ಕಾಂಗ್ರೆಸ್ ಪಂಚ ಗ್ಯಾರಂಟಿಗೆ ಆಯಸ್ಸು ಕಡಿಮೆಯಾಗಿದೆ: ನಿಖಿಲ್‌ ಕುಮಾರಸ್ವಾಮಿ ವ್ಯಂಗ್ಯ

ಬೆಂಗಳೂರು, ಫೆಬ್ರವರಿ 26: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಅಗತ್ಯತೆ ಬಗ್ಗೆ ಚರ್ಚೆ ಆಗಬೇಕು. ನಂತರವೇ ಏನೆಂದು ಗೊತ್ತಾಗಲಿದೆ ಎನ್ನುವ ಗೃಹ ಸಚಿವ ಡಾ.ಜಿ ಪರಮೇಶ್ವರ್‌ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿರುವ ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಕಾಂಗ್ರೆಸ್ ಪಂಚ ಗ್ಯಾರಂಟಿಗಳಿಗೆ ಆಯಸ್ಸು ಕಡಿಮೆಯಾಗಿದೆ ಎಂದು ವ್ಯಂಗ್ಯವಾಡಿದ್ದಾರೆ.

ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಅವರು, ಕಾಂಗ್ರೆಸ್ ಪಂಚ ಗ್ಯಾರಂಟಿಗಳಿಗೆ ಆಯಸ್ಸು ಕಡಿಮೆಯಾಗಿದೆ. ಸ್ವತಃ ಮಾನ್ಯ ಗೃಹ ಸಚಿವ ಡಾ.ಜಿ ಪರಮೇಶ್ವರ್‌ ಅವರೇ ಗ್ಯಾರಂಟಿಯಿಂದ ಹೊರೆಯಾಗುತ್ತಿರುವುದು ನಿಜ ಎಂದು ಒಪ್ಪಿಕೊಂಡಿದ್ದಾರೆ. ಈಗಾಗಲೇ ಪರಿಷ್ಕರಣೆ ನೆಪದಲ್ಲಿ ಲಕ್ಷಾಂತರ ಬಿಪಿಎಲ್‌ ಕಾರ್ಡ್‌ ರದ್ದುಪಡಿಸಿ ಬಡವರ ತುತ್ತು ಅನ್ನಕ್ಕೆ ಕಲ್ಲುಹಾಕಲಾಗಿದೆ ಎಂದರು.

JDS Leader Nikhil Kumaraswamy Sarcasm Against Congress Guarantee Scheme

ಮತ್ತೊಂದು ಕಡೆ ಗ್ಯಾರಂಟಿಗಳಿಗೆ ಮುಂದುವರೆಯುವ ಗ್ಯಾರಂಟಿ ಇಲ್ಲ. ಮೂರು ನಾಲ್ಕು ತಿಂಗಳಿಗೊಮ್ಮೆ ಹಣ ಜಮಾ ಮಾಡುವ ಗೃಹಲಕ್ಷ್ಮಿ ಮತ್ತು ಯುವನಿಧಿ ಫಲಾನುಭವಿಗಳಿಗೆ ಸಹಾಯ ಮಾಡ್ತಿಲ್ಲ. ಮಾನ್ಯ ಸಿಎಂ ಸಿದ್ದರಾಮಯ್ಯ ಅವರು ಬಜೆಟ್ ಅಧಿವೇಶನದಲ್ಲಿ ಗ್ಯಾರಂಟಿ ಜಮಾ ದಿನಾಂಕ ತಿಳಿಸಬೇಕೆಂದು ಕಳಕಳಿಯಾಗಿ ಮನವಿ ಮಾಡುತ್ತೇನೆ ನಿಖಿಲ್‌ ಕುಮಾರಸ್ವಾಮಿ ತಿಳಿಸಿದ್ದಾರೆ.

ಬಜೆಟ್ ಅಧಿವೇಶನದಲ್ಲಿ ಗ್ಯಾರಂಟಿ ಕ್ಯಾಲೆಂಡರ್ ಬಿಡುಗಡೆ ಮಾಡಬೇಕು

ಇನ್ನು ಕಾಂಗ್ರೆಸ್ ಪಕ್ಷವು ಗೃಹಲಕ್ಷ್ಮಿ ಮತ್ತು ಯುವ ನಿಧಿ ಸೇರಿದಂತೆ 5 ಗ್ಯಾರಂಟಿ ಯೋಜನೆಗಳ ಭರವಸೆಯೊಂದಿಗೆ ಅಧಿಕಾರಕ್ಕೆ ಏರಿತ್ತು, ಪ್ರತೀ ತಿಂಗಳು ಹಣವನ್ನು ನೇರವಾಗಿ ಫಲಾನುಭವಿಗಳ ಖಾತೆಗೆ ಜಮಾ ಮಾಡುವುದಾಗಿ ಹೇಳಿತ್ತು. ಮುಖ್ಯಮಂತ್ರಿಗಳು ಹಾಗು ಹಣಕಾಸು ಸಚಿವರು ಆಗಿರುವ ಸಿದ್ದರಾಮಯ್ಯ ಅವರು ₹4 ಲಕ್ಷ ಕೋಟಿ ಗಾತ್ರದ ಬಜೆಟ್ ರೂಪಿಸುವಲ್ಲಿ ನಿರತರಾಗಿದ್ದಾರೆ. ಆದರೆ ವಿಪರ್ಯಾಸವೆಂದರೆ, ಗ್ಯಾರಂಟಿ ಯೋಜನೆಗಳ ಫಲಾನುಭವಿಗಳು ಹಣಕ್ಕಾಗಿ 3-4 ತಿಂಗಳು ಕಾಯಬೇಕಾಗಿದೆ. ಯಾವುದಾದರೂ ಚುನಾವಣೆಗಳು ಸಮೀಪಿಸಿದಾಗ ಮಾತ್ರ ಮ್ಯಾಜಿಕ್ ಆಗಿ ಹಣ ಜಮವಾಗುತ್ತದೆ ಎಂದು ವ್ಯಂಗ್ಯವಾಡಿದ್ದಾರೆ.

JDS Leader Nikhil Kumaraswamy Sarcasm Against Congress Guarantee Scheme

ಪ್ರತಿ ಬಾರಿಯೂ ತಾಂತ್ರಿಕ ಸಮಸ್ಯೆಯ ನೆಪ ಒಡ್ಡುವುದು ನಿಜಕ್ಕೂ ಹಾಸ್ಯಾಸ್ಪದವಾಗಿದೆ. ಬೆಂಗಳೂರು, ಭಾರತದ ಸಿಲಿಕಾನ್ ಕ್ಯಾಪಿಟಲ್, ಜಾಗತಿಕ ತಂತ್ರಜ್ಞಾನ ಕೇಂದ್ರದಲ್ಲಿ ಡಿಬಿಟಿ ವರ್ಗಾವಣೆ ಸರಿಪಡಿಸಲಾಗುವುದಿಲ್ಲವೇ? ಮುಂಬರುವ ಬಜೆಟ್ ಅಧಿವೇಶನದಲ್ಲಿ ಗ್ಯಾರಂಟಿ ಕ್ಯಾಲೆಂಡರ್ ಬಿಡುಗಡೆ ಮಾಡಿ, ಹಣ ಜಮಾ ಮಾಡುವ ದಿನಾಂಕವನ್ನು ನಿಗದಿ ಮಾಡಿ, ಸಮಯಕ್ಕೆ ಸರಿಯಾಗಿ ಡಿಬಿಟಿ ವರ್ಗಾವಣೆ ಖಚಿತಪಡಿಸಬೇಕೆಂದು ಒತ್ತಾಯಿಸುತ್ತೇನೆ.
ವಿಳಂಬ ಸಾಕು, ಕಾರಣ ಬೇಡ, ಕಟಾ ಕಟ್ ಹಣ ವರ್ಗಾಯಿಸಿ ಎಂದು ನಿಖಿಲ್‌ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+