ನಮ್ಮದು ಸಣ್ಣ ಪಕ್ಷ, ಅವರು ಇಂಟರ್ನ್ಯಾಷನಲ್ ಪಕ್ಷದ ಜೊತೆ ಹೋಗಿದ್ದಾರೆ: ವೈ ಎಸ್‌ ವಿ ದತ್ತ ವಿರುದ್ದ ಹೆಚ್ಡಿಕೆ ಕಿಡಿ

ಚಿಕ್ಕಮಗಳೂರು,ಏಪ್ರಿಲ್7: ರಾಜಕೀಯ ಭವಿಷ್ಯಕ್ಕಾಗಿ ಕರ್ನಾಟಕ ಜೆಡಿಎಸ್‌ನ ಪ್ರಮುಖ ನಾಯಕ ಮತ್ತು ಮಾಜಿ ಪ್ರಧಾನಿ ಎಚ್‌ ಡಿ ದೇವೇಗೌಡ ಅವರ ಆಪ್ತರಾಗಿದ್ದ ವೈಎಸ್‌ವಿ ದತ್ತಾ ಅವರು ಜೆಡಿಎಸ್‌ ತೊರೆದು ಕಾಂಗ್ರೆಸ್‌ ಸೇರಿದ್ದರು. ಈ ಬಾರಿಯ ವಿಧಾನಸಭಾ ಚುನಾವಣಗೆ ಟಿಕೆಟ್‌ ಕಡೂರು ವಿಧಾನಸಭಾ ಕ್ಷೇತ್ರ ಟಿಕೆಟ್‌ ಸಿಗುತ್ತದೆ ಎಂಬ ನಿರೀಕ್ಷೆಯಿಂದಾಗಿ ವೈಎಸ್‌ವಿ ದತ್ತಾ ಅವರು ಕಾಂಗ್ರೆಸ್‌ ಸೇರಿದ್ದರು.

ಈಗಾಗಲೇ 124 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್‌ ಹೈಕಮಾಂಡ್‌ ಗುರುವಾರ 42 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನ ಬಿಡುಗಡೆ ಮಾಡಿದ್ದು, ಕಡೂರು ಕ್ಷೇತ್ರಕ್ಕೆ ಕಾಂಗ್ರೆಸ್‌ ಆನಂದ್‌ ಎಂಬುವವರಿಗೆ ಟಿಕೆಟ್‌ ಘೋಷಿಸಿದ್ದು, ವೈಎಸ್‌ವಿ ದತತ್ತಾ ಅವರಿಗೆ ಟಿಕೆಟ್‌ ಮಿಸ್‌ ಆಗಿದೆ.

JDS Leader HD Kumaraswamy Speaks About YSV Datta Re Joining JDS

ಇನ್ನೂ ಅನ್ಯ ಪಕ್ಷಗಳಿಂದ ಬಂದ ಹಲವು ನಾಯಕರಿಗೆ ಕಾಂಗ್ರೆಸ್‌ ಹೈಕಮಾಂಡ್‌ ಟಿಕೆಟ್‌ ನ್ನ ನೀಡಿದ್ದದು, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕುರಿತು ಹೇಳಿಕೆ ನೀಡಿದ್ದಕ್ಕೆ ದತ್ತಾ ಅವರಿಗೆ ಟಿಕೆಟ್‌ ಕೈತಪ್ಪಿದೆ ಎಂದು ಹೇಳಲಾಗುತ್ತಿದೆ.

ಈ ಕುರಿತು ಚಿಕ್ಕಮಗಳೂರಿನ ಕಡೂರು ಕ್ಷೇತ್ರದಲ್ಲಿ ವೈ ಎಸ್‌ ವಿ ದತ್ತ ಅವರಿಗೆ ಟಿಕೆಟ್‌ ಕೈ ತಪ್ಪಿದ ಕುರಿತು ಮಾಜಿ ಮುಖ್ಯಮಂತ್ರಿ ಎಚ್‌ ಡಿ ಕುಮಾರಸ್ವಾಮಿ ಮಾತನಾಡಿ, ನಮ್ಮ ಹಳೇ ಲೀಡರ್ ನನ್ನ ಬಗ್ಗೆ ಬಹಳ ಚಾರ್ಜ್ ಮಾಡಿದ್ದಾರೆ, ಈಗ ಅದು ಬೇಡ. ವೈಎಸ್​ವಿ ದತ್ತಾ ಜೆಡಿಎಸ್​​ ಪಕ್ಷಕ್ಕೆ ದೋಖಾ ಮಾಡಿ ಹೋಗಿದ್ದಾರೆ. ಹೆಚ್​​.ಡಿ.ದೇವೇಗೌಡರು ಸ್ವಂತ ಮಗನಿಗಿಂತ ಹೆಚ್ಚಾಗಿ ನೋಡಿಕೊಂಡಿದ್ದರು ಎಂದು ವೈ ಎಸ್‌ ವಿ ದತ್ತಾ ವಿರುದ್ದ ಕಿಡಿಕಾರಿದರು.

JDS Leader HD Kumaraswamy Speaks About YSV Datta Re Joining JDS

ವೈಎಸ್​ವಿ ದತ್ತಾರನ್ನು ಎಂಎಲ್​ಸಿ ಮಾಡದಿದ್ದರೆ ಕಡೂರು ಜನ ಗುರುತಿಸುತ್ತಿದ್ದರೇ? ಯಾರು ಇಲ್ಲದಾಗ ಪಕ್ಷದ ಗೌರವ ಉಳಿಸಲು ಧನಂಜಯ್ ಬಂದಿದ್ದಾರೆ ಎಂದರು. ಅಲ್ಲದೆ, ವಿಧಾನಸೌಧದಲ್ಲಿ 2ನೇ ಸೀಟಲ್ಲಿ ನನ್ನ ಪಕ್ಕ ಕೂರುತ್ತಿದ್ದರು. ನಾನು ಮಾಡಿದ ಅನ್ಯಾಯವಾದರೂ ಏನು? ಎಂದು ಪ್ರಶ್ನಿಸಿದ್ದಾರೆ.

ಕಡೂರು ಕ್ಷೇತ್ರದಲ್ಲಿ ಕಾಂಗ್ರೆಸ್‌ ಟಿಕೆಟ್‌ ಕೈತಪ್ಪಿದ ಕಾರಣ ವೈಎಸ್‌ವಿ ದತ್ತಾ ಅವರು ಮತ್ತೆ ಜೆಡಿಎಸ್‌ ಸೇರುತ್ತಾರೆ ಎಂಬ ಚರ್ಚೆಗಳು ಶುರುವಾಗಿವೆ. ಇದಕ್ಕೆ ಸಂಬಂಧಪಟ್ಟಂತೆ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಅವರು ಪ್ರತಿಕ್ರಿಯಿಸಿದ್ದು, ವೈಎಸ್‌ವಿ ದತ್ತಾ ಅವರನ್ನು ಮತ್ತೆ ಪಕ್ಷಕ್ಕೆ ಸೇರಿಸಿಕೊಳ್ಳಲ್ಲ ಎಂಬುದನ್ನು ಪರೋಕ್ಷವಾಗಿ ಹೇಳಿದ್ದಾರೆ.

ನಮ್ಮದು ಸಣ್ಣ ಪಕ್ಷ, ವೈಎಸ್‌ವಿ ದತ್ತಾ ಅವರು ಇಂಟರ್‌ನ್ಯಾಷನಲ್ ಪಕ್ಷದ ಜೊತೆ ಹೋಗಿದ್ದಾರೆ. ನಮ್ಮ ಸಣ್ಣ ಪಕ್ಷದಲ್ಲಿ ಅವರಿಗೆ ಏನು ಸಿಗುತ್ತದೆ. ಅವರಿಗೆ ಎಲ್ಲಿದೆ ಜಾಗ. ವೈಎಸ್‌ವಿ ದತ್ತಾ ಅವರ ಬಗ್ಗೆ ನಾನು ಏನು ಚರ್ಚೆ ಮಾಡಲ್ಲ ಎಂದು ಕುಮಾರಸ್ವಾಮಿ ಟಾಂಗ್‌ ನೀಡಿದ್ದಾರೆ.

ಹಾಸನ ಟಿಕೆಟ್‌ ಗೊಂದಲ ವಿಚಾರ ಮಾತನಾಡಿದ ಅವರು, ನನ್ನ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ. ಸಾಮಾನ್ಯ ಕಾರ್ಯಕರ್ತನಿಗೆ ಟಿಕೆಟ್ ನೀಡಲಾಗುವುದು. ನಿಷ್ಠಾವಂತ ಕಾರ್ಯಕರ್ತರಿಗೆ ಟಿಕೆಟ್ ನೀಡಿ ಗೆಲ್ಲುವ ಶಕ್ತಿ ಜೆಡಿಎಸ್‌ಗೆ ಇದೆ. ಈ ವಿಚಾರದಲ್ಲಿ ನಿರ್ಧಾರ ಎಂದಿಗೂ ಬದಲಾಗಲ್ಲ. ಕಾರ್ಯಕರ್ತರನ್ನು ಕಣಕ್ಕಿಳಿಸಬೇಕು ಎಂಬುದು ದೇವೇಗೌಡರ ಆಸೆ ಕೂಡ ಆಗಿದೆ ಎಂದು ತಿಳಿಸಿದರು.

ವೈ ಎಸ್‌ ವಿ ದತ್ತಾ ಮುಂದಿನ ನಡೆ ಏನು?

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಸಲಹೆ ಮೇರೆಗೆ ಕಾಂಗ್ರೆಸ್‌ ಪಕ್ಷವನ್ನ ಸೇರಿದ್ದ ವೈಎಸ್‌ ವಿ ದತ್ತಾ ಅವರಿಗೆ ಕಡೂರಿನಿಂದ ಕಾಂಗ್ರೆಸ್‌ ಟಿಕೆಟ್‌ ಕೈತಪ್ಪಿದ್ದು, ಬೆಂಬಲಿಗರೊಂದಿಗೆ ಸಭೆ ನಡೆಸಿ ಮುಂದಿನ ತಿರ್ಮಾನವನ್ನ ಪ್ರಕಟಿಸುವುದಾಗಿ ವೈ ಎಸ್‌ ವಿ ದತ್ತ ಅವರು ಹೇಳಿದ್ದಾರೆ. ಇತ್ತ ರೇವಣ್ಣ ಮತ್ತು ಪ್ರಜ್ವಲ್ ಅವರು ದತ್ತಾ ಅವರನ್ನು ಮರಳಿ ಜೆಡಿಎಸ್​ಗೆ ಕರೆತರುವ ಪ್ರಯತ್ನ ನಡೆಸುತ್ತಿದ್ದಾರೆ ಎನ್ನಲಾಗುತ್ತಿದೆ.

ಇನ್ನೂ ವೈ ಎಸ್‌ ವಿ ದತ್ತಾ ವಿರುದ್ದ ಜೆಡಿಎಸ್‌ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಎಚ್‌ ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದು, ವೈ ಎಸ್‌ ವಿ ದತ್ತಾ ಅವರು ಯಾವುದೇ ಪಕ್ಷಕ್ಕೆ ಸೇರದೆ ಪಕ್ಷೇತರವಾಗಿ ಕಣಕ್ಕಿಳಿಯುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+