'ಡಿಕೆ ಶಿವಕುಮಾರ್‌ ಅವರೇ ನಿಮ್ಮನ್ನ ನಂಬಿ ಬಂದು ಮಂತ್ರಿ ಆಗಲು ರೆಡಿ ಮಾಡಿಸಿದ್ದ ಸೂಟುಕೋಟುಗಳು ಧೂಳು ತಿನ್ನುತ್ತಿವೆ'

ಬೆಂಗಳೂರು, ಮೇ 31: ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರೇ ದೇವೇಗೌಡ ಅವರ ಬಗ್ಗೆ ಮಾತನಾಡುವ ಮುನ್ನ ನಿಮ್ಮ ನಾಲಿಗೆಯ ಸ್ವಾಸ್ಥ್ಯವನ್ನು ಪರೀಕ್ಷೆ ಮಾಡಿಕೊಳ್ಳಿ. ಮಾತಿನಲ್ಲಿ ಎಚ್ಚರ ಇರದಿದ್ದರೆ ಅದು ನಿಮಗೇ ಮುಳುವು ಎಂದು ನಿಖಿಲ್ ಕುಮಾರಸ್ವಾಮಿ ಅವರು ತಿರುಗೇಟು ನೀಡಿದರು.

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಮಾನ್ಯ ಡಿ.ಕೆ ಶಿವಕುಮಾರ್ ಅವರೇ ಭವಿಷ್ಯ, ಅವಕಾಶ ಮತ್ತು ನಂಬಿಕೆ ಬಗ್ಗೆ ಮಾತನಾಡುವ ಮಾನ್ಯ , 2023ರ ವಿಧಾನಸಭೆ ಚುನಾವಣೆಯ ಇತಿಹಾಸದ ಪುಟಗಳನ್ನೊಮ್ಮೆ ತಿರುಗಿಸಿ ನೋಡಿ. ನಂಬಿಕೆ ಮತ್ತು ವಿಶ್ವಾಸರ್ಹತೆ ಬಗ್ಗೆ ನೀವು ಮಾತನಾಡಿರುವುದು ಭೂತದ ಬಾಯಲ್ಲಿ ಭಗವದ್ಗೀತೆ ಹೇಳಿದ ಹಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

JDS leader Nikhil Kumaraswamy launched a scathing attack on DCM DK Shivakumar

ನಿಮನ್ನು ನಂಬಿ ಬಂದ ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವದಿಯನ್ನ ಮಂತ್ರಿ ಮಾಡಲಿಲ್ಲ, ಪಾಪ.. ಹಾಸನ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಗೆದ್ದ ಏಕೈಕ ಶಾಸಕ ಶ್ರೀ ಶಿವಲಿಂಗೇಗೌಡರನ್ನು ಸಹ ಮಂತ್ರಿ ಮಾಡಲಿಲ್ಲ, ಗುಬ್ಬಿ ಶಾಸಕರನ್ನು ಮಂತ್ರಿ ಮಾಡುವುದು ಇರಲಿ, ಅವರ ಶ್ರೀಮತಿ ಅವರನ್ನು ಡೇರಿ ಅಧ್ಯಕ್ಷರಾಗಿ ಮಾಡಲಿಲ್ಲ. ಇನ್ನು ರಾಮನಗರ ಜಿಲ್ಲೆಯ ಇಬ್ಬರು ಕಾಂಗ್ರೆಸ್ ಶಾಸಕರಂತೂ ಮಂತ್ರಿ ಆಗಲು ರೆಡಿ ಮಾಡಿಸಿದ್ದ ಸೂಟುಕೋಟುಗಳು ಮೂಲೆಗೆ ಬಿದ್ದು ಧೂಳು ತಿನ್ನುತ್ತಿವೆ ಎಂದು ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷರಾದ ನಿಖಿಲ್‌ ಕುಮಾರಸ್ವಾಮಿ ಅವರು ಕಿಡಿಕಾರಿದ್ದಾರೆ.

ಇನ್ನು ನಿಮ್ಮ ಬಗ್ಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮುಡಾ ಟ್ರ್ಯಾಪ್! ಸಚಿವರು, ದಲಿತ ಸಮಾಜದ ಹಿರಿಯರಾದ ಗೃಹ ಸಚಿವರಾದ ಡಾ. ಜಿ ಪರಮೇಶ್ವರ್ ಅವರಿಗೆ ಚಿನ್ನದ ಟ್ರ್ಯಾಪ್, ಹಿರಿಯ ಸಚಿವರಾದ ರಾಜಣ್ಣ ಅವರಿಗೆ ಹನಿಟ್ರ್ಯಾಪ್!! ಇದೆಂಥಾ ವಿಶ್ವಾಸಾರ್ಹತೆ? ಇನ್ನು ನಿಮ್ಮ ಹಿಟ್ ಲಿಸ್ಟ್ ನಲ್ಲಿ ಇರುವ ಉಳಿಕೆ ಕಾಂಗ್ರೆಸ್ ನಾಯಕರನ್ನು ದೇವರೇ ರಕ್ಷಣೆ ಮಾಡಬೇಕು ಎಂದು ಡಿಸಿಎಂ ಡಿ ಕೆ ಶಿವಕುಮಾರ್‌ ಅವರ ವಿರುದ್ಧ ನಿಖಿಲ್‌ ಕುಮಾರಸ್ವಾಮಿ ಖಾರವಾಗಿ ಪ್ರಶ್ನಿಸಿದ್ದರೆ.

ರಾಜಕೀಯವಾಗಿ ಗುದ್ದಾಡೋಣ. ಹೋರಾಟ ಮಾಡೋಣ. ಆರೋಗ್ಯಕರವಾಗಿ ಆಲೋಚನೆ ಮಾಡಿ. ಮುತ್ಸದ್ಧಿಯಾಗಿ ಬೆಳೆಯುವ ಕನಿಷ್ಠ ಪ್ರಯತ್ನವನ್ನಾದರೂ ಮಾಡಿ. ಈ ರಾಷ್ಟ್ರ ಕಂಡ ಅಪರೂಪದ ನಾಯಕರಾದ ದೇವೇಗೌಡ ಅವರ ಬಗ್ಗೆ ಮಾತನಾಡುವ ಮುನ್ನ ನಿಮ್ಮ ನಾಲಿಗೆಯ ಸ್ವಾಸ್ಥ್ಯವನ್ನು ಪರೀಕ್ಷೆ ಮಾಡಿಕೊಳ್ಳಿ. ಮಾತಿನಲ್ಲಿ ಎಚ್ಚರ ಇರದಿದ್ದರೆ ಅದು ನಿಮಗೇ ಮುಳುವು ಎಂದು ನಿಖಿಲ್‌ ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+