka Budget 2020-2021 JDS Leader HD Kumaraswamy Reaction

ನಮ್ಮ ಸರ್ಕಾರದ ಅವಧಿಯಲ್ಲಿ ಜಾರಿಯಲ್ಲಿದ್ದ ಯೋಜನೆಗಳನ್ನ ಮುಂದುವರಿಸಲಾಗಿದೆ. ಅಲ್ಲದೆ ಈ ಬಾರಿ ಮಂಡಿಸಲಾದ ಘೋಷಣೆಗಳಲ್ಲಿ ಸ್ಪಷ್ಟತೆ ಇಲ್ಲ. ಬಿಜೆಪಿಯವರಿಂದ ಹೊಸ ಯೋಜನೆಗಳನ್ನು ಜಾರಿಗೆ ತರಲು ಸಾಧ್ಯವಿಲ್ಲ ಎಂದು ತಿಳಿಸಿದರು.

ಕೇಂದ್ರದಿಂದ ರಾಜ್ಯಕ್ಕೆ ಸಿಗಬೇಕಾದ ತೆರಿಗೆ ಪಾಲು ಸಿಗುತ್ತೊ ಇಲ್ಲವೊ? ಎಂಬ ಅನುಮಾನ ರಾಜ್ಯ ಸರ್ಕಾರಕ್ಕೆ ಇದೆ ಎಂದು ಹೇಳಿದರು. ಸರ್ಕಾರದ ಆರ್ಥಿಕ ಪರಿಸ್ಥಿತಿ ಉತ್ತಮವಾಗಿಲ್ಲ ಎಂಬುದನ್ನು ಯಡಿಯೂರಪ್ಪನವರೇ ಹೇಳಿಕೊಂಡಿದ್ದಾರೆ. ಹಾಗಾಗಿ ಇದೊಂದು ನಿರಾಶಾದಾಯಕ ಬಜೆಟ್ ಎಂದು ವ್ಯಂಗ್ಯವಾಡಿದರು.

English summary
Karnataka Budget 2020-2021 JDS Leader HD Kumaraswamy Reaction. This budget one of the worst budget in the history of karnataka budget, HD Kumaraswamy said.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X