ದಿನಬೆಳಗಾದರೆ ಬಿಜೆಪಿಯವರಿಗೆ ನಮ್ಮ ಕುಟುಂಬದ ಜಪ ಮಾಡುವುದೆ ಕೆಲಸ: ಎಚ್.ಡಿ.ರೇವಣ್ಣ

ಹಾಸನ ಕ್ಷೇತ್ರಕ್ಕೆ ಬಂದು ಬಿಜೆಪಿಗರು ಬರೆದುಕೊಟ್ಟ ಭಾಷಣವನ್ನ ಓದಿ ಹೋಗಿದ್ದಾರೆ ಎಂದ ಎಚ್ ಡಿ ರೇವಣ್ಣ ಹೇಳಿದ್ದಾರೆ.

ಹಾಸನ,ಫೆಬ್ರವರಿ24: ಚುನಾವಣೆ ಹತ್ತಿದವಾಗುತ್ತಿದ್ದಂತೆ ರಾಜ್ಯ ರಾಜಕಾರಣದಲ್ಲಿ ಆರೋಪ ಪ್ರತ್ಯಾರೋಪಗಳು ಹೆಚ್ಚಾಗಿದ್ದು, ಪದೇ ಪದೇ ಬಿಜೆಪಿ ನಾಯಕರು ಜೆಡಿಎಸ್ ನ ಫ್ಯಾಮಿಲಿ ಪಾರ್ಟಿ ಎಂದು ಟೀಕಿಸುತ್ತಿರುವುದಕ್ಕೆ ಮಾಜಿ ಸಚಿವ ಎಚ್. ಡಿ ರೇವಣ್ಣ ಕಿಡಿಕಾರಿದ್ದಾರೆ.

ದಿನಬೆಳಗಾದರೆ ಬಿಜೆಪಿಯವರಿಗೆ ನಮ್ಮ ಕುಟುಂಬದ ಜಪ ಮಾಡುವುದೆ ಕೆಲಸವಾಗಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಯಾವ ಮುಖ ಹೊತ್ತುಕೊಂಡು ಹಾಸನ ಜಿಲ್ಲೆಗೆ ಬಂದಿದ್ದರು. ನಮ್ಮ ಕುಟುಂಬದ ವಿರುದ್ಧ ಮಾತನಾಡೋ ಯಾವ ನೈತಿಕತೆಯೂ ಅವರಿಗಿಲ್ಲ ಎಂದು ಎಚ್.ಡಿ ರೇವಣ್ಣ ಕಿಡಿಕಾರಿದ್ದಾರೆ.

JDS Leader HD Revanna Slams BJP National President JP Nadda

ಹಾಸನ ಜಿಲ್ಲೆಗೆ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಏನು ಎಂದು ಅವರು ಪ್ರಶ್ನೆ ಮಾಡಿದ್ದಾರೆ. ಹಾಸನ ಜಿಲ್ಲೆಯ ಅಭಿವೃದ್ದಿ ಬಗ್ಗೆ ಜನರಿಗೆ ಗೊತ್ತಿದೆ. ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರು ಹಾಗೂ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರ ಹಾಸನ ಜಿಲ್ಲೆಯ ಜಿಲ್ಲೆಯ ಅಭಿವೃದ್ದಿಗೆ ಅಪಾಯ ಕೊಡುಗೆ ನೀಡಿದ್ದಾರೆ. ಇನ್ನೂ ಬೆಂಗಳೂರು-ಹಾಸನ, ಕಡೂರು-ಚಿಕ್ಕಮಗಳೂರು ರೈಲ್ವೆ ಮಾರ್ಗ ಮಾಡಿದ್ದು ರೇವಣ್ಣನವರ ಅಪ್ಪ. ದೇವೇಗೌಡರು ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ವಿರುದ್ದ ಕಿಡಿಕಾರಿದರು.

ಹಾಸನ ಕ್ಷೇತ್ರಕ್ಕೆ ಬಂದು ಬಿಜೆಪಿಗರು ಬರೆದುಕೊಟ್ಟ ಭಾಷಣವನ್ನ ಓದಿ ಹೋಗಿದ್ದಾರೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಹಾಸನ-ಬೇಲೂರು-ಚಿಕ್ಕಮಗಳೂರು ರೈಲ್ವೆ ಮಾರ್ಗಕ್ಕೆ ಮಂಜೂರಾತಿ ನೀಡಿದ್ದೇವೆ ಎಂದು ನಡ್ಡಾ ಹೇಳಿದ್ದಾರೆ. ನಡ್ಡಾ ಯಾರೊ ಬರೆದು ಕೊಟ್ಟಭಾಷಣವನ್ನು ಓದಿ ಹೋಗುವುದು ಬೇಡ. ರೈಲ್ವೆ ಮಾರ್ಗ ಮಂಜೂರಾತಿ ಮಾಡಿದ್ದು ಬಿಜೆಪಿ ಎಂಬುದಕ್ಕೆ ದಾಖಲೆಗಳಿದ್ದರೆ ಅದನ್ನ ಇಟ್ಟಕೊಂಡು ಮಾತನಾಡಲಿ ಎಂದು ಹೇಳಿದರು.

ಕಳೆದ 3 ವರ್ಷಗಳಿಂದ ಬಿಜೆಪಿ ಸರ್ಕಾರದಿಂದ ಹಾಸನ ಜಿಲ್ಲೆಯಲ್ಲಿ ಯಾವ ಅಭಿವೃದ್ಧಿ ಆಗಿದೆ?. ಬಿಜೆಪಿ ಎಂದರೆ ಕಾಮಗಾರಿ ತಡೆ ಹಿಡಿಯುವ ಪಕ್ಷ ಎಂದು ಎಚ್ ಡಿ ರೇವಣ್ಣ ಆಕ್ರೋಶ ವ್ಯಕ್ತಪಡಿಸಿದರು.

ಈಗಾಗಲೇ ಜೆಡಿಎಸ್ 93 ಅಭ್ಯರ್ಥಿಗಳನ್ನ ಒಳಗೊಂಡ ಮೊದಲ ಪಟ್ಟಿಯನ್ನ ಬಿಡುಗಡೆ ಮಾಡಿದ್ದು, ದಳಪತಿಳಿಗೆ ಹಾಸನ ಜಿಲ್ಲೆಯ ಅಭ್ಯರ್ಥಿಗಳ ಟಿಕೆಟ್ ಹಂಚಿಕೆ ವಿಚಾರವಾಗಿ ಸಾಕಷ್ಟು ಗೊಂದಲವನ್ನ ಹುಟ್ಟು ಹಾಕಿದ್ದು, ಈಗಾಗಲೇ ದೇವೇಗೌಡರು ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಈ ಕುರಿತು ಚರ್ಚೆ ನಡೆಸಿದ್ದಾರೆ.

ರೇವಣ್ಣ ನವರ ಪತ್ನಿ, ಭಾವನಿ ರೇವಣ್ಣ ಹಾಸನಕ್ಕೆ ನಾನೇ ಅಭ್ಯರ್ಥಿ ಎಂದು ಘೋಷಿಸಿದ ಬಳಿಕ ಇದೀಗ ಕ್ಷೇತ್ರದ ಸ್ಥಳೀಯ ದೇವಸ್ಥಾನಗಳಿಗೆ ತೆರಳಿ ಪೂಜೆ ಸಲ್ಲಿಸುವ ಮೂಲಕ ಕ್ಷೇತ್ರದಲ್ಲಿ ಪ್ರಚಾರ ಕಾರ್ಯವನ್ನ ಆರಂಭಿಸಿದ್ದಾರೆ. ಭಾವನಿ ರೇವಣ್ಣ ಅವರಿಗೆ ಮಾಜಿ ಸಚಿವ ಎಚ್ ಡಿ ರೇವಣ್ಣ ಅವರು ಸಾಥ್ ನೀಡಿದ್ದಾರೆ. ಇನ್ನೂ ಹಾಸನ ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಸ್ವರೂಪ್ ಕೂಡ ತನ್ನ ಬೆಂಬಲಿಗರೊಂದಿಗೆ ಕ್ಷೇತ್ರದಲ್ಲಿ ಪ್ರಚಾರ ಕಾರ್ಯವನ್ನ ಆರಂಭಿಸಿದ್ದಾರೆ.

ಈಗಾಗಲೇ ಹಾಸನ ವಿಧಾನಸಭಾ ಕ್ಷೇತ್ರ ಅಭ್ಯರ್ಥಿ ಆಯ್ಕೆ ವಿಚಾರ ಜೆಡಿಎಸ್ ನಾಯಕರಿಗೆ ದೊಡ್ಡ ತಲೆನೋವಾಗಿದ್ದು, ಈಗಾಗಲೇ ಮೊದಲ ಪಟ್ಟಿ ಬಿಡುಗಡೆ ಮಾಡಿರುವ ಜೆಡಿಎಸ್ , ಮಾರ್ಚ್ ಮೊದಲ ವಾರದಂದು ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನ ಬಿಡುಗಡೆಗೊಳಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+